ನಮ್ಮನ್ನು ಬಿಟ್ಟು ಹೋಗು ಎಂದೂ ಸರ್ವಶಕ್ತನು ನಮಗೆ ಏನು ಮಾಡುವನೆಂದೂ ದೇವರಿಗೆ ಹೇಳಿದವರು ಅವರೇ.
Cross references
ನಾನು ಫರೋಹನ ಬಳಿಗೆ ಬಂದು ನಿನ್ನ ಹೆಸರಿನಲ್ಲಿ ಮಾತನಾಡಿದಂದಿನಿಂದ ಈ ಜನರಿಗೆ ಅವನು ಕೇಡನ್ನೇ ಮಾಡುತ್ತಾನೆ. ನೀನು ನಿನ್ನ ಜನರನ್ನು ತಪ್ಪಿಸಲಿಲ್ಲವಲ್ಲಾ ಅಂದನು.
ಅವನ ಗೂಳಿ ಹೇಸದೆ ಬಸುರು ಮಾಡುತ್ತದೆ; ಅವನ ಆಕಳು ತಪ್ಪದೆ ಈಯುತ್ತದೆ;
ಅವರು ದೇವರಿಗೆ--ನಮ್ಮನ್ನು ಬಿಟ್ಟು ಹೋಗು; ನಿನ್ನ ಮಾರ್ಗಗಳ ತಿಳುವಳಿಕೆಯನ್ನು ನಾವು ಮೆಚ್ಚುವದಿಲ್ಲ.
ನಮಗೆ ಒಳ್ಳೇದನ್ನು ಮಾಡುವವರು ಯಾರೆಂದು ಹೇಳುವವರು ಅನೇಕರು. ಕರ್ತನೇ, ನಿನ್ನ ಮುಖದ ಬೆಳಕನ್ನು ನಮ್ಮ ಮೇಲೆ ಪ್ರಕಾಶಗೊಳಿಸು.
ನಿಮ್ಮ ದಾರಿಗೆ ಓರೆಯಾಗಿರಿ, ಮಾರ್ಗ ದಿಂದ ತೊಲಗಿರಿ; ಇಸ್ರಾಯೇಲ್ಯರ ಪರಿಶುದ್ಧನನ್ನು ನಮ್ಮ ಮುಂದೆ ನಿಲ್ಲದ ಹಾಗೆ ಮಾಡಿರಿ ಎಂದು ಹೇಳುತ್ತಾರೆ.
ನೀವು--ದೇವರನ್ನು ಸೇವಿಸುವದು ವ್ಯರ್ಥವೆಂದೂ ನಾವು ಆತನ ನಿಯಮಗಳನ್ನು ಕೈಕೊಂಡು ಸೈನ್ಯಗಳ ಕರ್ತನ ಮುಂದೆ ದುಃಖವಾಗಿ ನಡೆದದ್ದರಿಂದ ಏನು ಪ್ರಯೋ ಜನವೆಂದೂ ಹೇಳಿದಿರಿ.
ಆಗ ಇಗೋ, ಅವರು--ಯೇಸುವೇ, ದೇವ ಕುಮಾರನೇ, ನಿನ್ನೊಂದಿಗೆ ನಮ್ಮ ಗೊಡವೆ ಏನು? ಸಮಯಕ್ಕೆ ಮುಂಚೆ ನಮ್ಮನ್ನು ಸಂಕಟಪಡಿಸು ವದಕ್ಕಾಗಿ ಇಲ್ಲಿಗೆ ಬಂದೆಯಾ ಎಂದು ಕೂಗಿ ಹೇಳಿದರು.
ಆಗ ಇಗೋ, ಪಟ್ಟಣದವರೆಲ್ಲರು ಯೇಸುವನ್ನು ಸಂಧಿಸುವದಕ್ಕೆ ಹೊರಗೆ ಬಂದರು; ಮತ್ತು ಅವರು ಆತನನ್ನು ನೋಡಿ ತಮ್ಮ ಮೇರೆಗಳನ್ನು ಬಿಟ್ಟು ಹೋಗಬೇಕೆಂದು ಬೇಡಿಕೊಂಡರು.
ಇದಲ್ಲದೆ ಅವರು ತಮ್ಮ ತಿಳುವಳಿಕೆಯಿಂದ ದೇವರನ್ನು ಸ್ಮರಿಸುವದಕ್ಕೆ ಮನಸ್ಸಿಲ್ಲದ ಕಾರಣ ದೇವರು ಅವರನ್ನು ಮಾಡಬಾರದವುಗಳನ್ನು ಮಾಡು ವಂತೆ ಅನಿಷ್ಟಭಾವಕ್ಕೆ ಒಪ್ಪಿಸಿದನು.