ಯೋಬ 27:4 · ಕನ್ನಡ ಬೈಬಲ್
ನನ್ನ ತುಟಿಗಳು ದುಷ್ಟತ್ವವನ್ನು ಮಾತನಾಡವು; ನನ್ನ ನಾಲಿಗೆ ಮೋಸ ನುಡಿಯದು.
Cross references
ಯೋಬ 6:28
ಆದದರಿಂದ ಈಗ ಸಂತೃಪ್ತರಾಗಿ ನನ್ನನ್ನು ದೃಷ್ಟಿಸಿರಿ; ನಾನು ಸುಳ್ಳು ಹೇಳಿದರೆ ನಿಮ್ಮ ಕಣ್ಣಿಗೆ ಕಾಣುವದು.
ಯೋಬ 13:7
ದೇವರಿಗೋಸ್ಕರ ನೀವು ದುಷ್ಟತನದಿಂದ ಮಾತನಾಡುವಿರೋ? ಆತನಿಗೋ ಸ್ಕರ ಮೋಸದ ನುಡಿಗಳನ್ನಾಡುವಿರೋ?
ಯೋಬ 24:25
ಈಗ ಹೀಗೆ ಇಲ್ಲದಿದ್ದರೆ ಯಾವನು ನನ್ನನ್ನು ಸುಳ್ಳುಗಾರನನ್ನಾಗಿ ಮಾಡಿ ನನ್ನ ನುಡಿಯನ್ನು ವ್ಯರ್ಥ ಮಾಡುವನು?
ಯೋಬ 34:6
ನನ್ನ ನ್ಯಾಯಕ್ಕೆ ವಿರೋಧ ವಾಗಿ ನಾನು ಸುಳ್ಳಾಡಲೋ? ದ್ರೋಹವಿಲ್ಲದೆ ನನ್ನ ಗಾಯವು ಮಾಯದಂಥದ್ದೇ ಎಂದು ಹೇಳಿದ್ದನು.
ಯೋಹಾನ 8:55
ಆದಾಗ್ಯೂ ನೀವು ಆತನನ್ನು ಅರಿತುಕೊಂಡಿಲ್ಲ; ಆದರೆ ನಾನು ಆತನನ್ನು ಅರಿತಿದ್ದೇನೆ. ನಾನು ಆತನನ್ನು ಅರಿಯಲಿಲ್ಲವೆಂದು ಹೇಳಿದರೆ ನಿಮ್ಮ ಹಾಗೆ ನಾನೂ ಸುಳ್ಳುಗಾರನಾಗಿ ರುವೆನು; ಆದರೆ ನಾನು ಆತನನ್ನು ಅರಿತಿದ್ದೇನೆ; ಆತನ ಮಾತನ್ನು ಕೈಕೊಂಡಿದ್ದೇನೆ.
2 ಕೊರಿಂಥದವರಿಗೆ 11:10
ಕ್ರಿಸ್ತನ ಸತ್ಯವು ನನ್ನಲ್ಲಿರುವದರಿಂದ ಈ ನನ್ನ ಹೊಗಳಿಕೆಯನ್ನು ಅಕಾಯದ ಪ್ರಾಂತ್ಯಗಳಲ್ಲಿ ಒಬ್ಬರೂ ನಿಲ್ಲಿಸಬಾರದು.