ಹೌದು, ನಿಶ್ಚಯವಾಗಿ ದುಷ್ಟರ ಬೆಳಕು ಆರಿ ಹೋಗುವದು; ಅವನ ಬೆಂಕಿಯ ಜ್ವಾಲೆಯು ಪ್ರಕಾಶಿ ಸದು.
Cross references
ಕತ್ತಲೆಯೊಳಗಿಂದ ಅವನು ತೊಲಗುವದಿಲ್ಲ; ಅವನ ಕೊಂಬೆಗಳನ್ನು ಜ್ವಾಲೆಯು ಬಾಡಿಸುವದು; ಅವನ ಬಾಯಿಯ ಶ್ವಾಸ ದಿಂದ ತೊಲಗಿ ಹೋಗುತ್ತಾನೆ.
ಏನಂದರೆ, ದುಷ್ಟರ ಜಯವು ಸ್ವಲ್ಪ ಕಾಲದ್ದೂ ಕಪಟಿಗಳ ಸಂತೋಷವು ಕ್ಷಣ ಮಾತ್ರದ್ದೂ.
ಎಷ್ಟು ಸಾರಿ ದುಷ್ಟರ ದೀಪವು ಆರಿ ಹೋಗುತ್ತದೆ; ಅವರ ನಾಶನವು ಅವರ ಮೇಲೆ ಬರುತ್ತದೆ; ದೇವರು ವೇದನೆಗಳನ್ನು ತನ್ನ ಕೋಪ ದಿಂದ ಹಂಚುತ್ತಾನೆ.
ದುಷ್ಟರ ಮಾರ್ಗವು ಕತ್ತಲೆ ಯಂತಿದೆ. ಅವರು ಯಾವದಕ್ಕೆ ಎಡವಿ ಬೀಳುತ್ತಾರೋ ಅದು ಅವರಿಗೆ ಗೊತ್ತಾಗದು.
ನೀತಿವಂತರ ಬೆಳಕು ಸಂತೋಷಿಸುತ್ತದೆ; ದುಷ್ಟರ ದೀಪವು ಆರಿ ಹೋಗುವದು.
ತನ್ನ ತಂದೆ ತಾಯಿಯನ್ನಾ ಗಲಿ ಶಪಿಸುವವನ ದೀಪವು ಮಂಕಾದ ಕತ್ತಲೆಯಲ್ಲಿ ಆರಿಹೋಗುವದು.
ಹೆಮ್ಮೆಯ ದೃಷ್ಟಿ, ಗರ್ವದ ಹೃದಯ, ದುಷ್ಟರ ಉಳುವಿಕೆ ಪಾಪವೇ.
ಕೆಡುಕನಿಗೆ ಪ್ರತಿ ಫಲವು ಇರುವದಿಲ್ಲ; ದುಷ್ಟರ ದೀಪವು ಆರಿಹೋಗು ವದು.
ಇಗೋ, ಕಿಡಿಗಳಿಂದ ಆವರಿಸಿಕೊಳ್ಳುವಂತೆ ಬೆಂಕಿ ಯನ್ನು ಹತ್ತಿಸಿಕೊಳ್ಳುವವರೆಲ್ಲರೇ, ನಿಮ್ಮ ಬೆಂಕಿಯ ಬೆಳಕಿನಲ್ಲಿಯೂ ನೀವು ಹತ್ತಿಸಿದ ಕಿಡಿಗಳಲ್ಲಿಯೂ ನಡೆಯಿರಿ. ನನ್ನ ಹಸ್ತದಿಂದ ನಿಮಗಾಗುವದು ಇದೇ; ನೀವು ದುಃಖದಲ್ಲಿ ಬಿದ್ದುಕೊಂಡಿರುವಿರಿ.