Home Bibles ಯೋಬ 22:29 · ಕನ್ನಡ ಬೈಬಲ್
ಯೋಬ 22:29 · ಕನ್ನಡ ಬೈಬಲ್

ಒಬ್ಬನು ತಗ್ಗುವಲ್ಲಿ ಎತ್ತುವದುಂಟು ಅನ್ನುವಿ; ದೀನ ನನ್ನು ಆತನು ರಕ್ಷಿಸುವನು.ಒಂಟಿಯಾದ ನಿರ ಪರಾಧಿಯನ್ನು ತಪ್ಪಿಸುವನು; ನಿನ್ನ ಕೈಗಳ ಶುದ್ಧತ್ವದಿಂದ ಅವನು ತಪ್ಪಿಸಿಕೊಳ್ಳುವನು.

Cross references

ಯೋಬ 5:19

ಆರು ಇಕ್ಕಟ್ಟುಗಳಿಂದ ನಿನ್ನನ್ನು ತಪ್ಪಿಸುವನು; ಹೌದು, ಏಳರಲ್ಲಿಯೂ ಕೇಡು ನಿನ್ನನ್ನು ಮುಟ್ಟದು.

ಕೀರ್ತನೆಗಳು 9:2

ನಿನ್ನಲ್ಲಿ ಸಂತೋಷಿಸಿ ಉತ್ಸಾಹಪಡುವೆನು; ಓ ಮಹೋ ನ್ನತನೇ, ನಿನ್ನ ಹೆಸರನ್ನು ಸ್ತುತಿಸಿ ಹಾಡುವೆನು.

ಕೀರ್ತನೆಗಳು 91:14

ಅವನು ತನ್ನ ಪ್ರೀತಿಯನ್ನು ನನ್ನ ಮೇಲೆ ಇಟ್ಟಿದ್ದಾನೆ; ಆದದರಿಂದ ಅವನನ್ನು ತಪ್ಪಿಸುವೆನು; ಅವನು ನನ್ನ ಹೆಸರನ್ನು ತಿಳಿದಿರುವದರಿಂದ ಅವನನ್ನು ಉನ್ನತದಲ್ಲಿಡುವೆನು.

ಕೀರ್ತನೆಗಳು 92:9

ಇಗೋ, ಓ ಕರ್ತನೇ, ನಿನ್ನ ಶತ್ರು ಗಳು, ಓ ಕರ್ತನೇ, ಇಗೋ, ನಿನ್ನ ಶತ್ರುಗಳು ನಾಶವಾಗುವರು; ಅಕ್ರಮ ಮಾಡುವವರೆಲ್ಲರು ಚದರಿ ಹೋಗುವರು.

ಕೀರ್ತನೆಗಳು 138:6

ಕರ್ತನು ಉನ್ನತನಾಗಿದ್ದರೂ ದೀನನನ್ನು ಗಮನಿ ಸುತ್ತಾನೆ. ಆದರೆ ಗರ್ವಿಷ್ಟನನ್ನು ದೂರದಿಂದ ತಿಳು ಕೊಳ್ಳುತ್ತಾನೆ.

ಸಾಮೇತಿಗಳು 29:23

ಮನುಷ್ಯನ ಗರ್ವವು ತನ್ನನ್ನು ಹೀನಸ್ಥಿತಿಗೆ ತರುವದು; ಆತ್ಮದಲ್ಲಿ ದೀನರಾಗಿರುವವರು ಸನ್ಮಾನಹೊಂದುವರು.

ಯೆಶಾಯ 57:15

ಉನ್ನತನೂ ಎತ್ತರವಾದವನೂ ನಿತ್ಯವಾಗಿ ವಾಸಿ ಸುವವನೂ ಪರಿಶುದ್ಧನೆಂದು ಹೆಸರುಳ್ಳಾತನೂ ಹೀಗೆ ಹೇಳುತ್ತಾನೆ--ಉನ್ನತವಾದ ಪರಿಶುದ್ಧ ಸ್ಥಳದಲ್ಲಿ ವಾಸಿ ಸುವ ನಾನು ಪಶ್ಚಾತ್ತಾಪದೊಂದಿಗೆ ಮತ್ತು ದೀನನ ಆತ್ಮದೊಂದಿಗೆ ಇದ್ದುಕೊಂಡು ಅವರನ್ನು ಉಜ್ಜೀ ವಿಸುವವನಾಗಿದ್ದೇನೆ.

ಯೆಶಾಯ 66:2

ಇವುಗಳ ನ್ನೆಲ್ಲಾ ನನ್ನ ಕೈ ಉಂಟುಮಾಡಿತು; ಇವುಗಳೆಲ್ಲಾ ಇದ್ದವೆಂದು ಕರ್ತನು ಅನ್ನುತ್ತಾನೆ. ಆದರೆ ಇವನ ಮೇಲೆ ದೃಷ್ಟಿ ಇಡುವೆನು ದೀನನೂ ಜಜ್ಜಿದ ಆತ್ಮವುಳ್ಳ ವನೂ ನನ್ನ ವಾಕ್ಯಕ್ಕೆ ನಡುಗುವವನೂ ಯಾವನೋ ಅವನ ಮೇಲೆಯೂ ದೃಷ್ಟಿ ಇಡುವೆನು.

ಯೆಹೆಜ್ಕೇಲ 21:26

ದೇವರಾದ ಕರ್ತನು ಹೀಗೆ ಹೇಳುತ್ತಾನೆ-- ಮುಂಡಾಸವನ್ನು ಎತ್ತಿಡು, ಕಿರೀಟವನ್ನು ತೆಗೆದುಹಾಕು; ಅದು ಹಾಗೆಯೇ ಇರುವದಿಲ್ಲ; ತಗ್ಗಿಸಲ್ಪಟ್ಟವನನ್ನು ಹೆಚ್ಚಿಸಿ ಹೆಚ್ಚಿಸಲ್ಪಟ್ಟವನನ್ನು ತಗ್ಗಿಸು.

ಮತ್ತಾಯ 23:12

ಯಾವನಾದರೂ ತನ್ನನ್ನು ಹೆಚ್ಚಿಸಿಕೊಂಡರೆ ಅವನು ತಗ್ಗಿಸಲ್ಪಡುವನು; ತನ್ನನ್ನು ತಗ್ಗಿಸಿಕೊಳ್ಳುವವನು ಹೆಚ್ಚಿಸಲ್ಪಡುವನು.

ಲೂಕ 1:52

ಬಲಿಷ್ಠ ರನ್ನು ಅವರ ಸ್ಥಾನಗಳಿಂದ ಕೆಳಗೆ ದೊಬ್ಬಿ ದೀನರನ್ನು ಮೇಲಕ್ಕೆ ಎತ್ತಿದ್ದಾನೆ.

ಲೂಕ 14:11

ಯಾವನು ತನ್ನನ್ನು ತಾನೇ ಹೆಚ್ಚಿಸಿಕೊಳ್ಳು ತ್ತಾನೋ ಅವನು ತಗ್ಗಿಸಲ್ಪಡುವನು ಮತ್ತು ತನ್ನನ್ನು ತಗ್ಗಿಸಿಕೊಳ್ಳುವವನು ಹೆಚ್ಚಿಸಲ್ಪಡುವನು ಅಂದನು.

ಲೂಕ 18:9

ತಾವು ನೀತಿವಂತರೆಂದು ತಮ್ಮಲ್ಲಿಯೇ ಭರವಸ ವನ್ನಿಟ್ಟುಕೊಂಡು ಬೇರೆಯವರನ್ನು ಅಸಡ್ಡೆ ಮಾಡಿದ ಕೆಲವರಿಗೆ ಈ ಸಾಮ್ಯವನ್ನು ಹೇಳಿದನು.

ಯಾಕೋಬ 4:6

ಆತನು ಹೆಚ್ಚಾದ ಕೃಪೆಯನ್ನು ಕೊಡುತ್ತಾನೆ. ಆದದರಿಂದ--ದೇವರು ಅಹಂಕಾರಿಗಳನ್ನು ಎದುರಿಸು ತ್ತಾನೆ, ದೀನರಿಗಾದರೋ ಕೃಪೆಯನ್ನು ಅನುಗ್ರಹಿಸು ತ್ತಾನೆ ಎಂದು ಆತನು ಹೇಳುತ್ತಾನೆ.

1 ಪೇತ್ರ 5:5

ಅದೇ ರೀತಿಯಾಗಿ ಯೌವನಸ್ಥರೇ, ಹಿರಿಯರಿಗೆ ಅಧೀನರಾಗಿರ್ರಿ; ನೀವೆಲ್ಲರೂ ದೀನತೆಯೆಂಬ ವಸ್ತ್ರವನ್ನು ಧರಿಸಿಕೊಂಡು ಒಬ್ಬರಿಗೊಬ್ಬರು ಅಧೀನರಾಗಿರ್ರಿ. ದೇವರು ಅಹಂಕಾರಿಗಳನ್ನು ಎದುರಿಸುತ್ತಾನೆ. ದೀನರಿ ಗಾದರೊ ಕೃಪೆಯನ್ನು ಅನುಗ್ರಹಿಸುತ್ತಾನೆ.

Interlinear

Choose Theme