Home Bibles ಯೋಬ 10:8 · ಕನ್ನಡ ಬೈಬಲ್
ಯೋಬ 10:8 · ಕನ್ನಡ ಬೈಬಲ್

ನಿನ್ನ ಕೈಗಳು ನನ್ನನ್ನು ನಿರ್ಮಿಸಿ ನನ್ನನ್ನು ಸುತ್ತಲೆಲ್ಲಾ ರೂಪಿಸಿದವು. ಆದಾಗ್ಯೂ ನೀನು ನನ್ನನ್ನು ನಾಶಮಾಡುತ್ತೀ.

Cross references

ಆದಿಕಾಂಡ 6:6

ಕರ್ತನು ಭೂಮಿಯ ಮೇಲೆ ಮನುಷ್ಯನನ್ನು ಉಂಟುಮಾಡಿದ್ದಕ್ಕೋಸ್ಕರ ಪಶ್ಚಾತ್ತಾಪ ಪಟ್ಟು ತನ್ನ ಹೃದಯದಲ್ಲಿ ನೊಂದುಕೊಂಡನು.

ಯೋಬ 9:17

ಆತನು ಬಿರುಗಾಳಿಯಿಂದ ನನ್ನನ್ನು ಚೂರು ಮಾಡು ತ್ತಾನೆ. ನನ್ನ ಗಾಯಗಳನ್ನು ಕಾರಣವಿಲ್ಲದೆ ಹೆಚ್ಚಿಸು ತ್ತಾನೆ.

ಯೋಬ 10:3

ನೀನು ಬಲಾತ್ಕಾರ ಮಾಡುವದೂ ನಿನ್ನ ಕೈಕೆಲಸವನ್ನು ಅಲಕ್ಷ್ಯಮಾಡುವದೂ ದುಷ್ಟರ ಆಲೋ ಚನೆಯ ಮೇಲೆ ಪ್ರಕಾಶಿಸುವದೂ ನಿನಗೆ ಒಳ್ಳೆಯದೆ ನಿಸುತ್ತದೆಯೋ?

ಕೀರ್ತನೆಗಳು 119:73

ನಿನ್ನ ಕೈಗಳು ನನ್ನನ್ನು ರೂಪಿಸಿ ನಿರ್ಮಿಸಿದವು; ನಿನ್ನ ಆಜ್ಞೆಗಳನ್ನು ಕಲಿತುಕೊಳ್ಳುವ ಹಾಗೆ ಗ್ರಹಿಕೆಯನ್ನು ನನಗೆ ಕೊಡು.

ಕೀರ್ತನೆಗಳು 139:15

ನಾನು ಮರೆ ಯಲ್ಲಿ ಮಾಡಲ್ಪಟ್ಟಾಗಲೂ ಭೂಮಿಯ ಅಧೋ ಭಾಗಗಳಲ್ಲಿ ವಿಚಿತ್ರವಾಗಿ ಮಾಡಲ್ಪಟ್ಟಾಗಲೂ ನನ್ನ ಅಸ್ತಿತ್ವವು ನಿನಗೆ ಮರೆಯಾಗಿರಲಿಲ್ಲ.

ಯೆಶಾಯ 43:7

ನನ್ನ ಹೆಸರಿ ನಿಂದ ಕರೆಯಲ್ಪಟ್ಟ ಪ್ರತಿಯೊಬ್ಬನನ್ನೂ ಬರಮಾಡು ವೆನು; ಅವನನ್ನು ನನ್ನ ಮಹಿಮೆಗಾಗಿ ಸೃಷ್ಟಿಸಿದ್ದೇನೆ, ನಾನು ಅವನನ್ನು ನಿರ್ಮಿಸಿದ್ದೇನೆ: ಹೌದು, ನಾನು ಅವನನ್ನು ಉಂಟುಮಾಡಿದ್ದೇನೆ.

ಯೆರೆಮಿಯ 18:3

ಓ ಯೆಹೂದದ ಅರಸರೇ, ಯೆರೂಸಲೇಮಿನ ನಿವಾಸಿಗಳೇ, ಕರ್ತನ ವಾಕ್ಯವನ್ನು ಕೇಳಿರಿ. ಇಸ್ರಾಯೇಲಿನ ದೇವರಾಗಿರುವ ಸೈನ್ಯಗಳ ಕರ್ತನು ಹೀಗನ್ನುತ್ತಾನೆ--ಇಗೋ, ನಾನು ಈ ಸ್ಥಳದ ಮೇಲೆ ಕೇಡನ್ನು ಬರಮಾಡುತ್ತೇನೆ; ಅದನ್ನು ಕೇಳುವವ ರೆಲ್ಲರ ಕಿವಿಗಳು ಗುಂಯ್‌ಗುಟ್ಟುವವು.

Interlinear

Choose Theme