ಕಿರಿಯನು ಹಿರಿಯನು ಅಲ್ಲಿ ಇದ್ದಾರೆ. ದಾಸನು ಯಜಮಾನನಿಂದ ಬಿಡುಗಡೆ ಯಾಗಿದ್ದಾನೆ.
Cross references
ಧೂಳಿನಲ್ಲಿ ಮಲಗುತ್ತಾರೆ; ಹುಳಗಳು ಅವರನ್ನು ಅಡಗಿಸುತ್ತವೆ.
ಮರಣಕ್ಕೂ ಎಲ್ಲಾ ಜೀವಿಗಳ ನೇಮಕವಾದ ಮನೆಗೂ ನನ್ನನ್ನು ತಿರುಗಿಸುವಿ ಎಂದು ತಿಳಿದಿದ್ದೇನೆ.
ಭೂಲೋಕದ ಜನರೇ, ಉಚ್ಚ ನೀಚ ಬಡವ ಬಲ್ಲಿದರೇ, ಕೇಳಿರಿ.
ಅವರು ತಮ್ಮ ಸಂಪತ್ತಿನಲ್ಲಿ ಭರವಸವಿಟ್ಟು ಅಧಿಕ ಐಶ್ವರ್ಯಗಳಲ್ಲಿ ಹೆಚ್ಚಳಪಡುವರು.
ಅವರು ಕುರಿ ಗಳಂತೆ ಸಮಾಧಿಯಲ್ಲಿ ಹಾಕಲ್ಪಡುತ್ತಾರೆ; ಮರಣವು ಅವರನ್ನು ತಿನ್ನುತ್ತದೆ; ಯಥಾರ್ಥರು ಬೆಳಿಗ್ಗೆ ಅವರ ಮೇಲೆ ಆಳುವರು; ಅವರಿಗೆ ನಿವಾಸವಿರದ ಹಾಗೆ ಸಮಾಧಿಯಲ್ಲಿ ಅವರ ರೂಪವು ಕ್ಷಯಿಸುವದು.
ಆತ್ಮವನ್ನು ಹಿಡಿ ಯುವ ಶಕ್ತಿ ಯಾವ ಮನುಷ್ಯನಿಗೂ ಇಲ್ಲ; ಹಾಗೆಯೇ ಮರಣ ದಿನವನ್ನು ತಡೆಯುವ ಶಕ್ತಿಯು ಯಾರಿಗೂ ಇರುವದಿಲ್ಲ. ಯುದ್ಧದಿಂದ ಬಿಡುಗಡೆಯೂ ಹೇಗೆ ಇಲ್ಲವೋ ಹಾಗೆಯೇ ದುಷ್ಟನಿಗೆ ಅದರಿಂದ ಬಿಡು ಗಡೆಯೇ ಇಲ್ಲ.
ಅಲ್ಲದೆ ಅವರು ದಿನ್ನೆಗೆ ಹೆದರುವರು; ದಾರಿಯಲ್ಲಿ ಹೆದರಿಕೆಗಳಿರುವವು. ಬಾದಾಮಿಯ ಮರ ಹೂವು ಬಿಡುವದು; ಮಿಡತೆಯು ಭಾರವಾಗಿರುವದು. ಆಶೆ ಬಿದ್ದುಹೋಗುವದು. ಮನು ಷ್ಯನು ತನ್ನ ನಿತ್ಯ ಗೃಹಕ್ಕೆ ಹೋಗುವನು. ಗೋಳಾಡು ವವರು ಬೀದಿಯಲ್ಲಿ ತಿರುಗಾಡುವರು.
ಆಮೇಲೆ ಧೂಳು ಅದು ಇದ್ದ ಹಾಗೆಯೇ ಭೂಮಿಗೆ ಹಿಂತಿರುಗುವದು; ಆತ್ಮವು ಅದನ್ನು ಕೊಟ್ಟ ದೇವರ ಬಳಿಗೆ ಹಿಂತಿರುಗು ವದು.
ಇದಾದ ಮೇಲೆ ಆ ಭಿಕ್ಷುಕನು ಸತ್ತನು; ದೂತರು ಅವನನ್ನು ಅಬ್ರಹಾಮನ ಎದೆಗೆ ತೆಗೆದುಕೊಂಡು ಹೋದರು; ಐಶ್ವರ್ಯವಂತನು ಸಹ ಸತ್ತನು; ಅವನನ್ನು ಹೂಣಿ ಟ್ಟರು.
ಒಂದೇ ಸಾರಿ ಸಾಯುವದೂ ತರುವಾಯ ನ್ಯಾಯತೀರ್ಪೂ ಮನುಷ್ಯರಿಗೆ ನೇಮಕವಾಗಿದೆ.ಹಾಗೆಯೇ ಕ್ರಿಸ್ತನು ಬಹು ಜನರ ಪಾಪಗಳನ್ನು ಹೊತ್ತುಕೊಳ್ಳುವದಕ್ಕೋಸ್ಕರ ಒಂದೇ ಸಾರಿ ಸಮರ್ಪಿತ ನಾದನು. ತನ್ನನ್ನು ನಿರೀಕ್ಷಿಸಿ ಕೊಂಡಿರುವವರಿಗೆ ರಕ್ಷಣೆ ಯನ್ನುಂಟು ಮಾಡುವದಕ್ಕೋಸ್ಕರ ಪಾಪವಿಲ್ಲದವನಾಗಿ ಎರಡನೆಯ ಸಾರಿ ಕಾಣಿಸಿಕೊಳ್ಳುವನು.