Home Bibles ☰ Books ಯೋಬ 20:27 · ಕನ್ನಡ ಬೈಬಲ್
ಯೋಬ 20:27 · ಕನ್ನಡ ಬೈಬಲ್

ಆಕಾಶಗಳು ಅವನ ಅಕ್ರಮವನ್ನು ಪ್ರಕಟಮಾಡುವವು; ಭೂಮಿಯು ಅವನಿಗೆ ವಿರೋಧವಾಗಿ ಏಳುವದು.

Cross references

ದ್ವಿತೀಯೋಪದೇಶಕಾಂಡ 31:28

ನಿಮ್ಮ ಗೋತ್ರಗಳ ಎಲ್ಲಾ ಹಿರಿಯರನ್ನೂ ನಿಮ್ಮ ಅಧಿಕಾರಿ ಗಳನ್ನೂ ನನ್ನ ಬಳಿಗೆ ಕೂಡಿಸಿರಿ; ಆಗ ಈ ಮಾತುಗಳನ್ನು ಅವರು ಕೇಳುವಹಾಗೆ ಆಡುವೆನು; ಆಕಾಶವನ್ನೂ ಭೂಮಿಯನ್ನೂ ಸಾಕ್ಷಿಗೆ ಕರೆಯುವೆನು.

ಯೋಬ 16:18

ಭೂಮಿಯೇ, ನನ್ನ ರಕ್ತವನ್ನು ಮುಚ್ಚಬೇಡ; ನನ್ನ ಕೂಗಿಗೆ ಸ್ಥಳ ಇಲ್ಲದೆ ಇರಲಿ.

ಯೋಬ 18:18

ಬೆಳಕಿನಿಂದ ಅವನನ್ನು ಕತ್ತ ಲೆಗೆ ದೊಬ್ಬುವರು; ಲೋಕದಿಂದ ಓಡಿಸುವರು.

ಕೀರ್ತನೆಗಳು 44:20

ನಾವು ನಮ್ಮ ದೇವರ ಹೆಸರನ್ನು ಮರೆತು ಅನ್ಯ ದೇವರಿಗೆ ನಮ್ಮ ಕೈಗಳನ್ನು ಚಾಚಿದರೆ

ಯೆಶಾಯ 26:21

ಇಗೋ, ಭೂನಿವಾಸಿಗಳ ದುಷ್ಕೃತ್ಯಗಳನ್ನು ಶಿಕ್ಷಿಸು ವದಕ್ಕೆ ಕರ್ತನು ತನ್ನ ಸ್ಥಳದಿಂದ ಹೊರಟಿದ್ದಾನೆ; ಭೂಮಿಯು ಸಹ ತನ್ನಲ್ಲಿ ಕೊಂದು ಹಾಕಿದವರನ್ನು ಇನ್ನು ಮುಚ್ಚಿಕೊಳ್ಳದೆ ತನ್ನಲ್ಲಿರುವ ರಕ್ತಾಪರಾಧವನ್ನು ಪ್ರಕಟಮಾಡುವದು.

ಯೆರೆಮಿಯ 29:23

ಇಗೋ, ಕರ್ತನ ಬಿರುಗಾಳಿ ರೌದ್ರವಾಗಿ ಹೊರ ಡುತ್ತದೆ. ಅದು ಬಡಕೊಂಡು ಹೋಗುವ ಬಿರುಗಾಳಿ ಯೇ; ಬಾಧೆಯು ದುಷ್ಟರ ತಲೆಯ ಮೇಲೆ ಬೀಳುವದು.ಕರ್ತನ ಕೋಪದ ಉರಿಯು ಅದನ್ನು ಮಾಡುವ ವರೆಗೂ ತನ್ನ ಹೃದಯದ ಆಲೋಚನೆಗಳನ್ನು ನಡಿಸಿ ರುವ ವರೆಗೂ ತಿರುಗುವದಿಲ್ಲ; ನೀವು ಅಂತ್ಯದಿನದಲ್ಲಿ ಅದನ್ನು ಯೋಚಿಸುವಿರಿ.

ಮಲಾಕಿ 3:5

ನ್ಯಾಯಕ್ಕೋಸ್ಕರ ನಿಮ್ಮನ್ನು ನಾನು ಸವಿಾಪಿ ಸುತ್ತೇನೆ; ಆಗ ಕಣಿಹೇಳುವವರಿಗೂ ವ್ಯಭಿಚಾರಿ ಗಳಿಗೂ ಸುಳ್ಳು ಪ್ರಮಾಣಮಾಡುವವರಿಗೂ ಸಂಬಳ ದಲ್ಲಿ ಕೂಲಿಯವನಿಗೂ ವಿಧವೆಗೂ ದಿಕ್ಕಿಲ್ಲದವನಿಗೂ ಬಲಾತ್ಕಾರ ಮಾಡುವವರಿಗೂ ಅನ್ಯನ ನ್ಯಾಯವನ್ನು ತಿರಿಗಿಸಿ ಬಿಡುವವರಿಗೂ ನನಗೆ ಭಯಪಡದವರಿಗೂ ವಿರೋಧವಾಗಿ ಶೀಘ್ರವಾದ ಸಾಕ್ಷಿಗಾರನಾಗಿರು ವೆನೆಂದು ಸೈನ್ಯಗಳ ಕರ್ತನು ಹೇಳುತ್ತಾನೆ.

ಲೂಕ 12:2

ಪ್ರಕಟವಾಗದಂತೆ ಯಾವದೂ ಮರೆಯಾಗಿರು ವದಿಲ್ಲ; ಇಲ್ಲವೆ ತಿಳಿಯುವದಕ್ಕಾಗದಂತೆ ಯಾವದೂ ಗುಪ್ತವಾಗಿರುವದಿಲ್ಲ.

ರೋಮಾಪುರದವರಿಗೆ 2:16

ಮನುಷ್ಯರ ರಹಸ್ಯಗಳ ವಿಷಯ ವಾಗಿ ನನ್ನ ಸುವಾರ್ತೆಗನುಸಾರ ಯೇಸು ಕ್ರಿಸ್ತನ ಮುಖಾಂತರ ದೇವರು ನ್ಯಾಯತೀರಿಸುವ ದಿವಸದಲ್ಲಿ ಅವರು ತೀರ್ಪು ಹೊಂದುವರು.

1 ಕೊರಿಂಥದವರಿಗೆ 4:5

ಆದದರಿಂದ ಕಾಲಕ್ಕೆ ಮೊದಲು ಕರ್ತನು ಬರುವತನಕ ಯಾವದನ್ನೂ ಕುರಿತು ತೀರ್ಪು ಮಾಡಬೇಡಿರಿ; ಆತನು ಕತ್ತಲೆಯ ಲ್ಲಿರುವ ಗುಪ್ತಕಾರ್ಯಗಳನ್ನು ಬೆಳಕಿಗೆ ತರುವನು; ಹೃದಯದ ಯೋಚನೆಗಳನ್ನು ಪ್ರತ್ಯಕ್ಷಪಡಿಸುವನು; ಆಗ ಪ್ರತಿಯೊಬ್ಬನಿಗೆ ಬರತಕ್ಕ ಹೊಗಳಿಕೆಯು ದೇವ ರಿಂದ ಬರುವದು.

Interlinear

Choose Theme