Home Bibles ಯೋಬ 16:19 · ಕನ್ನಡ ಬೈಬಲ್
ಯೋಬ 16:19 · ಕನ್ನಡ ಬೈಬಲ್

ಈಗ ಇಗೋ, ಆಕಾಶದಲ್ಲಿ ನನ್ನ ಸಾಕ್ಷಿ ಉಂಟು; ನನ್ನ ಸಾಕ್ಷಿಯು ಉನ್ನತದಲ್ಲಿ ಅದೆ.

Cross references

ಆದಿಕಾಂಡ 31:50

ನೀನು ನನ್ನ ಕುಮಾರ್ತೆಯರನ್ನು ಉಪದ್ರಪಡಿಸಿದರೆ ಇಲ್ಲವೆ ನನ್ನ ಮಕ್ಕಳ ಹೊರತಾಗಿ ಬೇರೆ ಹೆಂಡತಿಯರನ್ನು ನೀನು ತಕ್ಕೊಂಡರೆ ಯಾವ ಮನುಷ್ಯನೂ ನಮ್ಮ ಸಂಗಡ ಇರುವದಿಲ್ಲ. ನೋಡು, ನನಗೂ ನಿನಗೂ ನಡುವೆ ದೇವರೇ ಸಾಕ್ಷಿ ಅಂದನು.

1 ಸಮುವೇಲ 12:5

ಅವನು ಅವರಿಗೆ--ನೀವು ನನ್ನಲ್ಲಿ ಏನಾದರೂ ಕಂಡು ಹಿಡಿಯಲಿಲ್ಲವೆಂಬದಕ್ಕೆ ಕರ್ತನೇ ನಿಮಗೆ ಸಾಕ್ಷಿಯಾಗಿ ದ್ದಾನೆ; ಆತನ ಅಭಿಷಿಕ್ತನು ಈಹೊತ್ತು ಸಾಕ್ಷಿಯಾಗಿದ್ದಾನೆ ಅಂದನು. ಅದಕ್ಕವರು--ಆತನು ಸಾಕ್ಷಿಯಾಗಿದ್ದಾನೆ ಅಂದರು.

ಯೋಬ 25:2

ದೊರೆ ತನವೂ ಹೆದರಿಕೆಯೂ ಆತನೊಂದಿಗೆ ಇವೆ; ತನ್ನ ಉನ್ನತ ಸ್ಥಳಗಳಲ್ಲಿ ಆತನು ಸಮಾಧಾನ ಮಾಡುತ್ತಾನೆ.

ಕೀರ್ತನೆಗಳು 113:5

ನಮ್ಮ ದೇವರಾದ ಕರ್ತನ ಹಾಗೆ ಯಾರಿದ್ದಾರೆ? ಉನ್ನತದಲ್ಲಿ ಆತನು ವಾಸಿಸುತ್ತಾನೆ.

ರೋಮಾಪುರದವರಿಗೆ 1:9

ನಾನು ಯಾವಾಗಲೂ ಪ್ರಾರ್ಥನೆಗಳಲ್ಲಿ ಎಡೆಬಿಡದೆ ನಿಮ್ಮನ್ನು ಜ್ಞಾಪಕ ಮಾಡಿ ಕೊಳ್ಳುತ್ತೇನೆ. ನಾನು ಯಾವಾತನ ಮಗನ ಸುವಾರ್ತೆ ಯಲ್ಲಿ ನನ್ನ ಆತ್ಮದೊಂದಿಗೆ ಸೇವಿಸುತ್ತೇನೋ ಆ ದೇವರೇ ಇದಕ್ಕೆ ನನ್ನ ಸಾಕ್ಷಿ.

ರೋಮಾಪುರದವರಿಗೆ 9:1

ಈ ಮಾತನ್ನು ನಾನು ಸುಳ್ಳಾಡದೆ ಕ್ರಿಸ್ತನಲ್ಲಿ ಸತ್ಯವಾಗಿ ಹೇಳುತ್ತೇನೆ; ಪವಿ ತ್ರಾತ್ಮನಲ್ಲಿ ನನ್ನ ಮನಸ್ಸಾಕ್ಷಿಯು ನನಗೆ ಸಾಕ್ಷಿ ಕೊಡುತ್ತದೆ.

2 ಕೊರಿಂಥದವರಿಗೆ 1:23

ಇದಲ್ಲದೆ ನಿಮ್ಮ ಮೇಲೆ ಕನಿಕರವಿರುವದರಿಂದ ನಾನು ಇದುವರೆಗೆ ಕೊರಿಂಥಕ್ಕೆ ಬರಲಿಲ್ಲವೆಂಬದಕ್ಕೆ ನನ್ನ ಪ್ರಾಣದೊಂದಿಗೆ ದೇವರೇ ನನಗೆ ಸಾಕ್ಷಿ.ನಿಮ್ಮ ನಂಬಿಕೆಯ ಮೇಲೆ ನಾವು ದೊರೆತನ ಮಾಡುವದಕ್ಕಾಗಿ ಅಲ್ಲ; ಆದರೆ ನಿಮ್ಮ ಸಂತೋಷಕ್ಕೆ ಸಹಾಯಮಾಡುವವರಾಗಿದ್ದೇವೆ. ಯಾಕಂದರೆ ನೀವು ನಂಬಿಕೆಯಲ್ಲಿ ನಿಂತಿದ್ದೀರಿ.

2 ಕೊರಿಂಥದವರಿಗೆ 11:31

ನಾನು ಸುಳ್ಳಾಡು ವದಿಲ್ಲವೆಂದು ನಮ್ಮ ಕರ್ತನಾದ ಯೇಸುಕ್ರಿಸ್ತನ ತಂದೆಯೂ ನಿರಂತರ ಸ್ತುತಿ ಹೊಂದತಕ್ಕವನೂ ಆಗಿರುವ ದೇವರೇ ಬಲ್ಲನು.

1 ತೆಸಲೋನಿಕದವರಿಗೆ 2:5

ನಿಮಗೆ ತಿಳಿದಿ ರುವ ಪ್ರಕಾರ ನಾವು ಎಂದಿಗೂ ಮುಖಸ್ತುತಿಯನ್ನು ಮಾಡುವವರಾಗಿ ಕಾಣಬಂದಿಲ್ಲ. ದ್ರವ್ಯಾಶೆಯನ್ನು ಮರೆಮಾಡುವದಕ್ಕಾಗಿ ವೇಷವನ್ನು ಹಾಕಿಕೊಂಡವ ರಾಗಿಲ್ಲ; ಇದಕ್ಕೆ ದೇವರೇ ಸಾಕ್ಷಿ.

1 ತೆಸಲೋನಿಕದವರಿಗೆ 2:10

ನಂಬುವವರಾದ ನಿಮ್ಮ ವಿಷಯದಲ್ಲಿ ನಾವು ಎಷ್ಟೋ ಶುದ್ಧರಾಗಿಯೂ ನೀತಿವಂತರಾಗಿಯೂ ನಿರ್ದೋಷಿಗಳಾಗಿಯೂ ನಡೆದುಕೊಂಡೆವೆಂಬದಕ್ಕೆ ನೀವು ಸಾಕ್ಷಿಗಳು. ದೇವರೂ ಸಾಕ್ಷಿ.

Interlinear

Choose Theme