Cross references
ಆಗ ತನ್ನ ತಲೆಯಮೇಲೆ ಬೂದಿಯನ್ನು ಹಾಕಿಕೊಂಡು ತಾನು ಧರಿಸಿಕೊಂಡಿದ್ದ ವಿವಿಧವಾದ ವಸ್ತ್ರವನ್ನು ಹರಿದು ತನ್ನ ಕೈಗಳನ್ನು ತಲೆಯ ಮೇಲೆ ಇಟ್ಟುಕೊಂಡು ಅಳುತ್ತಾ ಹೋದಳು.
ಆದದ್ದನ್ನೆಲ್ಲಾ ಮೊರ್ದೆಕೈಗೆ ತಿಳಿದಾಗ ಮೊರ್ದೆಕೈ ತನ್ನ ವಸ್ತ್ರಗಳನ್ನು ಹರಕೊಂಡು, ಗೋಣಿಯ ತಟ್ಟನ್ನು ಉಟ್ಟುಕೊಂಡು, ಬೂದಿಯನ್ನು ಹಾಕಿಕೊಂಡು ಪಟ್ಟಣದ ಮಧ್ಯದಲ್ಲಿ ಹೋಗಿ ವ್ಯಥೆ ಯಿಂದ ಗಟ್ಟಿಯಾಗಿ ಕೂಗಿದನು.
ಇದಲ್ಲದೆ ಅರಸನ ಮಾತೂ ಅವನ ಕಟ್ಟ ಳೆಯೂ ಯಾವ ಯಾವ ಸೀಮೆಯಲ್ಲಿ ಯಾವ ಯಾವ ಸ್ಥಳಕ್ಕೆ ಹೋಯಿತೋ ಅಲ್ಲಿ ಯೆಹೂದ್ಯರೊಳಗೆ ಮಹಾ ದುಃಖವೂ ಉಪವಾಸವೂ ಅಳುವಿಕೆಯೂ ಗೋಳಾ ಡುವಿಕೆಯೂ ಉಂಟಾಗಿತ್ತು. ಅನೇಕರು ಗೋಣಿಯ ತಟ್ಟನ್ನು ಉಟ್ಟುಕೊಂಡು ಬೂದಿಯಲ್ಲಿ ಮಲಗಿ ಕೊಂಡರು.
ನನ್ನ ನೆರೆಯವರು ತಡೆಯುತ್ತಾರೆ; ನನ್ನ ಪರಿಚಯದ ಸ್ನೇಹಿತರು ನನ್ನನ್ನು ಮರೆತ್ತಿದ್ದಾರೆ.
ಆದದರಿಂದ ನನ್ನನ್ನು ಅಸಹ್ಯಿಸಿಕೊಂಡು ದೂಳಿಯ ಲ್ಲಿಯೂ ಬೂದಿಯಲ್ಲಿಯೂ ಪಶ್ಚಾತ್ತಾಪ ಪಡುತ್ತೇನೆ ಅಂದನು.
ನನ್ನ ಬಾಸುಂಡೆಗಳು ನನ್ನ ಮೂಢತ್ವದ ನಿಮಿತ್ತ ನಾರುತ್ತಾ ಕೀವು ತುಂಬಿ ಅವೆ.
ನನ್ನ ನಡುವು ಉರಿಯಿಂದ ತುಂಬಿದೆ; ನನ್ನ ಮಾಂಸದಲ್ಲಿ ಸ್ವಸ್ಥವೇನೂ ಇಲ್ಲ.
ಚೀಯೋ ನಿನಲ್ಲಿ ದುಃಖಿಸುವವರಿಗೆ ಬೂದಿಗೆ ಬದಲಾಗಿ ಸೌಂದರ್ಯವನ್ನೂ ದುಃಖಕ್ಕೆ ಬದಲಾಗಿ ಆನಂದ ತೈಲವನ್ನೂ ಕುಂದಿದ ಆತ್ಮಕ್ಕೆ ಬದಲಾಗಿ ಸ್ತೋತ್ರದ ವಸ್ತ್ರವನ್ನೂ ಕೊಡುವದಕ್ಕೆ ನನ್ನನ್ನು ನೇಮಿಸಿದ್ದಾನೆ. ಆಗ ಅವರಿಗೆ ನೀತಿವೃಕ್ಷಗಳೆಂದೂ ಕರ್ತನು ತಾನು ಮಹಿಮೆ ಹೊಂದುವದಕ್ಕೋಸ್ಕರ ನೆಟ್ಟ ಗಿಡಗಳೆಂದೂ ಹೆಸರಾಗುವದು.
ಆದಾಗ್ಯೂ ಅವರು ನನ್ನ ಮಾತನ್ನು ಕೇಳದೆ ಕಿವಿಗೊಡದೆ ತಮ ಕುತ್ತಿಗೆಯನ್ನು ಕಠಿಣಮಾಡಿಕೊಂಡು ತಮ್ಮ ಪಿತೃಗಳಿಗಿಂತ ಕೆಟ್ಟದ್ದನ್ನು ಮಾಡಿದರು.
ನಿನ್ನ ನಿಮಿತ್ತ ದುಃಖದಿಂದ ಅರಚಿ ತಲೆಗೆ ದೂಳೆರೆಚಿಕೊಂಡು ಬೂದಿಯಲ್ಲಿ ಬಿದ್ದು ಹೊರಳಾಡಿ;
ಆ ಮಾತು ನಿನೆವೆಯ ಅರಸನಿಗೆ ಮುಟ್ಟಿದಾಗ ಅವನು ತನ್ನ ಸಿಂಹಾಸನದಿಂದ ಎದ್ದು ತನ್ನ ನಿಲುವಂಗಿಯನ್ನು ತೆಗೆದಿಟ್ಟು ಗೋಣೀತಟ್ಟನ್ನು ಉಟ್ಟುಕೊಂಡು ಬೂದಿ ಯಲ್ಲಿ ಕೂತು ಕೊಂಡನು.
ಖೊರಾಜಿನೇ, ನಿನಗೆ ಅಯ್ಯೋ! ಬೆತ್ಸಾಯಿದವೇ, ನಿನಗೆ ಅಯ್ಯೋ! ಯಾಕಂದರೆ ನಿನ್ನೊಳಗೆ ನಡೆದ ಮಹತ್ಕಾರ್ಯಗಳು ತೂರ್ ಮತ್ತು ಸೀದೋನ್‌ಗಳಲ್ಲಿ ನಡೆಯುತ್ತಿದ್ದರೆ ಅವುಗಳು ಆಗಲೇ ಗೋಣೀತಟ್ಟನ್ನು ಸುತ್ತಿಕೊಂಡು ಬೂದಿಯಲ್ಲಿ ಕೂತು ಮಾನಸಾಂತರಪಡುತ್ತಿದ್ದವು.
ಅವನ ಬಾಗಲಿನಲ್ಲಿ ಲಾಜರನೆಂಬ ಒಬ್ಬ ಭಿಕ್ಷುಕನು ಬಿದ್ದುಕೊಂಡಿದ್ದನು; ಅವನು ಮೈ ತುಂಬಾ ಹುಣ್ಣೆದ್ದವನು.