Cross references
ಆದರೆ ನಿನ್ನ ಕೈ ಚಾಚಿ ಅವನಿಗಿದ್ದದ್ದನ್ನೆಲ್ಲಾ ಮುಟ್ಟು; ಅವನು ನಿನ್ನೆದುರಿನಲ್ಲಿಯೇ ನಿನ್ನನ್ನು ಶಪಿಸುವನು ಅಂದನು.
ಇದೆಲ್ಲಾದರಲ್ಲಿ ಯೋಬನು ಪಾಪಮಾಡಲಿಲ್ಲ. ದೇವರ ಮೇಲೆ ತಪ್ಪನ್ನು ಹೊರಿಸಲೂ ಇಲ್ಲ.
ಆದರೆ ನಿನ್ನ ಕೈಚಾಚಿ ಅವನ ಎಲುಬನ್ನೂ ಅವನ ಮಾಂಸವನ್ನೂ ಮುಟ್ಟಿದರೆ ಅವನು ನಿನ್ನ ಎದುರಿನಲ್ಲಿ ನಿನ್ನನ್ನು ಶಪಿಸುವನು ಅಂದನು.
ಆಗ ಅವನ ಹೆಂಡತಿಯು ಅವನಿಗೆ--ಇನ್ನೂ ಯಥಾರ್ಥ ತ್ವದಲ್ಲಿ ಉಳಿದಿದ್ದೀಯೋ? ದೇವರನ್ನು ಶಪಿಸಿ ಸಾಯಿ ಅಂದಳು.
ನಾನು ಹುಟ್ಟಿದ ದಿವ ಸವೂ ಗಂಡು ಹುಟ್ಟಿತೆಂದು ಹೇಳಿದ ರಾತ್ರಿಯೂ ಹಾಳಾಗಲಿ.
ಆದದರಿಂದ ಯೋಬನು ವ್ಯರ್ಥವಾಗಿ ಬಾಯಿ ತೆರೆದು ತಿಳುವಳಿಕೆ ಇಲ್ಲದೆ ನುಡಿಗಳನ್ನು ಹೆಚ್ಚಿಸುತ್ತಾನೆ.
ಮೌನದಿಂದ ಮೂಕನಾದೆನು; ಒಳ್ಳೇ ದನ್ನಾದರೂ ಆಡದೆ ಸುಮ್ಮನಿದ್ದೆನು; ಆದರೆ ನನ್ನ ವ್ಯಥೆಯು ಕಲಕಿತು.
ಅವರು ದೇವರಾತ್ಮನನ್ನು ಕೆಣ ಕಿದರು; ಆದದರಿಂದ ಅವನು ಬುದ್ಧಿಹೀನತೆಯಿಂದ ಮಾತನಾಡಿದನು.
ಇದಲ್ಲದೆ ನೀನು ಈ ಜನರಿಗೆ ಈ ಮಾತುಗಳನ್ನೆಲ್ಲಾ ತಿಳಿಸಿದ ಮೇಲೆ ಅವರು ನಿನಗೆ--ಕರ್ತನು ನಮ್ಮ ಮೇಲೆ ಈ ದೊಡ್ಡ ಕೇಡನ್ನು ಏಕೆ ವಿಧಿಸಿದ್ದಾನೆ? ನಮ್ಮ ಅಕ್ರಮ ಏನು? ನಾವು ನಮ್ಮ ದೇವರಾದ ಕರ್ತನಿಗೆ ವಿರೋಧವಾಗಿ ಮಾಡಿರುವ ಪಾಪವೇನು ಎಂದು ಹೇಳಿದರೆ ನೀನು ಅವರಿಗೆ ಹೇಳಬೇಕಾದದ್ದೇನಂದರೆ--ಕರ್ತನು ಹೀಗನ್ನುತ್ತಾನೆ.
ನಿಮ್ಮ ಕ್ರಿಯೆಗಳ ಫಲದ ಪ್ರಕಾರ ನಿಮ್ಮನ್ನು ಶಿಕ್ಷಿಸು ತ್ತೇನೆಂದು ಕರ್ತನು ಅನ್ನುತ್ತಾನೆ; ಅದರ ಅಡವಿಗೆ ಬೆಂಕಿಹಚ್ಚುತ್ತೇನೆ; ಅದರ ಸುತ್ತಲಿರುವದನ್ನೆಲ್ಲಾ ಅದು ತಿಂದುಬಿಡುವದು.