ತಿರಿಗಿ ಒಂದು ದಿನ ಕರ್ತನ ಬಳಿಯಲ್ಲಿ ನಿಂತುಕೊಳ್ಳುವದಕ್ಕೆ ದೇವರ ಪುತ್ರರು ಬಂದಾಗ ಸೈತಾನನು ಸಹ ಅವರ ಸಂಗಡ ಬಂದನು.
Cross references
ಒಂದು ದಿನ ದೇವರ ಪುತ್ರರು ಕರ್ತನ ಮುಂದೆ ನಿಂತುಕೊಳ್ಳುವದಕ್ಕೆ ಬಂದಾಗ ಸೈತಾನನು ಸಹ ಅವ ರೊಂದಿಗೆ ಬಂದನು.
ಕರ್ತನು ಸೈತಾನನಿಗೆ--ನನ್ನ ಸೇವಕನಾದ ಯೋಬನ ಮೇಲೆ ನೀನು ಗಮನವಿಟ್ಟೆಯಾ? ಅವನು ಸಂಪೂರ್ಣನೂ ಯಥಾರ್ಥನೂ ದೇವರಿಗೆ ಭಯಪಡುವವನೂ ಕೇಡನ್ನು ಬಿಟ್ಟು ತೊಲಗುವವನೂ ಆಗಿದ್ದಾನೆ ಅವನ ಹಾಗೆ ಭೂಮಿಯಲ್ಲಿ ಒಬ್ಬನೂ ಇಲ್ಲ ಅಂದನು.
ಆಗ ಉದಯದ ನಕ್ಷತ್ರಗಳು ಕೂಡ ಹರ್ಷಧ್ವನಿ ಮಾಡುವಾಗ ದೇವರ ಪುತ್ರರೆಲ್ಲಾ ಉಲ್ಲಾ ಸದಿಂದ ಆರ್ಭಟಿಸಿದರು.
ಅರಸನಾದ ಉಜ್ಜೀಯನು ಮರಣ ಹೊಂದಿದ ವರುಷದಲ್ಲಿ ಕರ್ತನು ಉನ್ನ ತೋನ್ನತವಾಗಿ ಸಿಂಹಾಸನಾರೂಢನಾಗಿರುವದನ್ನು ಕಂಡೆನು. ಆತನ ವಸ್ತ್ರದ ನೆರಿಗೆಯು ಮಂದಿರದಲ್ಲೆಲ್ಲಾ ಹರಡಿತ್ತು.
ಅದಕ್ಕೆ ಆ ದೂತನು ಪ್ರತ್ಯುತ್ತರವಾಗಿ--ನಾನು ದೇವರ ಸನ್ನಿಧಿಯಲ್ಲಿ ನಿಲ್ಲುವ ಗಬ್ರಿಯೇಲನು, ಈಗ ನಿನ್ನ ಸಂಗಡ ಮಾತನಾಡುವದಕ್ಕೂ ಈ ಸಂತೋಷದ ವರ್ತಮಾನವನ್ನು ನಿನಗೆ ತಿಳಿಸುವದಕ್ಕೂ ಕಳುಹಿಸ ಲ್ಪಟ್ಟಿದ್ದೇನೆ.
ಇವರೆಲ್ಲರು ರಕ್ಷಣೆಯನ್ನು ಬಾಧ್ಯವಾಗಿ ಹೊಂದಬೇಕಾಗಿರುವವರ ಸೇವೆಗೋಸ್ಕರ ಕಳುಹಿ ಸಲ್ಪಟ್ಟ ಊಳಿಗದ ಆತ್ಮಗಳಲ್ಲವೋ?