Home Bibles ☰ Books ಯೋಬ 27:7 · ಕನ್ನಡ ಬೈಬಲ್
ಯೋಬ 27:7 · ಕನ್ನಡ ಬೈಬಲ್

ನನ್ನ ಶತ್ರು ದುಷ್ಟನ ಹಾಗಿರಲಿ; ನನಗೆ ವಿರೋಧ ವಾಗಿ ಏಳುವವನು ಅನ್ಯಾಯವಂತನ ಹಾಗಿರಲಿ.

Cross references

1 ಸಮುವೇಲ 25:26

ಆದಕಾರಣ ನನ್ನ ಒಡೆಯನೇ, ನೀನು ರಕ್ತ ಚೆಲ್ಲುವದಕ್ಕೂ ನಿನ್ನ ಕೈಯಿಂದ ನಿನಗೆ ಮುಯ್ಯಿ ತೀರಿಸಿಕೊಳ್ಳುವದಕ್ಕೂ ಹೋಗುವದನ್ನು ದೇವರು ಆಟಂಕ ಮಾಡಿದ್ದರಿಂದ ಕರ್ತನ ಜೀವದಾಣೆ, ನಿನ್ನ ಪ್ರಾಣದ ಜೀವದಾಣೆ, ನಿನ್ನ ಶತ್ರುಗಳೂ ನನ್ನ ಒಡೆಯನಿಗೆ ಕೇಡನ್ನು ಹುಡುಕು ವವರೂ ನಾಬಾಲನ ಹಾಗೆಯೇ ಆಗಲಿ.

2 ಸಮುವೇಲ 18:32

ಅರಸನು ಕೂಷ್ಯನಿಗೆ ಯೌವನಸ್ಥನಾದ ಅಬ್ಷಾಲೋಮನಿಗೆ ಕ್ಷೇಮವೋ ಅಂದನು. ಕೂಷ್ಯನು ಪ್ರತ್ಯುತ್ತರವಾಗಿ--ಅರಸನಾದ ನನ್ನ ಒಡೆಯನ ಶತ್ರು ಗಳು ಕೇಡುಮಾಡುವಂತೆ ನಿನಗೆ ವಿರೋಧವಾಗಿ ಹೇಳುವ ಎಲ್ಲರೂ ಆ ಯೌವನಸ್ಥನ ಹಾಗೆಯೇ ಇರಲಿ ಅಂದನು.ಆಗ ಅರಸನು ನಡುಗುತ್ತಾ ಊರ ಬಾಗಲು ಮೇಲಿರುವ ಕೊಠಡಿಗೆ ಏರಿ ಹೋದನು; ಹೋಗು ವಾಗ ಅತ್ತು--ನನ್ನ ಮಗನಾದ ಅಬ್ಷಾಲೋಮನೇ, ನನ್ನ ಮಗನೇ, ನನ್ನ ಮಗನಾದ ಅಬ್ಷಾಲೋಮನೇ ನಿನಗೆ ಬದಲಾಗಿ ನಾನು ಸತ್ತಿದ್ದರೆ ಉತ್ತಮವಾಗುತ್ತಿತ್ತು. ಅಬ್ಷಾಲೋಮನೇ, ನನ್ನ ಮಗನೇ ನನ್ನ ಮಗನೇ, ಅಂದನು.

ದಾನಿಯೇಲ 4:19

ಆಗ ಬೆಲ್ತೆಶಚ್ಚರನೆಂಬ ಹೆಸರುಳ್ಳ ದಾನಿಯೇಲನು ಒಂದು ಗಳಿಗೆ ವಿಸ್ಮಿತನಾಗಿ ತನ್ನ ಆಲೋಚನೆಗಳಲ್ಲಿ ಕಳವಳಗೊಂಡನು. ಆಗ ಅರಸನು ಮಾತನಾಡಿ-- ಬೆಲ್ತೆಶಚ್ಚರನೇ, ಕನಸಾಗಲಿ ಅದರ ಅರ್ಥವಾಗಲಿ ನಿನ್ನನ್ನು ಕಳವಳಪಡಿಸದಿರಲಿ ಅಂದನು. ಆಗ ಬೆಲ್ತೆಶ ಚ್ಚರನು ಪ್ರತ್ಯುತ್ತರವಾಗಿ--ನನ್ನ ಒಡೆಯನೇ, ಆ ಕನಸು ನಿನ್ನ ವೈರಿಗಳಿಗೂ ಅದರ ಅರ್ಥವು ನಿನ್ನ ಶತ್ರುಗಳಿಗೂ ಆಗಲಿ.

Interlinear

Choose Theme