Cross references
ಅವರು ಅವನಿಗೆನೀನು ಸುಮ್ಮನೆ ಇರು; ನಿನ್ನ ಬಾಯಿಯ ಮೇಲೆ ನಿನ್ನ ಕೈಹಾಕಿಕೊಂಡು ನಮ್ಮ ಸಂಗಡ ಬಂದು ನಮಗೆ ತಂದೆಯಾಗಿಯೂ ಯಾಜಕನಾಗಿಯೂ ಇರು. ನೀನು ಒಬ್ಬನ ಮನೆಗೆ ಯಾಜಕನಾಗಿರುವದು ಒಳ್ಳೇದೋ ಅಥವಾ ಇಸ್ರಾಯೇಲಿನಲ್ಲಿ ಒಂದು ಗೋತ್ರಕ್ಕೂ ಒಂದು ಕುಟುಂಬಕ್ಕೂ ಯಾಜಕನಾಗಿರುವದು ಒಳ್ಳೇದೋ ಅಂದರು.
ಅವರು ದೂರದಿಂದ ತಮ್ಮ ಕಣ್ಣುಗಳನ್ನು ಎತ್ತಿದಾಗ ಅವನ ಗುರುತು ತಿಳಿಯದೆ ತಮ್ಮ ಸ್ವರವನ್ನೆತ್ತಿ ಅತ್ತು, ತಮ್ಮ ತಮ್ಮ ನಿಲುವಂಗಿಗಳನ್ನು ಹರಿದು, ತಮ್ಮ ತಲೆಯ ಮೇಲೆ ಧೂಳನ್ನೂ ಆಕಾಶದ ಕಡೆಗೆ ತೂರಿದರು.ಅವರು ಅವನ ಸಂಗಡ ಏಳು ಹಗಲು ಏಳು ರಾತ್ರಿ ನೆಲದ ಮೇಲೆ ಕೂತುಕೊಂಡರು. ಒಬ್ಬನಾದರೂ ಒಂದು ಮಾತನ್ನೂ ಅವನಿಗೆ ಹೇಳಲಿಲ್ಲ; ಯಾಕಂದರೆ ಅವನ ದುಃಖವು ಬಹಳ ಅಧಿಕವೆಂದು ನೋಡಿದರು.
ಇದಕ್ಕೋಸ್ಕರ ಯಥಾರ್ಥರು ಆಶ್ಚರ್ಯ ಪಡುವರು: ನಿರ್ಮಲನು ಕಪಟಿಗೆ ವಿರೋಧವಾಗಿ ತನ್ನನ್ನು ಉದ್ರೇಕಿಸಿಕೊಳ್ಳುವನು.
ನನ್ನ ಚರ್ಮಕ್ಕೂ ನನ್ನ ಮಾಂಸಕ್ಕೂ ನನ್ನ ಎಲುಬು ಅಂಟುತ್ತದೆ; ನನ್ನ ಹಲ್ಲುಗಳ ತೊಗಲಿ ನೊಂದಿಗೆ ತಪ್ಪಿಸಿಕೊಂಡೆನು.
ಪ್ರಧಾನರು ನುಡಿಗಳನ್ನು ಬಿಗಿಹಿಡಿದು ತಮ್ಮ ಬಾಯಿಯ ಮೇಲೆ ಕೈ ಇಟ್ಟು ಕೊಂಡರು.
ಇಗೋ, ನೀಚನಾಗಿದ್ದೇನೆ; ನಿನಗೆ ಏನು ಪ್ರತ್ಯುತ್ತರ ಕೊಡಲಿ? ನನ್ನ ಕೈಯಿಂದ ಬಾಯಿ ಮುಚ್ಚಿಕೊಳ್ಳುತ್ತೇನೆ.
ನಾನು ಮೌನವಾದೆನು, ನನ್ನ ಬಾಯಿ ತೆರೆಯಲಿಲ್ಲ; ನೀನು ಅದನ್ನು ಮಾಡಿದಿ.
ನೀನು ಉಬ್ಬಿಕೊಂಡು ಮೂರ್ಖ ನಾಗಿ ನಡೆದಿದ್ದರೆ ಇಲ್ಲವೆ ಕೆಟ್ಟದ್ದಾಗಿ ಆಲೋಚಿಸಿದ್ದರೆ ನಿನ್ನ ಬಾಯಿಯ ಮೇಲೆ ಕೈಯಿಟ್ಟುಕೋ.ಹಾಲು ಕರೆಯುವದರಿಂದ ನಿಜವಾಗಿಯೂ ಬೆಣ್ಣೆ ಬರುತ್ತದೆ; ಮೂಗು ಹಿಂಡುವದರಿಂದ ರಕ್ತ ಬರುತ್ತದೆ; ಹಾಗೆಯೇ ಕೋಪವನ್ನೆಬ್ಬಿಸುವದರಿಂದ ಜಗಳ ಬರುತ್ತದೆ.
ಆದದ ರಿಂದ ಆ ಕಾಲದಲ್ಲಿ ಬುದ್ದಿವಂತನು ಮೌನವಾಗಿ ರುವನು; ಯಾಕಂದರೆ ಅದು ಕೆಟ್ಟ ಕಾಲವಾಗಿದೆ.
ಜನಾಂಗಗಳು ನೋಡಿ ತಮ್ಮ ತ್ರಾಣಕ್ಕೆಲ್ಲಾ ನಾಚಿಕೆ ಪಡುವರು; ತಮ್ಮ ಕೈಗಳನ್ನು ಬಾಯಿಯ ಮೇಲೆ ಇಡುವರು; ಅವರ ಕಿವಿಗಳು ಕಿವುಡಾಗಿ ಹೋಗುವವು.
ಹಾ, ದೇವರ ಜ್ಞಾನದ ಮತ್ತು ತಿಳುವಳಿಕೆಯ ಐಶ್ವರ್ಯವು ಎಷ್ಟೋ ಅಗಾಧ ವಾಗಿದೆ! ಆತನ ತೀರ್ಪುಗಳು ಪರಿಶೋಧನೆಗೂ ಆತನ ಮಾರ್ಗಗಳು ಕಂಡು ಹಿಡಿಯುವದಕ್ಕೂ ಅಸಾಧ್ಯ ವಾಗಿವೆ!