ಒಂಟಿಯಾದ ನಿರ ಪರಾಧಿಯನ್ನು ತಪ್ಪಿಸುವನು; ನಿನ್ನ ಕೈಗಳ ಶುದ್ಧತ್ವದಿಂದ ಅವನು ತಪ್ಪಿಸಿಕೊಳ್ಳುವನು.
Cross references
ಅದಕ್ಕೆ ಕರ್ತನು--ನನಗೆ ಸೊದೋಮ್ ಪಟ್ಟಣದೊಳಗೆ ಐವತ್ತು ಮಂದಿ ನೀತಿವಂತರು ಸಿಕ್ಕಿದರೆ ಅವರಿಗೊಸ್ಕರ ಆ ಸ್ಥಳವನ್ನೆಲ್ಲಾ ಉಳಿಸುವೆನು ಅಂದನು.
ಕರ್ತನು ಈ ಮಾತುಗಳನ್ನೆಲ್ಲಾ ಯೋಬನಿಗೆ ಹೇಳಿದ ಮೇಲೆ ಕರ್ತನು ತೇಮಾನ್ಯನಾದ ಎಲೀಫಜ ನಿಗೆ -- ನಿನ್ನ ಮೇಲೆಯೂ ನಿನ್ನ ಸ್ನೇಹಿತರಿಬ್ಬರ ಮೇಲೆಯೂ ಕೋಪಗೊಂಡಿದ್ದೇನೆ; ನೀವು ನನ್ನ ಸೇವಕನಾದ ಯೋಬನ ಪ್ರಕಾರ ನನ್ನ ವಿಷಯವಾಗಿ ಸರಿಯಾದವುಗಳನ್ನು ಮಾತಾಡಲಿಲ್ಲ.
ಹಾಗಾದರೆ ಈಗ ಏಳು ಎತ್ತುಗಳೂ ಏಳು ಹೋತಗಳೂ ನಿಮ ಗೋಸ್ಕರ ತಕ್ಕೊಂಡು ನನ್ನ ಸೇವಕನಾದ ಯೋಬನ ಬಳಿಗೆ ಬನ್ನಿರಿ; ಅವುಗಳನ್ನು ನಿಮಗೋಸ್ಕರ ದಹನ ಬಲಿಯಾಗಿ ಅರ್ಪಿಸಿರಿ; ನನ್ನ ಸೇವಕನಾದ ಯೋಬನು ನಿಮಗೋಸ್ಕರ ಪ್ರಾರ್ಥನೆ ಮಾಡುವನು. ನಾನು ನಿಮ್ಮ ಬುದ್ಧಿಹೀನತೆಯ ಪ್ರಕಾರ ಮಾಡದ ಹಾಗೆ ಅವನ ಪ್ರಾರ್ಥನೆಯನ್ನು ಅಂಗೀಕರಿಸುವೆನು. ಯಾಕಂ ದರೆ ನೀವು ನನ್ನ ಸೇವಕನಾದ ಯೋಬನ ಪ್ರಕಾರ ನನ್ನ ವಿಷಯವಾಗಿ ಸರಿಯಾದವುಗಳನ್ನು ಮಾತಾ ಡಲಿಲ್ಲ.
ತೇಮಾನ್ಯನಾದ ಎಲೀಫಜನೂ ಶೂಹ್ಯ ನಾದ ಬಿಲ್ದದನೂ ನಾಮಾಥ್ಯನಾದ ಚೋಫರನೂ ಹೋಗಿ ಕರ್ತನು ಅವರಿಗೆ ಹೇಳಿದ ಪ್ರಕಾರ ಮಾಡಿದರು. ಕರ್ತನು ಯೋಬನ ಪ್ರಾರ್ಥನೆಯನ್ನು ಅಂಗೀಕರಿಸಿದನು.
ಕರ್ತನು ನನ್ನ ನೀತಿಯ ಪ್ರಕಾರ ನನಗೆ ಪ್ರತಿಫಲ ಕೊಟ್ಟನು. ನನ್ನ ಕೈಗಳ ಶುದ್ಧತ್ವದ ಪ್ರಕಾರ ನನಗೆ ಬದಲು ಕೊಟ್ಟನು.
ಶುದ್ಧ ಹಸ್ತಗಳೂ ನಿರ್ಮಲವಾದ ಹೃದ ಯವೂ ಉಳ್ಳವನಾಗಿದ್ದು ತನ್ನ ಪ್ರಾಣವನ್ನು ವ್ಯರ್ಥ ತ್ವಕ್ಕೆ ಎತ್ತದೆಯೂ ಇಲ್ಲವೆ ಮೋಸದಿಂದ ಆಣೆ ಇಡ ದೆಯೂ ಇರುವವನೇ.
ನೀವು ನಿಮ್ಮ ಕೈಗಳನ್ನು ಚಾಚಲು ನಾನು ನನ್ನ ಕಣ್ಣುಗಳನ್ನು ನಿಮಗೆ ಮರೆಮಾಡುವೆನು; ಹೌದು, ನೀವು ಬಹು ಪ್ರಾರ್ಥನೆಗಳನ್ನು ಮಾಡಿ ದರೂ ನಾನು ಕೇಳೆನು, ನಿಮ್ಮ ಕೈಗಳು ರಕ್ತದಿಂದ ತುಂಬಿಯವೆ.
ಆಗ ನಿನ್ನವರು ಪುರಾತನ ಕಾಲದ ಹಾಳಾದ ಸ್ಥಳಗಳನ್ನು ಕಟ್ಟುವರು, ತಲತಲಾ ಂತರಕ್ಕಿದ್ದ ಅಸ್ತಿವಾರಗಳನ್ನು ನೀನು ಎಬ್ಬಿಸುವಿ; ಸೀಳಿ ದ್ದನ್ನು ಸರಿ ಮಾಡುವವನೆಂದೂ ನಿವಾಸಿಗಳಿಗಾಗಿ ಹಾದಿಗಳನ್ನು ತಿರಿಗಿ ಸರಿಮಾಡುವವನೆಂದೂ ನೀನು ಕರೆಯಲ್ಪಡುವಿ.
ಓ ಬೆನ್ಯಾವಿಾನನ ಮಕ್ಕಳೇ! ಯೆರೂಸಲೇಮಿನೊಳಗಿಂದ ಓಡಿಹೋಗುವದಕ್ಕೆ ನೀವು ಕೂಡಿಕೊಳ್ಳಿರಿ, ತೆಕೋವದಲ್ಲಿ ತುತೂರಿ ಊದಿರಿ; ಬೇತ್‌ಹಕ್ಕೆರೆಮಿನಲ್ಲಿ ಬೆಂಕಿಯ ಗುರುತನ್ನು ಹಚ್ಚಿರಿ; ಯಾಕಂದರೆ ಕೇಡೂ ದೊಡ್ಡ ನಾಶನವೂ ಉತ್ತರದ ಕಡೆಯಿಂದ ತೋರುತ್ತವೆ.
ಹಾಗಾದರೆ ಈಗ ದೇವರು ನಮ್ಮನ್ನು ಕನಿಕರಿಸುವ ಹಾಗೆ ಆತನನ್ನು ಬೇಡಿಕೊಳ್ಳಿರಿ ಎಂದು ಹೇಳುತ್ತಾನೆ. ಸೈನ್ಯಗಳ ಕರ್ತನು --ಇದು ನಿಮ್ಮಿಂದಲೇ ಆಯಿತು; ನಿಮಗೆ ಆತನು ಮುಖದಾಕ್ಷಿಣ್ಯ ತೋರಿಸುವನೋ?
ತರುವಾಯ ಶಿಷ್ಯರು ವಿಂಗಡವಾಗಿ ಯೇಸುವಿನ ಬಳಿಗೆ ಬಂದು--ಅದನ್ನು ಬಿಡಿಸುವದಕ್ಕೆ ನಮಗೆ ಯಾಕೆ ಆಗಲಿಲ್ಲ ಎಂದು ಕೇಳಿದರು.
ಆದರೆ ದುರಾತ್ಮವು ಪ್ರತ್ಯುತ್ತರವಾಗಿ--ನಾನು ಯೇಸುವನ್ನು ಬಲ್ಲೆನು, ಪೌಲನನ್ನೂ ಬಲ್ಲೆನು; ನೀವಾದರೆ ಯಾರು ಎಂದು ಕೇಳಿತು.
ಪೌಲನೇ, ಭಯಪಡಬೇಡ, ನೀನು ಕೈಸರನ ಮುಂದೆ ನಿಲ್ಲತಕ್ಕದ್ದು; ಇಗೋ, ನಿನ್ನೊಂದಿಗೆ ಪ್ರಯಾಣಮಾಡುವವರೆಲ್ಲರನ್ನು ನಿನಗೆ ದೇವರು ಕೊಟ್ಟಿದ್ದಾನೆ ಎಂದು ಹೇಳಿದನು.
ಆದದರಿಂದ ಪುರುಷರು ಎಲ್ಲಾ ಸ್ಥಳಗಳಲ್ಲಿ ಕೋಪವೂ ಸಂದೇಹವೂ ಇಲ್ಲದೆ ಪವಿತ್ರವಾದ ಕೈಗಳನ್ನೆತ್ತಿ ಪ್ರಾರ್ಥಿಸಬೇಕೆಂದು ನಾನು ಅಪೇಕ್ಷಿಸು ತ್ತೇನೆ.
ನಂಬಿಕೆಯಿಂದ ಮಾಡಿದ ಪ್ರಾರ್ಥನೆ ಯು ರೋಗಿಯನ್ನು ರಕ್ಷಿಸುವದು; ಕರ್ತನು ಅವನನ್ನು ಎಬ್ಬಿಸುವನು, ಪಾಪಗಳನ್ನು ಮಾಡಿದವನಾಗಿದ್ದರೆ ಅವು ಕ್ಷಮಿಸಲ್ಪಡುವವು.