Home Bibles ಯೋಬ 12:24 · ಕನ್ನಡ ಬೈಬಲ್
ಯೋಬ 12:24 · ಕನ್ನಡ ಬೈಬಲ್

ಆತನು ಭೂಮಿಯ ಮುಖ್ಯಸ್ಥರ ವಿವೇಕವನ್ನು ತೆಗೆದು ಬಿಡುತ್ತಾನೆ. ಮಾರ್ಗವಿಲ್ಲದ ಕಾಡಿನಲ್ಲಿ ಅವರನ್ನು ಅಲೆಯ ಮಾಡುತ್ತಾನೆ.ಅವರು ಬೆಳಕು ಇಲ್ಲದೆ ಕತ್ತಲೆಯಲ್ಲಿ ತಡವಾಡುತ್ತಾರೆ; ಆತನು ಅವರನ್ನು ಅಮಲೇರಿದವನ ಹಾಗೆ ಓಲಾಡುವಂತೆ ಮಾಡುತ್ತಾನೆ.

Cross references

ಯೋಬ 12:20

ನಂಬಿಕೆಯು ಳ್ಳವರ ಮಾತನ್ನು ತೆಗೆದುಹಾಕುತ್ತಾನೆ; ವೃದ್ಧರ ವಿವೇಕ ವನ್ನು ಇಲ್ಲದಾಗಿ ಮಾಡುತ್ತಾನೆ.

ಯೋಬ 17:4

ಅವರ ಹೃದಯವನ್ನು ಬುದ್ಧಿಗೆ ಅಡಗಿಸಿದಿ; ಆದದರಿಂದ ನೀನು ಅವರನ್ನು ಉನ್ನತಕ್ಕೇರಿಸುವದಿಲ್ಲ.

ಕೀರ್ತನೆಗಳು 59:12

ಅವರ ಬಾಯಿಂದ ಬರುವ ಪಾಪಕ್ಕೂ ಅವರ ತುಟಿಗಳ ಮಾತಿಗೂ ಅವರು ನುಡಿಯುವ ಶಾಪಕ್ಕೋಸ್ಕರವೂ ಸುಳ್ಳುಗಳಿಗೋಸ್ಕರವೂ ಅವರ ಅಹಂಕಾರದಲ್ಲಿ ಸಿಕ್ಕಿಬೀಳಲಿ.

ಕೀರ್ತನೆಗಳು 107:4

ಅರಣ್ಯದಲ್ಲಿಯೂ ಹಾದಿ ಇಲ್ಲದ ಕಾಡಿನಲ್ಲಿಯೂ ಅಲೆದು ವಾಸಿಸುವದಕ್ಕೆ ಪಟ್ಟಣವನ್ನು ಕಂಡುಕೊಳ್ಳದೆ,

ಕೀರ್ತನೆಗಳು 107:40

ಆತನು ಅಧಿಪತಿಗಳ ಮೇಲೆ ತಿರಸ್ಕಾರವನ್ನು ಹೊಯಿದು ಅವ ರನ್ನು ದಾರಿ ಇಲ್ಲದ ಕಾಡಿನಲ್ಲಿ ಅಲೆಯ ಮಾಡುತ್ತಾನೆ.

ಯೆಶಾಯ 6:9

ಅದಕ್ಕೆ ಆತನು -- ನೀನು ಈ ಜನರ ಬಳಿಗೆ ಹೋಗಿ -- ನೀವು ಕಿವಿಯಾರೆ ಕೇಳಿದರೂ ತಿಳಿಯಬಾರದೆಂದೂ ಕಣ್ಣಾರೆ ಕಂಡರೂ ಅದನ್ನು ಗ್ರಹಿಸಬಾರದೆಂದೂ ತಿಳಿಸು.

ಯೆಶಾಯ 19:1

ಐಗುಪ್ತ್ಯರ ವಿಷಯವಾದ ದೈವೋಕ್ತಿ; ಇಗೋ ಕರ್ತನು ವೇಗವುಳ್ಳ ಮೇಘವನ್ನು ಹತ್ತಿಕೊಂಡು ಐಗುಪ್ತಕ್ಕೆ ಬರುತ್ತಾನೆ; ಆತನು ಸಮ್ಮುಖ ನಾದಾಗ ಐಗುಪ್ತದ ವಿಗ್ರಹಗಳು ನಡುಗುವವು, ಐಗುಪ್ತ್ಯರ ಹೃದಯವು ಅವರ ಮಧ್ಯೆ ಕರಗುವದು.

ದಾನಿಯೇಲ 4:12

ಅದರ ಎಲೆಗಳು ಅಂದವಾಗಿದ್ದವು, ಅದರ ಫಲವು ಬಹಳವಾಗಿತ್ತು; ಅದರಲ್ಲಿ ಎಲ್ಲರಿಗೂ ಆಹಾರವಿತ್ತು; ಬಯಲು ಮೃಗಗಳಿಗೆ ಅದರ ಕೆಳಗೆ ನೆರಳಿತ್ತು; ಆಕಾಶದ ಪಕ್ಷಿಗಳು ಅದರ ಕೊಂಬೆಗಳಲ್ಲಿ ವಾಸಿಸುತ್ತಿದ್ದವು, ಎಲ್ಲಾ ಜೀವಿಗಳಿಗೂ ಅದರಿಂದಲೇ ಆಹಾರ ಇರುತ್ತಿತ್ತು.

ದಾನಿಯೇಲ 4:13

ನನ್ನ ಹಾಸಿಗೆಯ ಮೇಲೆ ನನ್ನ ಮನಸ್ಸಿನ ದರ್ಶನ ಗಳನ್ನು ನಾನು ನೋಡಲಾಗಿ; ಇಗೋ, ಒಬ್ಬ ಪಾಲಕನು ಮತ್ತು ಪರಿಶುದ್ಧನೊಬ್ಬನು ಪರಲೋಕದಿಂದ ಇಳಿದು ಬಂದನು.

ದಾನಿಯೇಲ 4:16

ಅವನ ಹೃದಯವು ಮನುಷ್ಯನ ಹೃದಯದಂತೆ ಇರದೆ ಬದಲಾಗಲಿ; ಮೃಗದ ಹೃದಯವು ಅವನಿಗೆ ಕೊಡಲ್ಪಡಲಿ; ಏಳು ಕಾಲಗಳು ಅವನನ್ನು ದಾಟಿಹೋಗಲಿ ಎಂದು ಹೇಳಿದನು.

ದಾನಿಯೇಲ 4:33

ಅದೇ ಗಳಿಗೆಯಲ್ಲಿ ಈ ಸಂಗತಿಯು ನೆಬೂಕದ್ನೆಚ್ಚರನಲ್ಲಿ ನೆರವೇರಿತು. ಅವನು ಮನುಷ್ಯ ರಿಂದ ತಳ್ಳಲ್ಪಟ್ಟು ಎತ್ತುಗಳಂತೆ ಹುಲ್ಲು ಮೇಯುತ್ತಿದ್ದನು. ಕೊನೆಗೆ ಅವನ ಕೂದಲು ಹದ್ದಿನ ಗರಿಗಳಂತೆಯೂ ಅವನ ಉಗುರುಗಳು ಪಕ್ಷಿಗಳ ಉಗುರುಗಳ ಹಾಗೂ ಬೆಳೆಯುವ ವರೆಗೆ ಅವನ ಶರೀರವು ಆಕಾಶದ ಮಂಜಿ ನಿಂದ ತೇವವಾಯಿತು.

ಹೊಶೇಯ 7:11

ಎಫ್ರಾಯಾಮು ಸಹ ಹೃದಯವಿಲ್ಲದ ಬುದ್ಧಿಹೀನವಾದ ಪಾರಿವಾಳದ ಹಾಗಿದ್ದಾನೆ; ಅವರು ಐಗುಪ್ತವನ್ನು ಕರೆಯುತ್ತಾರೆ, ಅವರು ಅಶ್ಯೂರಕ್ಕೆ ಹೋಗುತ್ತಾರೆ.

Interlinear

Choose Theme