ಕಾಡುಕತ್ತೆಯ ಮರಿಯ ಹಾಗೆ ಮನುಷ್ಯನು ಹುಟ್ಟಿ ದರೂ ವ್ಯರ್ಥ ಮನುಷ್ಯನು ಜ್ಞಾನಿಯಾಗಿರುವನು.
Cross references
ಜ್ಞಾನಿಗಳನ್ನು ಅವರ ಯುಕ್ತಿಯಲ್ಲಿ ಹಿಡಿಯುತ್ತಾನೆ--ಮೂರ್ಖರ ಆಲೋಚನೆ ಉರುಳಿ ಬೀಳುವದು.
ಹುಲ್ಲು ಇದ್ದಲ್ಲಿ ಕಾಡು ಕತ್ತೆಯು ಕೂಗುವದೋ? ಇಲ್ಲವೆ ಮೇವು ಇದ್ದಲ್ಲಿ ಎತ್ತು ಅರಚುತ್ತದೋ?
ನಿಸ್ಸಂದೇಹವಾಗಿ ನೀವೇ ಆ ಜನರು; ನಿಮ್ಮ ಸಂಗಡಲೇ ಜ್ಞಾನವು ಸಾಯುವದು.
ನಿರ್ಮಲನಾಗುವ ಹಾಗೆ ಮನುಷ್ಯನು ಎಷ್ಟರವನು? ನೀತಿವಂತನಾಗಿರುವ ಹಾಗೆ ಸ್ತ್ರೀಯಿಂದ ಹುಟ್ಟಿದವನು ಯಾರು?
ಆತನು ಮನುಷ್ಯನಿಗೆ ಹೇಳಿದ್ದೇ ನಂದರೆ--ಇಗೋ, ಕರ್ತನ ಭಯವೇ ಜ್ಞಾನ; ಕೇಡಿನಿಂದ ತೊಲಗುವದೇ ಗ್ರಹಿಕೆ.
ಕಾಡುಕತ್ತೆಯನ್ನು ಬಿಡುಗಡೆ ಮಾಡಿ ಕಳುಹಿಸಿದ ವನಾರು? ಕಾಡುಕತ್ತೆಯ ಸಂಕೋಲೆಗಳನ್ನು ಬಿಡಿಸಿದ ವನಾರು?
ಇಗೋ, ನಾನು ಅಕ್ರ ಮದಲ್ಲಿ ರೂಪಿಸಲ್ಪಟ್ಟೆನು; ಪಾಪದಲ್ಲಿ ನನ್ನ ತಾಯಿ ನನ್ನನ್ನು ಗರ್ಭಧರಿಸಿದಳು.
ನಿಶ್ಚಯವಾಗಿ ಅಲ್ಪರು ವ್ಯರ್ಥರೇ, ಘನವಂತರು ಸುಳ್ಳೇ; ಅವರೆಲ್ಲರನ್ನು ತ್ರಾಸಿನಲ್ಲಿ ತೂಗಿದರೆ ಧೂಳಿ ಗಿಂತಲೂ ಲಘುವಾಗಿದ್ದಾರೆ.
ಆಗ ನಾನು ಮೂರ್ಖನಾಗಿ ಏನೂ ತಿಳಿಯದೆ ನಿನ್ನ ಮುಂದೆ ಪಶು ವಿನಂತೆ ಇದ್ದೆನು.
ಇದನ್ನು ಪಶುಪ್ರಾಯದವನಾದ ಮೂರ್ಖನು ಅರಿಯನು. ಇಲ್ಲವೆ ಹುಚ್ಚನು ತಿಳಿಯನು.
ಖಂಡಿತವಾಗಿಯೂ ಪ್ರತಿಯೊಬ್ಬ ಮನುಷ್ಯನಿಗಿಂತ ನಾನು ಪಶುಪ್ರಾಯನು; ಮನುಷ್ಯನ ವಿವೇಕವು ನನಗೆ ಇಲ್ಲ.
ಮನುಷ್ಯ ಪುತ್ರರ ಸ್ಥಿತಿಯ ವಿಷ ಯವಾಗಿ ದೇವರು ಅವರನ್ನು ಪ್ರತ್ಯಕ್ಷಪಡಿಸುವನೆಂದೂ ಅವರು ತಾವೇ ಮೃಗಗಳೆಂದು ತಾವು ಕಂಡುಕೊಳ್ಳ ಬೇಕೆಂದು ನನ್ನ ಹೃದಯದಲ್ಲಿ ಅಂದುಕೊಂಡೆನು.
ಅರಣ್ಯದ ಅಭ್ಯಾಸ ವುಳ್ಳ ಕಾಡುಕತ್ತೆಯೇ; ಅವಳ ಅತ್ಯಾಶೆಯಲ್ಲಿ ಗಾಳಿ ಯನ್ನು ಹೀರಿಕೊಳ್ಳುತ್ತಾಳೆ; ಅವಳ ಮದವನ್ನು ಯಾರು ತಡೆಯುವರು? ಅವಳನ್ನು ಹುಡುಕುವವ ರೆಲ್ಲರೂ ಆಯಾಸಪಡುವದಿಲ್ಲ; ಅವಳ ತಿಂಗಳಲ್ಲಿ ಅವಳನ್ನು ಕಾಣುವರು.
ತಾವು ಜ್ಞಾನಿಗಳೆಂದು ಹೇಳಿಕೊಂಡು ಹುಚ್ಚ ರಾದರು;
ಒಬ್ಬರಿಗೊಬ್ಬರು ಒಂದೇ ಮನಸ್ಸುಳ್ಳುವರಾಗಿರ್ರಿ; ದೊಡ್ಡಸ್ತಿಕೆಗಳ ಮೇಲೆ ಮನಸ್ಸಿಡದೆ ದೀನರ ಸಂಗಡ ಬಳಿಕೆಯಾಗಿರ್ರಿ. ನಿಮ್ಮನ್ನು ನೀವೇ ಬುದ್ಧಿವಂತರೆಂದು ಭಾವಿಸಿಕೊಳ್ಳಬೇಡಿರಿ.
ಯಾವನೂ ತನ್ನನ್ನು ತಾನೇ ಮೋಸಗೊಳಿಸ ದಿರಲಿ; ನಿಮ್ಮಲ್ಲಿ ಯಾವನಾದರೂ ಈ ಲೋಕ ಸಂಬಂಧವಾಗಿ ಜ್ಞಾನಿಯಾಗಿದ್ದೇನೆಂದು ಭಾವಿಸಿ ಕೊಂಡರೆ ಜ್ಞಾನಿಯಾಗುವಂತೆ ಹುಚ್ಚನಾಗಲಿ.
ನಾವೆಲ್ಲರೂ ಪೂರ್ವದಲ್ಲಿ ಶರೀರಭಾವದ ಆಶೆಗಳಿಗೆ ಅಧೀನರಾಗಿ ಶರೀರಕ್ಕೂ ಮನಸ್ಸಿಗೂ ಸಂಬಂಧಪಟ್ಟ ಇಚ್ಛೆಗಳನ್ನು ನೆರವೇರಿಸುತ್ತಾ ನಡೆದು ಮಿಕ್ಕಾದವರಂತೆ ಸ್ವಭಾವ ಸಿದ್ಧವಾಗಿ ದೇವರ ಕೋಪದ ಮಕ್ಕಳಾಗಿದ್ದೆವು.
ಆದರೆ ಓ ವ್ಯರ್ಥವಾದವನೇ, ಕ್ರಿಯೆಗಳಿಲ್ಲದ ನಂಬಿಕೆಯು ಸತ್ತದ್ದೆಂದು ತಿಳಿದುಕೊಳ್ಳಲು ನಿನಗೆ ಇಷ್ಟವಿದೆಯೋ?
ನಿಮ್ಮಲ್ಲಿ ಜ್ಞಾನಿಯೂ ಬುದ್ಧಿವಂತನೂ ಯಾರು? ಅಂಥವನು ಯೋಗ್ಯವಾಗಿ ನಡೆದುಕೊಂಡು ಜ್ಞಾನದ ಸಾತ್ವಿಕತ್ವದಲ್ಲಿ ತನ್ನ ಕ್ರಿಯೆಗಳನ್ನು ತೋರಿಸಲಿ.