Home Bibles ಯೋಬ 2:5 · ಕನ್ನಡ ಬೈಬಲ್
ಯೋಬ 2:5 · ಕನ್ನಡ ಬೈಬಲ್

ಆದರೆ ನಿನ್ನ ಕೈಚಾಚಿ ಅವನ ಎಲುಬನ್ನೂ ಅವನ ಮಾಂಸವನ್ನೂ ಮುಟ್ಟಿದರೆ ಅವನು ನಿನ್ನ ಎದುರಿನಲ್ಲಿ ನಿನ್ನನ್ನು ಶಪಿಸುವನು ಅಂದನು.

Cross references

ಲೇವ್ಯಕಾಂಡ 24:15

ನೀನು ಇಸ್ರಾಯೇಲ್‌ ಮಕ್ಕಳೊಂದಿಗೆ ಮಾತನಾಡಿ ಅವರಿಗೆ ಹೀಗೆ ಹೇಳಬೇಕು--ತನ್ನ ದೇವರನ್ನು ಶಪಿಸುವವನು ತನ್ನ ಪಾಪವನ್ನು ಹೊತ್ತುಕೊಳ್ಳಬೇಕು.

1 ದಿನವೃತ್ತಾಂತ 21:17

ದಾವೀದನು ದೇವರಿಗೆ--ಜನರನ್ನು ಲೆಕ್ಕ ಮಾಡಲು ಆಜ್ಞಾಪಿಸಿದವನು ನಾನಲ್ಲವೋ? ನಾನೇ ಪಾಪವನ್ನು ಮಾಡಿ ಈ ಕೆಟ್ಟದ್ದನು ಮಾಡಿದ್ದೇನೆ. ಆದರೆ ಕುರಿಗಳಾದ ಇವರು ಮಾಡಿದ್ದೇನು? ನನ್ನ ದೇವರಾದ ಕರ್ತನೇ, ದಯದಿಂದ ನಿನ್ನ ಕೈ ನನ್ನ ಮೇಲೆಯೂ ನನ್ನ ತಂದೆಯ ಮನೆಯ ಮೇಲೆಯೂ ಇರಲಿ. ಆದರೆ ನಿನ್ನ ಜನರು ಬಾಧೆಪಡುವ ಹಾಗೆ ಅವರ ಮೇಲೆ ಬೇಡ ಅಂದನು.

ಯೋಬ 1:5

ಔತಣದ ದಿನಗಳು ಮುಗಿದ ಬಳಿಕ ಯೋಬನು ಅವರನ್ನು ಕರೆಕಳುಹಿಸಿ ಅವರನ್ನು ಶುದ್ಧಿ ಮಾಡಿ ಬೆಳಿಗ್ಗೆ ಎದ್ದು ಅವರೆಲ್ಲರ ಲೆಕ್ಕದ ಪ್ರಕಾರ ದಹನಬಲಿಗಳನ್ನು ಅರ್ಪಿಸುತ್ತಿದ್ದನು; ಯೋಬನುಒಂದುವೇಳೆ ನನ್ನ ಕುಮಾರರು ಪಾಪ ಮಾಡಿ ತಮ್ಮ ಹೃದಯಗಳಲ್ಲಿ ದೇವರನ್ನು ಶಪಿಸಿರಬಹುದು ಅಂದು ಕೊಂಡನು. ಹೀಗೆಯೇ ಯೋಬನು ಕ್ರಮವಾಗಿ ಮಾಡುತ್ತಿದ್ದನು.

ಯೋಬ 1:11

ಆದರೆ ನಿನ್ನ ಕೈ ಚಾಚಿ ಅವನಿಗಿದ್ದದ್ದನ್ನೆಲ್ಲಾ ಮುಟ್ಟು; ಅವನು ನಿನ್ನೆದುರಿನಲ್ಲಿಯೇ ನಿನ್ನನ್ನು ಶಪಿಸುವನು ಅಂದನು.

ಯೋಬ 1:12

ಕರ್ತನು ಸೈತಾನನಿಗೆ--ಇಗೋ, ಅವನದೆಲ್ಲಾ ನಿನ್ನ ಅಧಿಕಾರ ದಲ್ಲಿ ಅದೆ; ಅವನ ಮೇಲೆ ಮಾತ್ರ ನಿನ್ನ ಕೈ ಹಾಕಬೇಡ ಅಂದನು. ಆಗ ಸೈತಾನನು ಕರ್ತನ ಸಮ್ಮುಖದಿಂದ ಹೊರಟನು.

ಯೋಬ 2:9

ಆಗ ಅವನ ಹೆಂಡತಿಯು ಅವನಿಗೆ--ಇನ್ನೂ ಯಥಾರ್ಥ ತ್ವದಲ್ಲಿ ಉಳಿದಿದ್ದೀಯೋ? ದೇವರನ್ನು ಶಪಿಸಿ ಸಾಯಿ ಅಂದಳು.

ಯೋಬ 19:20

ನನ್ನ ಚರ್ಮಕ್ಕೂ ನನ್ನ ಮಾಂಸಕ್ಕೂ ನನ್ನ ಎಲುಬು ಅಂಟುತ್ತದೆ; ನನ್ನ ಹಲ್ಲುಗಳ ತೊಗಲಿ ನೊಂದಿಗೆ ತಪ್ಪಿಸಿಕೊಂಡೆನು.

ಕೀರ್ತನೆಗಳು 32:3

ನಾನು ಮೌನವಾಗಿದ್ದಾಗ ದಿನವೆಲ್ಲಾ ನರಳುವದ ರಿಂದ ನನ್ನ ಎಲುಬುಗಳು ಸವೆದು ಹೋದವು.

ಕೀರ್ತನೆಗಳು 38:2

ನಿನ್ನ ಬಾಣಗಳು ನನ್ನಲ್ಲಿ ಬಲವಾಗಿ ನೆಟ್ಟಿವೆ; ನಿನ್ನ ಕೈ ನನ್ನ ಮೇಲೆ ಭಾರವಾಗಿದೆ.

ಕೀರ್ತನೆಗಳು 39:10

ನನ್ನಿಂದ ನಿನ್ನ ಪೆಟ್ಟನ್ನು ತೊಲಗಿಸು; ನಿನ್ನ ಕೈಹೊಡೆ ತದಿಂದ ನಾನು ಸತ್ತು ಹೋಗುತ್ತೇನೆ.

ಯೆಶಾಯ 8:21

ಅವರು ಘೋರ ಕಷ್ಟಕ್ಕೊಳಗಾಗಿ ಹಸಿದು ದೇಶದಲ್ಲಿ ಅಲೆಯು ವರು; ಅವರು ಹಸಿದಾಗ ರೇಗಿಕೊಂಡು ತಮ್ಮ ರಾಜ ನನ್ನೂ ದೇವರನ್ನೂ ಶಪಿಸಿ ಮೇಲಕ್ಕೆ ನೋಡುವರು.ಅವರು ಭೂಮಿಯನ್ನು ದೃಷ್ಟಿಸಿದರೂ ಇಗೋ, ಇಕ್ಕಟ್ಟೆಂಬ ಕತ್ತಲೂ ಸಂಕಟವೆಂಬ ಅಂಧಕಾರವೂ ಕವಿದುಕೊಂಡಿರುವದು; ಅವರು ಕಾರ್ಗತ್ತಲೆಗೆ ತಳ್ಳಲ್ಪ ಡುವರು.

Interlinear

Choose Theme