ಸುತ್ತಲೂ ದಿಗಿಲುಗಳು ಅವನನ್ನು ಹೆದರಿಸಿ ಅವನ ಕಾಲುಗಳನ್ನು ಎಬ್ಬಿಸುತ್ತವೆ.
Cross references
ನಿಮ್ಮಲ್ಲಿ ಯಾರಾರು ಉಳಿದು ಶತ್ರುಗಳ ದೇಶದ ಲ್ಲಿರುವರೋ ಅವರ ಹೃದಯಗಳಲ್ಲಿ ಅಧೈರ್ಯವನ್ನು ಹುಟ್ಟಿಸುವೆನು; ಬಡಿದಾಡುವ ಎಲೆಯ ಶಬ್ದವು ಅವರನ್ನು ಓಡಿಸುವದು, ಕತ್ತಿಗೆ ಓಡಿಹೋದ ಹಾಗೆ ಓಡಿಹೋಗು ವರು; ಓಡಿಸುವವನಿಲ್ಲದೆ ಬೀಳುವರು.
ಆದರೆ ಸೌಲನು ಫಿಲಿಷ್ಟಿಯರ ದಂಡನ್ನು ನೋಡಿ ಭಯ ಪಟ್ಟನು; ತನ್ನ ಹೃದಯ ಬಹಳ ಹೆದರಿತು.
ಕರ್ತನು ಪಾಳೆಯದಲ್ಲಿರುವ ಅರಾಮ್ಯರಿಗೆ ರಥಗಳ ಶಬ್ದವೂ ಕುದುರೆಗಳ ಶಬ್ದವೂ ಮಹಾಸೈನ್ಯದ ಶಬ್ದವೂ ಕೇಳಲ್ಪಡುವಂತೆ ಮಾಡಿದ್ದರಿಂದ ಅವರು ಒಬ್ಬರಿಗೊ ಬ್ಬರು--ಇಗೋ, ಇಸ್ರಾಯೇಲಿನ ಅರಸನು ನಮ್ಮ ಮೇಲೆ ಬೀಳಲು ಹಿತ್ತಿಯರ ಅರಸುಗಳನ್ನೂ ಐಗುಪ್ತದ ಅರಸುಗಳನ್ನೂ ಕೂಲಿಗೆ ಕರೆದಿದ್ದಾನೆ ಅಂದುಕೊಂಡರು.
ಸರ್ವ ಶಕ್ತನ ಬಾಣಗಳು ನನ್ನಲ್ಲಿ ಇವೆ; ಅವುಗಳ ವಿಷವು ನನ್ನ ಆತ್ಮವನ್ನು ಕುಡಿಯುತ್ತವೆ; ದೇವರ ಹೆದರಿಕೆಗಳು ನನಗೆ ವಿರೋಧವಾಗಿ ನನ್ನ ಸುತ್ತಲೂ ಇಳಿದವು.
ಭಯಂಕರವಾದ ಶಬ್ದ ಅವನ ಕಿವಿಗಳಲ್ಲಿ ಅದೆ; ವೃದ್ಧಿಯಲ್ಲಿರುವಾಗ ಹಾಳುಮಾಡುವವನು ಅವನ ಮೇಲೆ ಬರುತ್ತಾನೆ.
ಕನಸಿನ ಹಾಗೆ ಅವನು ಕಾಣದೆ ಹಾರಿಹೋಗುವನು; ರಾತ್ರಿಯ ದರ್ಶನದ ಹಾಗೆ ಓಡಿಸಲ್ಪಡುವನು.
ಅವನು ಎಳೆದರೆ ಅದು ಬೆನ್ನಿನಿಂದ ಹೊರಡುವದು; ಅವನ ಪಿತ್ತದೊಳಗಿಂದ ಮಿಂಚುವ ಖಡ್ಗ ಬರುವದು; ಅವನ ಮೇಲೆ ಹೆದರಿಕೆ ಗಳು ಅವೆ.
ಆದದರಿಂದ ನಿನ್ನ ಸುತ್ತಲೂ ಉರುಲುಗಳು ಉಂಟು; ಭಯವು ನಿನ್ನನ್ನು ಫಕ್ಕನೆ ತಲ್ಲಣಪಡಿಸುತ್ತದೆ.
ದಿಗಿಲು ಗಳು ನೀರಿನಂತೆ ಅವನನ್ನು ಹಿಡಿಯುತ್ತವೆ. ರಾತ್ರಿ ಯಲ್ಲಿ ಬಿರುಗಾಳಿ ಅವನನ್ನು ಸುಲುಕೊಳ್ಳುತ್ತದೆ.
ಭಯವಿಲ್ಲದಿರುವಲ್ಲಿ ಅವರು ಭಯ ಭ್ರಾಂತರಾದರು; ನಿನಗೆ ವಿರೋಧವಾಗಿ ದಂಡು ಇಳಿ ಸುವವನ ಎಲುಬುಗಳನ್ನು ದೇವರು ಚದರಿಸಿ ಬಿಟ್ಟಿ ದ್ದಾನೆ. ನೀನು ಅವರನ್ನು ನಾಚಿಕೆಪಡಿಸಿದ್ದೀ; ದೇವರು ಅವರನ್ನು ತಿರಸ್ಕರಿಸಿದ್ದಾನೆ.ಚೀಯೋನಿನಿಂದ ಇಸ್ರಾಯೇಲಿನ ರಕ್ಷಣೆಯು ಬಂದರೆ ಎಷ್ಟೋ ಒಳ್ಳೇದು. ದೇವರು ತನ್ನ ಜನರನ್ನು ಸೆರೆಯಿಂದ ತಿರುಗಿ ಬರಮಾಡುವಾಗ ಯಾಕೋಬನು ಉಲ್ಲಾಸಿಸುವನು, ಇಸ್ರಾಯೇಲನು ಸಂತೋಷಿ ಸುವನು.
ಕ್ಷಣಮಾತ್ರದಲ್ಲಿ ಹೀಗೆ ನಾಶನಕ್ಕೆ ಅವರನ್ನು ಬರಮಾಡಿದಿ. ಅವರು ದಿಗಿಲುಗಳಿಂದ ಸಂಪೂರ್ಣವಾಗಿ ನಾಶವಾಗಿದ್ದಾರೆ.
ಹಿಂದಟ್ಟುವವನು ಇಲ್ಲದಿದ್ದರೂ ದುಷ್ಟರು ಓಡಿಹೋಗುತ್ತಾರೆ; ಸಿಂಹದ ಹಾಗೆ ನೀತಿವಂತರು ಧೈರ್ಯದಿಂದ ಇರುತ್ತಾರೆ.
ನಿಮ್ಮ ಪಿತೃಗಳು ಐಗುಪ್ತ ದೇಶವನ್ನು ಬಿಟ್ಟು ಹೋದಂದಿನಿಂದ ಇಂದಿನ ವರೆಗೂ ನಾನು ನನ್ನ ದಾಸರಾಗಿರುವ ಸಕಲ ಪ್ರವಾದಿಗಳನ್ನು ದಿನ ದಿನವೂ ಬೆಳಿಗ್ಗೆ ಎದ್ದು ನಿಮ್ಮ ಬಳಿಗೆ ಕಳುಹಿಸಿದೆನು.
ಆಗ ಯೆರೆವಿಾಯನು ಅವರಿಗೆ ಹೇಳಿದ್ದೇನಂ ದರೆ--ಚಿದ್ಕೀಯನಿಗೆ ಹೀಗೆ ಹೇಳಿರಿ--
ಗಾಜಾದ ಮೇಲೆ ಬೋಳುತನ ಬಂತು; ಅಷ್ಕೆ ಲೋನು ಅವರ ತಗ್ಗಿನ ಉಳಿದವುಗಳಿಂದ ತೆಗೆದು ಹಾಕಲ್ಪಟ್ಟಿತು; ಎಷ್ಟು ಕಾಲ ನಿನಗೆ ನೀನೇ ಗಾಯಮಾಡಿ ಕೊಳ್ಳುವಿ?
ಬಾಬೆಲಿಗೆ ವಿರೋಧವಾಗಿ ಬಿಲ್ಲಿನವರನ್ನು ಒಟ್ಟಾಗಿ ಕರೆಯಿರಿ; ಬಿಲ್ಲು ಬೊಗ್ಗಿಸುವವರೆಲ್ಲರೇ, ಅದಕ್ಕೆ ವಿರೋಧವಾಗಿ ಸುತ್ತಲು ದಂಡು ಕಟ್ಟಿರಿ; ಅದರಲ್ಲಿ ಯಾವದು ತಪ್ಪಿಸಿ ಕೊಳ್ಳಲಾರದೆ ಇರಲಿ. ಅದರ ಕೃತ್ಯಗಳ ಪ್ರಕಾರ ಅದಕ್ಕೆ ಪ್ರತಿಫಲ ಕೊಡಿರಿ; ಅದು ಮಾಡಿದ್ದೆಲ್ಲಾದರ ಹಾಗೆ ಅದಕ್ಕೆ ಮಾಡಿರಿ; ಕರ್ತನಿಗೆ ವಿರೋಧವಾಗಿಯೂ ಇಸ್ರಾಯೇಲಿನ ಪರಿಶುದ್ಧನಿಗೆ ವಿರೋಧವಾಗಿಯೂ ಅದು ಗರ್ವ ತೋರಿಸಿತು.
ನಾವು ಕರ್ತನ ಭಯವನ್ನು ಅರಿತವರಾದ ಕಾರಣ ಮನುಷ್ಯರನ್ನು ಒಡಂಬಡಿಸುತ್ತೇವೆ; ಆದರೆ ನಾವು ದೇವರಿಗೂ ನಿಮ್ಮ ಮನಸ್ಸಾಕ್ಷಿಗಳಿಗೂ ತೋರಿ ಬಂದಿದ್ದೇವೆಂದು ನಾನು ಭರವಸವುಳ್ಳವನಾಗಿದ್ದೇನೆ.
ಭೂರಾಜರೂ ದೊಡ್ಡ ವರೂ ಐಶ್ವರ್ಯವಂತರೂ ಮುಖ್ಯಾಧಿಪತಿಗಳೂ ಪರಾ ಕ್ರಮಶಾಲಿಗಳೂ ಎಲ್ಲಾ ದಾಸರೂ ಸ್ವತಂತ್ರರೂ ಗವಿ ಗಳಲ್ಲಿಯೂ ಬೆಟ್ಟಗಳ ಬಂಡೆಗಳಲ್ಲಿಯೂ ಅಡಗಿ ಕೊಂಡು