ನಮ್ಮ ಸಂಗಡ ಧೂಳಿನಲ್ಲಿ ವಿಶ್ರಾಂತಿಯಲ್ಲಿರುವಾಗ ಅವರು ಪಾತಾಳದ ಅಗುಳಿಗಳಿಗೆ ಇಳಿದು ಹೋಗುವರು.
Cross references
ಅಲ್ಲಿ ದುಷ್ಟರು ತೊಂದರೆ ಕೊಡುವದನ್ನು ಬಿಟ್ಟುಬಿಡುತ್ತಾರೆ. ಶಕ್ತಿ ಕುಂದಿದವರು ಅಲ್ಲಿ ವಿಶ್ರಾಂತಿ ಹೊಂದಿದ್ದಾರೆ.
ಅವನ ಚರ್ಮದ ಬಲವನ್ನು ತಿನ್ನುವನು; ಮರಣದ ಚೊಚ್ಟಲ ಮಗನು ಅವನ ಬಲವನ್ನು ತಿನ್ನುವನು.
ಅವನ ಎಲುಬುಗಳು ಯೌವನ ಪಾಪದಿಂದ ತುಂಬಿದ್ದರೂ ಅದು ಅವನ ಸಂಗಡ ಧೂಳಿನಲ್ಲಿ ಮಲಗುವದು.
ಅವನ ಪ್ರಾಣವನ್ನು ಕುಣಿಯಿಂದ ಲೂ ಅವನ ಜೀವವನ್ನು ಕತ್ತಿಯಿಂದ ನಾಶವಾಗದ ಹಾಗೆಯೂ ಕಾಪಾಡುತ್ತಾನೆ.
ಕುಣಿಗೆ ಇಳಿಯುವವರ ಸಂಗಡ ಎಣಿಸಲ್ಪಟ್ಟಿದ್ದೇನೆ; ಬಲವಿಲ್ಲದ ಮನುಷ್ಯನ ಹಾಗಿದ್ದೇನೆ.
ಓ ಕರ್ತನೇ, ನನಗೆ ಬೇಗನೆ ಉತ್ತರಕೊಡು; ನನ್ನ ಪ್ರಾಣವು ಕುಂದಿಹೋಗಿದೆ; ನಾನು ಕುಣಿಯಲ್ಲಿ ಇಳಿಯುವವರಿಗೆ ಸಮಾನವಾಗದ ಹಾಗೆ ನಿನ್ನ ಮುಖ ವನ್ನು ನನಗೆ ಮರೆಮಾಡಬೇಡ.
ಇಗೋ, ಆ ಬಹು ವ್ಯಥೆಯು ನನ್ನ ಸಮಾಧಾನಕ್ಕಾಗಿಯೇ ಆಯಿತು; ಆದರೆ ನನ್ನ ಆತ್ಮವನ್ನು ನಾಶಕೂಪದಿಂದ ಬಿಡುಗಡೆ ಮಾಡಿದ್ದು ನಿನ್ನ ಪ್ರೀತಿಯೇ. ನನ್ನ ಪಾಪಗಳನ್ನೆಲ್ಲಾ ನಿನ್ನ ಬೆನ್ನಿನ ಹಿಂದೆ ಹಾಕಿಬಿಟ್ಟಿದ್ದೀ.
ಆಮೇಲೆ ಆತನು ನನಗೆ ಹೇಳಿದ್ದೇನಂದರೆ--ಮನುಷ್ಯಪುತ್ರನೇ, ಈ ಎಲುಬುಗಳು ಸಂಪೂರ್ಣ ಇಸ್ರಾಯೇಲ್ ಮನೆತನಗಳೇ; ಇಗೋ, ನಮ್ಮ ಎಲುಬುಗಳು ಒಣಗಿಸಲ್ಪಟ್ಟಿವೆ ಮತ್ತು ನಮ್ಮ ನಿರೀಕ್ಷೆಯು ಕಳೆದುಹೋಗಿದೆ; ನಾವು ಶುದ್ಧವಾಗಿ ನಮ್ಮ ಭಾಗಗಳನ್ನು ಕತ್ತರಿಸಿಕೊಂಡಿದ್ದೇವೆ ಎಂದು ಅವರು ಹೇಳುವರು.
ಬೆಟ್ಟಗಳ ಬುಡದ ತನಕ ಇಳಿದು ಹೋದೆನು; ಭೂಮಿಯ ಅಡ್ಡದಂಡೆಗಳು ನಿತ್ಯವಾಗಿ ನನ್ನ ಸುತ್ತಲಿ ದ್ದವು; ಆದಾಗ್ಯೂ ಓ ದೇವರಾದ ನನ್ನ ಕರ್ತನೇ, ನೀನು ನನ್ನ ಪ್ರಾಣವನ್ನು ನಾಶನದೊಳಗಿಂದ ಎಬ್ಬಿಸಿದ್ದೀ.
ಆದರೆ ಮರಣವಾಗು ತ್ತದೆಂಬ ನಿರ್ಣಯವು ನಮ್ಮೊಳಗೆ ಉಂಟಾಯಿತು; ನಾವು ನಮ್ಮ ಮೇಲೆ ಭರವಸವಿಟ್ಟುಕೊಳ್ಳದೆ ಸತ್ತವರನ್ನು ಎಬ್ಬಿಸುವ ದೇವರ ಮೇಲೆಯೇ ಭರವಸವಿಡುವವ ರಾಗಬೇಕೆಂದು ಹೀಗಾಯಿತು.