ನೀನು ಬಲಾತ್ಕಾರ ಮಾಡುವದೂ ನಿನ್ನ ಕೈಕೆಲಸವನ್ನು ಅಲಕ್ಷ್ಯಮಾಡುವದೂ ದುಷ್ಟರ ಆಲೋ ಚನೆಯ ಮೇಲೆ ಪ್ರಕಾಶಿಸುವದೂ ನಿನಗೆ ಒಳ್ಳೆಯದೆ ನಿಸುತ್ತದೆಯೋ?
Cross references
ಇಗೋ, ದೇವರು ಪರಿಶುದ್ಧನನ್ನು ತಿರಸ್ಕರಿಸು ವದಿಲ್ಲ; ಕೆಡುಕರಿಗೆ ಆತನು ಸಹಾಯ ಮಾಡುವದಿಲ್ಲ.
ಇದೊಂದು ವಿಷಯ ಆದದರಿಂದ ನಾನು ಅದನ್ನು ಹೇಳಿದ್ದೇನೆ. ಪರಿಪೂರ್ಣರನ್ನೂ ಕೆಟ್ಟ ವರನ್ನೂ ಆತನು ನಾಶಮಾಡುತ್ತಾನೆ.
ಲೋಕವು ಕೆಟ್ಟವನ ಕೈಯಲ್ಲಿ ಕೊಡಲ್ಪಟ್ಟಿದೆ. ಅದರ ನ್ಯಾಯಾಧಿಪತಿಗಳ ಮುಖಗ ಳನ್ನು ಆತನು ಮುಚ್ಚುತ್ತಾನೆ. ಇಲ್ಲವಾದರೆ ಆತನು ಎಲ್ಲಿರುತ್ತಿದ್ದನೋ? ಯಾರಾಗಿರುತ್ತಿದ್ದನೋ?
ನೀನು ಕರೆಯುವಿ, ನಾನು ನಿನಗೆ ಉತ್ತರಕೊಡುವೆನು; ನಿನ್ನ ಕೈಕೆಲಸವನ್ನು ಬಯಸುವಿ.
ದೇವರಿಗೆ ವಿರೋಧವಾಗಿ ನಿನ್ನ ಆತ್ಮವನ್ನು ತಿರುಗಿಸಿ ನಿನ್ನ ಬಾಯೊಳಗಿಂದ ಮಾತುಗಳನ್ನು ಹೊರಡಿಸುತ್ತೀ ಯಲ್ಲಾ.
ಇಗೋ, ಅವರ ಸುಖವು ಅವರ ಕೈಯಲ್ಲಿ ಇಲ್ಲ; ದುಷ್ಟರ ಆಲೋಚನೆ ನನಗೆ ದೂರ ವಾಗಿದೆ.
ಆದರೆ ಆತನು ಅವರ ಮನೆಗಳನ್ನು ಒಳ್ಳೇದರಿಂದ ತುಂಬಿದ್ದಾನೆ; ಆದರೂ ದುಷ್ಟರ ಆಲೋಚನೆಯು ನನಗೆ ದೂರವಾಗಿದೆ.
ಯೋಬನು--ನಾನು ನೀತಿವಂತನಾಗಿದ್ದೇನೆ, ದೇವರು ನನ್ನ ನ್ಯಾಯತೀ ರ್ಪನ್ನು ತೆಗೆದುಬಿಟ್ಟನು.
ಅರಸನಿಗೆ ದುಷ್ಟನೆಂದೂ ಪ್ರಧಾನರಿಗೆ ಬಲಹೀನರೆಂದೂ ಹೇಳುವದುಂಟೋ?
ನೀತಿವಂತರಿಂದ ತನ್ನ ಕಣ್ಣುಗಳನ್ನು ತೊಲಗಿಸುವದಿಲ್ಲ. ಅವರು ಅರಸುಗಳ ಸಂಗಡ ಸಿಂಹಾಸನದಲ್ಲಿ ಇದ್ದಾರೆ. ಹೌದು, ಆತನು ಅವರನ್ನು, ಎಂದೆಂದಿಗೂ ಸ್ಥಿರಪಡಿಸುತ್ತಾನೆ. ಅವರು ಉನ್ನತಕ್ಕೇರಿಸಲ್ಪಟ್ಟಿದ್ದಾರೆ.
ಆದರೆ ನೀನು ದುಷ್ಟನ ನ್ಯಾಯವನ್ನು ಪೂರೈಸಿದಿ; ನ್ಯಾಯವೂ ತೀರ್ಪೂ ನಿನ್ನನ್ನು ಹಿಡಿಯುವವು.
ಸರ್ವಶಕ್ತನ ಸಂಗಡ ವಾದಿಸುವವನು ಆತನಿಗೆ ಶಿಕ್ಷಣ ಕೊಡುವನೋ? ದೇವರನ್ನು ಗದರಿಸು ವವನು ಅದಕ್ಕೆ ಉತ್ತರಕೊಡಲಿ ಎಂದು ಹೇಳಿದನು.
ನೀನು ನನ್ನ ನ್ಯಾಯತೀರ್ವಿಕೆಯನ್ನು ತೆಗೆದುಹಾಕುವಿಯೋ? ನೀನು ನೀತಿವಂತ ನಾಗುವ ಹಾಗೆ ನನ್ನನ್ನು ಖಂಡಿಸುವಿಯೋ?
ಕರ್ತನು ಬಡವರನ್ನು ಲಾಲಿಸಿ ತನ್ನ ಸೆರೆಯವರನ್ನು ತಿರಸ್ಕರಿಸುವದಿಲ್ಲ.
ಕರ್ತನು ನನಗಿ ರುವದನ್ನು ಸಿದ್ದಿಗೆ ತರುತ್ತಾನೆ; ಕರ್ತನೇ, ನಿನ್ನ ಕೃಪೆಯು ಎಂದೆಂದಿಗೂ ಅದೆ; ನಿನ್ನ ಸ್ವಂತ ಕೈಕೆಲಸಗಳನ್ನು ತೊರೆದುಬಿಡಬೇಡ.
ಆದರೆ ಈಗ ಓ ಕರ್ತನೇ, ನಮ್ಮ ತಂದೆಯು ನೀನೇ; ನಾವು ಮಣ್ಣು, ನೀನು ನಮ್ಮ ಕುಂಬಾರನು; ನಾವೆ ಲ್ಲರೂ ನಿನ್ನ ಕೈಕೆಲಸವೇ.