Home Bibles ಯೋಬ 13:5 · ಕನ್ನಡ ಬೈಬಲ್
ಯೋಬ 13:5 · ಕನ್ನಡ ಬೈಬಲ್

ನೀವು ಮೌನವಾಗಿಯೇ ಇದ್ದರೆ ಎಷ್ಟೋ ಒಳ್ಳೇದು! ಅದು ನಿಮಗೆ ಜ್ಞಾನವಾಗಿರತಕ್ಕದ್ದು.

Cross references

ಯೋಬ 11:3

ನಿನ್ನ ಸುಳ್ಳುಗಳಿಗೆ ಮನುಷ್ಯರು ಮೌನವಾಗಿರಬೇಕೋ? ನೀನು ಗೇಲಿ ಮಾಡುವಾಗ ಯಾವನೂ ನಿನ್ನನ್ನು ನಾಚಿಕೆ ಪಡಿಸಕೂಡದೋ?

ಯೋಬ 13:13

ಮೌನ ವಾಗಿರ್ರಿ; ನಾನು ಮಾತನಾಡುವದಕ್ಕೆ ನನ್ನನ್ನು ಬಿಡಿರಿ, ನನ್ನ ಮೇಲೆ ಏನಾದರೂ ಬರಲಿ.

ಯೋಬ 16:3

ವ್ಯರ್ಥವಾದ ಮಾತುಗಳಿಗೆ ಅಂತ್ಯ ಉಂಟೋ? ಉತ್ತರ ಕೊಡುವ ಹಾಗೆ ನಿನ್ನನ್ನು ಧೈರ್ಯ ಪಡಿಸುವದು ಯಾವದು?

ಯೋಬ 18:2

ಎಲ್ಲಿಯ ವರೆಗೆ ಮಾತುಗಳನ್ನು ಮುಂದುವರಿಸುವಿರಿ? ಗ್ರಹಿಸಿ ಕೊಳ್ಳಿರಿ, ಆಮೇಲೆ ಮಾತನಾಡೋಣ.

ಯೋಬ 19:2

ಎಷ್ಟರ ವರೆಗೆ ನನ್ನ ಪ್ರಾಣ ವನ್ನು ನೋಯಿಸಿ, ನನ್ನನ್ನು ಮಾತುಗಳಿಂದ ಜಜ್ಜುವಿರಿ?

ಯೋಬ 21:2

ನನ್ನ ಮಾತನ್ನು ಲಕ್ಷ್ಯವಿಟ್ಟು ಕೇಳಿರಿ; ಇವು ನಿಮ್ಮ ಆದರಣೆಗಳಾಗಿರಲಿ.

ಯೋಬ 32:1

ಆಗ ಆ ಮೂರು ಜನರು ಯೋಬನಿಗೆ ಉತ್ತರ ಕೊಡುವದನ್ನು ಬಿಟ್ಟರು; ಯಾಕಂ ದರೆ ಅವನು ತನ್ನ ದೃಷ್ಟಿಗೆ ನೀತಿವಂತನಾಗಿದ್ದನು.

ಯೋಬ 32:16

ಅವರು ಮಾತನಾಡದೇ ಇರುವದರಿಂದ ನಾನು ಎದುರು ನೋಡಿದೆನು; ಯಾಕಂದರೆ ಇನ್ನೂ ಉತ್ತರ ಕೊಡದೆ ನಿಂತಿದ್ದಾರೆ.

ಸಾಮೇತಿಗಳು 17:28

ಬುದ್ಧಿಹೀನನು ಮೌನವಾಗಿದ್ದರೆ ಜ್ಞಾನಿಯೆಂದು ಎಣಿಸಲ್ಪಡುವನು; ತನ್ನ ತುಟಿಗಳನ್ನು ಬಿಗಿ ಹಿಡಿಯುವವನು ವಿವೇಕಿಯೆಂದು ಅನ್ನಿಸಿಕೊಳ್ಳುವನು.

ಸಭಾಪ್ರಸಂಗಿ 5:3

ಬಹಳ ಕೆಲಸದ ಮೂಲಕ ಕನಸು ಉಂಟಾಗುತ್ತದೆ; ಬಹು ಮಾತುಗಳಿಂದ ಮೂಢನ ಧ್ವನಿಯು ಗೊತ್ತಾಗುತ್ತದೆ;

ಆಮೋಸ 5:13

ಆದದ ರಿಂದ ಆ ಕಾಲದಲ್ಲಿ ಬುದ್ದಿವಂತನು ಮೌನವಾಗಿ ರುವನು; ಯಾಕಂದರೆ ಅದು ಕೆಟ್ಟ ಕಾಲವಾಗಿದೆ.

ಯಾಕೋಬ 1:19

ಆದದರಿಂದ ನನ್ನ ಪ್ರಿಯ ಸಹೋದರರೇ, ಪ್ರತಿ ಯೊಬ್ಬನು ಕಿವಿಗೊಡುವದರಲ್ಲಿ ತೀವ್ರವಾಗಿಯೂ ಮಾತನಾಡುವದರಲ್ಲಿ ಮತ್ತು ಕೋಪಿಸುವದರಲ್ಲಿ ನಿಧಾನವಾಗಿಯೂ ಇರಲಿ.

Interlinear

Choose Theme