Home Bibles ☰ Books ಯೋಬ 20:12 · ಕನ್ನಡ ಬೈಬಲ್
ಯೋಬ 20:12 · ಕನ್ನಡ ಬೈಬಲ್

ಅವನ ಬಾಯಿಗೆ ಕೆಟ್ಟತನವು ಸಿಹಿಯಾಗಿದ್ದಾಗ್ಯೂ ನಾಲಿಗೆಯ ಕೆಳಗೆ ಅದನ್ನು ಬಚ್ಚಿಟ್ಟರೂ

Cross references

ಆದಿಕಾಂಡ 3:6

ಸ್ತ್ರೀಯು--ಆ ಮರದ ಫಲವು ಆಹಾರಕ್ಕೆ ಒಳ್ಳೇದಾಗಿಯೂ ಕಣ್ಣಿಗೆ ರಮ್ಯವಾಗಿಯೂ ಒಬ್ಬನನ್ನು ಜ್ಞಾನಿಯನ್ನಾಗಿ ಮಾಡುವದಕ್ಕೆ ಅಪೇಕ್ಷಿಸತಕ್ಕದ್ದಾಗಿಯೂ ಅದೆ ಎಂದು ನೋಡಿ ಅದರ ಫಲವನ್ನು ತೆಗೆದುಕೊಂಡು ತಿಂದಳು; ತನ್ನ ಸಂಗಡ ಇದ್ದ ತನ್ನ ಗಂಡನಿಗೂ ಕೊಟ್ಟಳು; ಅವನೂ ತಿಂದನು.

ಯೋಬ 15:16

ನೀರಿನಂತೆ ಅನ್ಯಾಯವನ್ನು ಕುಡಿಯುವ ಮನುಷ್ಯನು ಎಷ್ಟು ಹೆಚ್ಚಾಗಿ ಕೆಟ್ಟು ಅಸಹ್ಯವಾಗಿಯೂ ಮಲೀನನಾದವನಾಗಿಯೂ ಇದ್ದಾನಲ್ಲಾ!

ಕೀರ್ತನೆಗಳು 10:7

ಅವನ ಬಾಯಿ ಶಾಪದಿಂದಲೂ ಮೋಸದಿಂದಲೂ ವಂಚನೆಯಿಂದಲೂ ತುಂಬಿದೆ; ಅವನ ನಾಲಿಗೆಯ ಕೆಳಗೆ ಕೇಡೂ ವ್ಯರ್ಥತೆಯೂ ಇವೆ.

ಕೀರ್ತನೆಗಳು 109:17

ಅವನು ಶಾಪವನ್ನು ಪ್ರೀತಿ ಮಾಡಿದನು; ಅದು ಅವನಿಗೆ ಬರಲಿ. ಆಶೀರ್ವಾದಕ್ಕೆ ಮೆಚ್ಚಲಿಲ್ಲ; ಅದು ಅವನಿಗೆ ದೂರವಾಗಿರಲಿ.

ಸಾಮೇತಿಗಳು 9:17

ಕದಿಯಲ್ಪಟ್ಟ ನೀರುಗಳು ಸಿಹಿಯಾಗಿವೆ ರಹಸ್ಯ ದಲ್ಲಿ ತಿನ್ನುವ ರೊಟ್ಟಿಯು ರುಚಿಯಾಗಿದೆ ಎಂದು ಹೇಳುತ್ತಾಳೆ.ಆದರೆ ಸತ್ತವರು ಅಲ್ಲಿದ್ದಾರೆಂದೂ ಪಾತಾಳದ ಅಗಾಧಗಳಲ್ಲಿ ಅವಳ ಅಥಿತಿಗಳು ಇದ್ದಾ ರೆಂದೂ ಅವನಿಗೆ ತಿಳಿಯದು.

ಸಾಮೇತಿಗಳು 20:17

ಮೋಸದಿಂದ ಸಿಕ್ಕಿದ ರೊಟ್ಟಿಯು ಮನು ಷ್ಯನಿಗೆ ರುಚಿ; ಆಮೇಲೆ ಅವನ ಬಾಯಿಯು ಮರಳಿ ನಿಂದ ತುಂಬುವದು.

ಸಭಾಪ್ರಸಂಗಿ 11:9

ಓ ಯೌವನಸ್ಥನೇ, ನಿನ್ನ ಯೌವನದಲ್ಲಿ ಸಂತೋಷಪಡು. ನಿನ್ನ ಯೌವನದ ದಿನಗಳಲ್ಲಿ ನಿನ್ನ ಹೃದಯವು ನಿನ್ನನ್ನು ಆನಂದಪಡಿಸಲಿ; ನೀನು ನಿನ್ನ ಹೃದಯದ ಮಾರ್ಗಗಳಲ್ಲಿಯೂ ನಿನ್ನ ಕಣ್ಣುಗಳ ನೋಟ ದಲ್ಲಿಯೂ ನಡೆ; ಆ ಎಲ್ಲಾ ಸಂಗತಿಗಳಿಗಾಗಿ ದೇವರು ನಿನ್ನನ್ನು ನ್ಯಾಯತೀರ್ಪಿಗೆ ತರುವನೆಂದು ತಿಳಿದುಕೋ.ಆದಕಾರಣ ನಿನ್ನ ಹೃದಯದಿಂದ ದುಃಖವನ್ನು ತೆಗೆದು ಹಾಕು; ನಿನ್ನ ಶರೀರದಿಂದ ಕೆಟ್ಟದ್ದನ್ನು ತೆಗೆದುಬಿಡು; ಬಾಲ್ಯವೂ ಯೌವನವೂ ವ್ಯರ್ಥವಾಗಿವೆ.

Interlinear

Choose Theme