ನಾನಾದರೆ ಮನುಷ್ಯನಿಗೆ ನನ್ನ ದೂರು ಹೇಳುವೆನೋ? ಹೇಳಿ ದರೂ ನನ್ನ ಆತ್ಮವು ಯಾಕೆ ವ್ಯಾಕುಲಪಡಬಾರದು?
Cross references
ಮೋಶೆಯು ಇಸ್ರಾಯೇಲ್ ಮಕ್ಕಳಿಗೆ ಹಾಗೆ ಹೇಳಿ ದಾಗ ಅವರು ಮನೋವೇದನೆಯ ದೆಸೆಯಿಂದಲೂ ಕ್ರೂರವಾದ ದಾಸತ್ವದ ದೆಸೆಯಿಂದಲೂ ಮೋಶೆಯ ಮಾತನ್ನು ಕೇಳಲಿಲ್ಲ.
ನಿನ್ನ ದಾಸಿಯನ್ನು ಬೆಲಿಯಾಳನ ಮಗಳೆಂದು ನೆನಸಬೇಡ; ಯಾಕಂದರೆ ನನ್ನ ಹೆಚ್ಚಾದ ಚಿಂತೆಯಿಂದಲೂ ದುಃಖದಿಂದಲೂ ಈ ವರೆಗೂ ಮಾತನಾಡಿಕೊಳ್ಳುತ್ತಾ ಇದ್ದೆನು ಅಂದಳು.
ಇಸ್ರಾ ಯೇಲಿನ ಅರಸನು ಗೋಡೆಯ ಮೇಲೆ ಹಾದು ಹೋಗುತ್ತಿರುವಾಗ ಒಬ್ಬ ಸ್ತ್ರೀಯು ಅವನನ್ನು ಬೇಡುವ ವಳಾಗಿ--ನನ್ನ ಯಜಮಾನನೇ, ಅರಸನೇ, ಸಹಾಯ ಮಾಡು ಅಂದಳು.
ನಾನು ನಿರೀಕ್ಷಿಸುವ ಹಾಗೆ ನನ್ನ ಶಕ್ತಿ ಏನು? ನಾನು ನನ್ನ ಆಯುಷ್ಯವನ್ನು ಹೆಚ್ಚಿಸುವ ಹಾಗೆ ನನ್ನ ಅಂತ್ಯವೇನು?
ಆದದರಿಂದ ನಾನು ನನ್ನ ಬಾಯಿಯನ್ನು ಮುಚ್ಚು ವದಿಲ್ಲ; ನಾನು ಆತ್ಮ ವೇದನೆಯಿಂದ ಮಾತನಾಡು ವೆನು; ನನ್ನ ಮನೋವ್ಯಥೆಯಲ್ಲಿ ನಾನು ಗುಣುಗುಟ್ಟು ವೆನು.
ನನ್ನ ಪ್ರಾಣವು ನನ್ನ ಜೀವನಕ್ಕಾಗಿ ಬೇಸರಗೊಂಡಿದೆ. ನನ್ನ ದೂರುಗಳನ್ನು ನನ್ನ ಮೇಲೆಯೇ ಬಿಡುವೆನು; ನನ್ನ ಮನೋವ್ಯಥೆ ಯಿಂದ ಮಾತನಾಡುವೆನು.
ನಾನು ದೇವರಿಗೆ ಹೀಗೆ ಹೇಳುತ್ತೇನೆ--ನನ್ನನ್ನು ಖಂಡಿಸಬೇಡ; ಯಾವದಕ್ಕೋ ಸ್ಕರ ನನ್ನ ಸಂಗಡ ವ್ಯಾಜ್ಯಮಾಡುತ್ತೀ ಎಂದು ನನಗೆ ತಿಳಿಸು.
ನನ್ನ ಅಕ್ರಮವನ್ನು ವಿಚಾರಿಸುತ್ತೀ; ನನ್ನ ಪಾಪವನ್ನು ಹುಡುಕುತ್ತೀ.
ನನ್ನ ದೇವರೇ, ನನ್ನ ದೇವರೇ, ಯಾಕೆ ನನ್ನನ್ನು ಕೈಬಿಟ್ಟಿದ್ದೀ? ನೀನು ಯಾಕೆ ನನಗೆ ಸಹಾಯ ಮಾಡದೆಯೂ ನನ್ನ ಕೂಗಿಗೆ ಕಿವಿ ಗೊಡದೆಯೂ ದೂರವಾಗಿದ್ದೀ.
ನನ್ನ ಪ್ರಾಣವೇ, ಕುಗ್ಗಿಹೋಗಿರುವದೇನು? ಯಾಕೆ ನನ್ನಲ್ಲಿ ವ್ಯಾಕುಲಪಡುತ್ತೀ? ದೇವರನ್ನು ನಿರೀಕ್ಷಿಸು. ನನ್ನ ಮುಖದ ಲಕ್ಷಣವೂ ನನ್ನ ದೇವರೂ ಆಗಿರುವಾತನನ್ನು ನಾನು ಇನ್ನೂ ಕೊಂಡಾಡುವೆನು.
ನಾನು ವ್ಯಥೆಪಡುತ್ತಾ ದೇವರನ್ನು ಜ್ಞಾಪಕಮಾಡಿಕೊಂಡೆನು. ನಾನು ಚಿಂತಿ ಸುವದರಿಂದ ನನ್ನ ಆತ್ಮವು ಬಳಲಿ ಹೋಗಿದೆ ಸೆಲಾ.
ಓ ಕರ್ತನೇ, ನನ್ನ ಪ್ರಾರ್ಥನೆಯನ್ನು ಕೇಳು; ನನ್ನ ಮೊರೆಯು ನಿನ್ನ ಬಳಿಗೆ ಸೇರಲಿ.
ಆತನ ಮುಂದೆ ನನ್ನ ಚಿಂತೆಯನ್ನು ಹೊಯ್ದಿದ್ದೇನೆ; ನನ್ನ ಇಕ್ಕಟ್ಟನ್ನು ಆತನ ಮುಂದೆ ತಿಳಿಸಿದ್ದೇನೆ.
ಆತನು ಅವರಿಗೆ--ನನ್ನ ಪ್ರಾಣವು ಮರಣಹೊಂದುವಷ್ಟು ಅತಿ ದುಃಖಕ್ಕೆ ಒಳಗಾಗಿದೆ; ನೀವು ಇಲ್ಲೇ ಇದ್ದು ನನ್ನೊಡನೆ ಎಚ್ಚರವಾಗಿರ್ರಿ ಅಂದನು.