Home Bibles ಯೋಬ 15:20 · ಕನ್ನಡ ಬೈಬಲ್
ಯೋಬ 15:20 · ಕನ್ನಡ ಬೈಬಲ್

ದುಷ್ಟನು ತನ್ನ ದಿವಸಗಳಲ್ಲೆಲ್ಲಾ ವೇದನೆ ಪಡು ತ್ತಾನೆ; ವರುಷಗಳ ಲೆಕ್ಕವು ಬಲಾತ್ಕಾರಿಗೆ ಮರೆಯಾಗಿದೆ.

Cross references

ಆದಿಕಾಂಡ 4:14

ಇಗೋ, ನೀನು ಈ ದಿನ ನನ್ನನ್ನು ಈ ಸ್ಥಳದಿಂದ ಹೊರಡಿಸಿದ್ದೀ, ನಿನ್ನ ಮುಖಕ್ಕೆ ನಾನು ಮರೆಯಾಗಿರಬೇಕು; ಭೂಮಿಯಲ್ಲಿ ಅಲೆಯು ವವನೂ ತಿರುಗಾಡುವವನೂ ಆಗಿರಬೇಕು; ಇದಲ್ಲದೆ ನನ್ನನ್ನು ಕಂಡವರೆಲ್ಲಾ ಕೊಲ್ಲುವರು ಅಂದನು.

ಯೋಬ 24:1

ಸರ್ವಶಕ್ತನಿಗೆ ಕಾಲಗಳು ಮರೆಯಾಗದೆ ಇರಲಾಗಿ, ಆತನನ್ನು ತಿಳಿದವರು ಆತನ ದಿವಸಗಳನ್ನು ನೋಡದೆ ಇರುವದು ಯಾಕೆ?

ಯೋಬ 27:13

ಇದು ದುಷ್ಟ ಮನುಷ್ಯನಿಗೆ ದೇವರಿಂದ ಬಂದ ಪಾಲಾಗಿದೆ; ಬಲಾತ್ಕಾರಿಗಳು ಸರ್ವ ಶಕ್ತನಿಂದ ಹೊಂದುವ ಬಾಧ್ಯತೆ ಇದೇ.

ಕೀರ್ತನೆಗಳು 90:3

ನೀನು ಮನುಷ್ಯನನ್ನು ನಾಶನಕ್ಕೆ ತಿರುಗಿಸಿ-- ಮನುಷ್ಯರ ಮಕ್ಕಳೇ, ಹಿಂತಿರುಗಿರಿ ಎಂದು ಹೇಳುತ್ತೀ;

ಕೀರ್ತನೆಗಳು 90:12

ನಾವು ಜ್ಞಾನವುಳ್ಳ ಹೃದಯವನ್ನು ಹೊಂದುವ ಹಾಗೆ, ನಮ್ಮ ದಿವಸಗಳನ್ನು ಲೆಕ್ಕಿಸುವದಕ್ಕೆ ನಮಗೆ ಕಲಿಸು.

ಸಭಾಪ್ರಸಂಗಿ 9:3

ಸೂರ್ಯನ ಕೆಳಗೆ ಮಾಡುವ ಎಲ್ಲಾ ಸಂಗತಿಗಳಲ್ಲಿಯೂ ಇದೂ ಒಂದು ಕೆಟ್ಟದ್ದು; ಇದಕ್ಕೆಲ್ಲಾ ಒಂದು ಗತಿಯಿದೆ; ಹೌದು, ಮನುಷ್ಯ ಕುಮಾರರ ಹೃದಯಗಳು ಸಹ ಕೆಟ್ಟತನದಿಂದ ತುಂಬಿವೆ; ಅವರು ಜೀವಿಸುವಾಗ ಅವರ ಹೃದಯಗಳಲ್ಲಿ ಹುಚ್ಚು ತನವಿದೆ. ಅನಂತರ ಅವರು ಸಾಯುತ್ತಾರೆ (ಸತ್ತವರ ಬಳಿಗೆ ಹೋಗುತ್ತಾರೆ.)

ಲೂಕ 12:19

ನಾನು ನನ್ನ ಆತ್ಮಕ್ಕೆ--ಆತ್ಮವೇ, ಅನೇಕ ವರುಷ ಗಳಿಗಾಗಿ ನಿನಗೆ ಬಹಳ ಸರಕು ಇಡಲ್ಪಟ್ಟಿದೆ; ನೀನು ವಿಶ್ರಮಿಸಿಕೋ, ತಿನ್ನು, ಕುಡಿ ಆನಂದವಾಗಿರು ಎಂದು ಹೇಳುವೆನು ಎಂದು ಅಂದುಕೊಂಡನು.

ರೋಮಾಪುರದವರಿಗೆ 8:22

ಹಿಗೆ ಸರ್ವಸೃಷ್ಟಿಯು ಇಂದಿನ ವರೆಗೂ ನರಳುತ್ತಾ ಪ್ರಸವವೇದನೆ ಪಡುತ್ತದೆಯೆಂದು ನಾವು ಬಲ್ಲೆವು.

ಯಾಕೋಬ 5:1

ಧನಿಕರೇ, ನಿಮಗೆ ಬರುವ ದುರ್ದಶೆ ಗಳಿಗಾಗಿ ಕಣ್ಣೀರಿಡಿರಿ, ಗೋಳಾಡಿರಿ

Interlinear

Choose Theme