ಅವನ ಜನರಲ್ಲಿ ಅವನಿಗೆ ಮಗನೂ ಇಲ್ಲ, ಮೊಮ್ಮಗನೂ ಇಲ್ಲ; ಅವನ ನಿವಾಸಗಳಲ್ಲಿ ಉಳಿ ದವನೂ ಇಲ್ಲ.
Cross references
ಅಗೋ, ದೊಡ್ಡ ಗಾಳಿ ಬಂದು ಮನೆಯ ನಾಲ್ಕು ಮೂಲೆಗಳಿಗೆ ಹೊಡೆದದ್ದರಿಂದ ಅದು ಯೌವನಸ್ಥರ ಮೇಲೆ ಬಿತ್ತು; ಅವರು ಸತ್ತರು; ನಾನೊಬ್ಬನು ಮಾತ್ರ ನಿನಗೆ ತಿಳಿಸುವುದಕ್ಕೆ ತಪ್ಪಿಸಿಕೊಂಡೆನು ಅಂದನು.
ನಿನ್ನ ಮಕ್ಕಳು ಆತನಿಗೆ ವಿರೋಧವಾಗಿ ಪಾಪಮಾಡಿದ್ದರೆ, ಅವರ ದ್ರೋಹದ ದೆಸೆಯಿಂದ ಅವರನ್ನು ತಳ್ಳಿಬಿಡುವನು.
ಅವನ ಊಟದಲ್ಲಿ ಏನೂ ಉಳಿಯದು; ಆದದರಿಂದ ಅವನ ವಸ್ತುಗಳನ್ನು ಯಾರೂ ನೋಡುವದಿಲ್ಲ.
ಎಲ್ಲಾ ಅಂಧಕಾರವು ಅವನ ಗುಪ್ತ ಸ್ಥಳಗಳಲ್ಲಿ ಇಡಲ್ಪಟ್ಟಿದೆ; ಯಾರೂ ಹೊತ್ತಿಸದ ಬೆಂಕಿ ಅವನನ್ನು ತಿನ್ನುವದು; ಅವನ ಗುಡಾರದಲ್ಲಿ ಉಳಿ ದವನು ನಾಶವಾಗುವನು.
ಅವನ ಮಕ್ಕಳು ಹೆಚ್ಚಿದರೆ ಖಡ್ಗಕ್ಕೆ ಗುರಿಯಾಗುವರು; ಅವನ ಸಂತ ತಿಯವರು ರೊಟ್ಟಿಯಿಂದ ತೃಪ್ತಿಹೊಂದರು.
ಅವನಿಗೆ ಏಳು ಕುಮಾರರೂ ಮೂರು ಕುಮಾರ್ತೆ ಯರೂ ಇದ್ದರು.
ಕರ್ತನು ನ್ಯಾಯವನ್ನು ಪ್ರೀತಿಮಾಡುತ್ತಾನೆ; ತನ್ನ ಪರಿಶುದ್ಧರನ್ನು ತೊರೆದುಬಿಡನು; ಅವರು ಯುಗ ಯುಗಕ್ಕೂ ಕಾಪಾಡಲ್ಪಡುವರು; ಆದರೆ ದುಷ್ಟರ ಸಂತತಿಯು ಕಡಿದುಹಾಕಲ್ಪಡುವದು.
ಅವನ ಸಂತಾನವು ನಿರ್ನಾಮವಾಗಲಿ; ಎರಡನೇ ತಲಾಂತರದಲ್ಲಿ ಅವರ ಹೆಸರು ಅಳಿದು ಹೋಗಲಿ.
ಸ್ಥಳ ಮಿಗಿಸದೆ ನೀವು ಭೂಮಿಯ ಮಧ್ಯದಲ್ಲಿ ಒಂಟಿಯಾಗಿ ವಾಸಿಸುವಂತೆ ಮನೆಗೆ ಮನೆ ಕೂಡಿಸಿ ಹೊಲಕ್ಕೆ ಹೊಲ ಸೇರಿಸುವವರಿಗೆ ಅಯ್ಯೋ!
ಅವರು ಏಳದೆ ಇಲ್ಲವೆ ದೇಶವನ್ನು ವಶ ಪಡಿಸಿಕೊಳ್ಳದೆ ಇಲ್ಲವೆ ಲೋಕವನ್ನು ಪಟ್ಟಣಗಳಿಂದ ತುಂಬಿಸದಂತೆ ಅವರ ತಂದೆಗಳ ಅಪರಾಧದ ನಿಮಿತ್ತ ಅವನ ಮಕ್ಕಳ ಕೊಲೆಗೆ ಸಿದ್ಧಮಾಡಿರಿ.
ಅವರಿಗೆ ವಿರುದ್ಧವಾಗಿ ಏಳುತ್ತೇನೆಂದು ಸೈನ್ಯಗಳ ಕರ್ತನು ಹೇಳುತ್ತಾನೆ. ಬಾಬೆಲಿನಿಂದ ಹೆಸರನ್ನೂ ಉಳಿದ ಜನರನ್ನೂ ಮಗನನ್ನೂ ಸೋದರಳಿಯನನ್ನೂ ನಿರ್ಮೂಲ ಮಾಡುವೆನು ಎಂದು ಸೈನ್ಯಗಳ ಕರ್ತನು ಹೇಳುತ್ತಾನೆ.
ಆದದರಿಂದ ಇಗೋ, ಪ್ರತಿಯೊಬ್ಬನೂ ತನ್ನ ನೆರೆಯವನಿಂದ ನನ್ನ ವಾಕ್ಯಗಳನ್ನು ಕದ್ದುಕೊಳ್ಳುವ ಪ್ರವಾದಿಗಳಿಗೆ ವಿರೋಧವಾಗಿದ್ದೇನೆಂದು ಕರ್ತನು ಅನ್ನುತ್ತಾನೆ.