Home Bibles ಯೋಬ 30:8 · ಕನ್ನಡ ಬೈಬಲ್
ಯೋಬ 30:8 · ಕನ್ನಡ ಬೈಬಲ್

ಹುಚ್ಚರ ಮಕ್ಕಳಾಗಿಯೂ ಹೌದು, ಕೆಳಮಟ್ಟದವರ ಮಕ್ಕಳಾಗಿಯೂ ಇದ್ದರು.

Cross references

2 ಅರಸುಗಳು 8:18

ಅಹಾಬನ ಮನೆಯವರು ಮಾಡಿದ ಹಾಗೆ ಅವನು ಇಸ್ರಾಯೇಲಿನ ಅರಸುಗಳ ಮಾರ್ಗದಲ್ಲಿ ನಡೆದನು; ಯಾಕಂದರೆ ಅಹಾಬನ ಮಗಳು ಅವನಿಗೆ ಹೆಂಡತಿಯಾಗಿದ್ದಳು.

2 ಅರಸುಗಳು 8:27

ಅವನು ಅಹಾಬನ ಮನೆಯ ಮಾರ್ಗದಲ್ಲಿ ನಡೆದು ಅಹಾಬನ ಮನೆಯವರ ಹಾಗೆ ಕರ್ತನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದನು. ಯಾಕಂದರೆ ಅವನು ಅಹಾಬನ ಅಳಿಯನಾಗಿದ್ದನು.

2 ದಿನವೃತ್ತಾಂತ 22:3

ಅವನು ಅಹಾಬನ ಮನೆ ಯವರ ಮಾರ್ಗಗಳಲ್ಲಿ ನಡೆದನು. ಹೇಗಂದರೆ ದುಷ್ಟ ನಾಗಿರುವದಕ್ಕೆ ಅವನ ತಾಯಿ ಅವನಿಗೆ ಆಲೋಚನೆ ಹೇಳುವವಳಾಗಿದ್ದಳು.

ಯೋಬ 40:4

ಇಗೋ, ನೀಚನಾಗಿದ್ದೇನೆ; ನಿನಗೆ ಏನು ಪ್ರತ್ಯುತ್ತರ ಕೊಡಲಿ? ನನ್ನ ಕೈಯಿಂದ ಬಾಯಿ ಮುಚ್ಚಿಕೊಳ್ಳುತ್ತೇನೆ.

ಕೀರ್ತನೆಗಳು 15:4

ಅವನ ಕಣ್ಣುಗಳಿಗೆ ನೀಚನು ತಿರಸ್ಕರಿಸಲ್ಪ ಟ್ಟಿದ್ದಾನೆ. ಆದರೆ ಕರ್ತನಿಗೆ ಭಯಪಡುವವರನ್ನು ಗೌರವಿಸುತ್ತಾನೆ, ಆಣೆಯಿಂದ ನಷ್ಟವಾದರೂ ಬದಲಾ ಯಿಸದವನು.ತನ್ನ ಹಣವನ್ನು ಬಡ್ಡಿಗೆ ಕೊಡುವದಿಲ್ಲ; ನಿರಪರಾಧಿಗೆ ವಿರೋಧವಾಗಿ ಲಂಚ ತಕ್ಕೊಳ್ಳುವದಿಲ್ಲ. ಇವುಗಳನ್ನು ಮಾಡುವವನು ಎಂದೆಂದಿಗೂ ಕದಲದೆ ಇರುವನು.

ಕೀರ್ತನೆಗಳು 49:10

ಜ್ಞಾನಿಗಳು ಸಾಯುವರು; ಹುಚ್ಚನು ಪಶುಪ್ರಾಯನು ಕೂಡ ನಾಶವಾಗಿ ಬೇರೆಯವರಿಗೆ ತಮ್ಮ ಆಸ್ತಿಯನ್ನು ಬಿಡುವದನ್ನು ಅವನು ನೋಡುತ್ತಾನೆ.

ಸಾಮೇತಿಗಳು 1:7

ಕರ್ತನ ಭಯವೇ ಜ್ಞಾನದ ಮೂಲ; ಮೂರ್ಖರು ಜ್ಞಾನವನ್ನೂ ಶಿಕ್ಷೆಯನ್ನೂ ಅಸಡ್ಡೆಮಾಡುತ್ತಾರೆ.

ಸಾಮೇತಿಗಳು 1:22

ಜ್ಞಾನ ಹೀನರೇ, ನೀವು ಎಷ್ಟು ಕಾಲ ಅಜ್ಞಾನವನ್ನು ಪ್ರೀತಿಸುವಿರಿ? ತಿರಸ್ಕರಿಸುವವರು ತಮ್ಮ ತಿರಸ್ಕರಿಸು ವಿಕೆಯಲ್ಲಿ ಎಷ್ಟುಕಾಲ ಆನಂದಿಸುವರು? ಜ್ಞಾನ ಹೀನರು ಎಷ್ಟು ಕಾಲ ತಿಳುವಳಿಕೆಯನ್ನು ಹಗೆ ಮಾಡುವರು?

ಸಾಮೇತಿಗಳು 16:22

ವಿವೇಕಿಗೆ ವಿವೇಕವೇ ಜೀವದ ಬುಗ್ಗೆ. ಬುದ್ಧಿಹೀನರ ಬೋಧ ನೆಯು ಮೂರ್ಖತನ.

ಯೆಶಾಯ 32:6

ನೀಚನು ನೀಚನಾಗಿ ಮಾತನಾಡುವನು. ಅವನ ಹೃದಯವು ಕಪಟತ್ವವನ್ನು ಅಭ್ಯಾ ಸಿಸುವಂತೆಯೂ ಕರ್ತನಿಗೆ ವಿರೋಧವಾಗಿ ಸಂಪೂ ರ್ಣವಾಗಿ ತಪ್ಪಿಹೋಗುವವರಂತೆಯೂ ಹಸಿವೆ ಗೊಂಡವನ ಆಶೆಯನ್ನು ಬರಿದು ಮಾಡುವಂತೆಯೂ ಕೇಡನ್ನು ಮಾಡುವನು. ಬಾಯಾರಿದವನ ಪಾನವನ್ನು ಇಲ್ಲದಂತೆ ಮಾಡುವ ಹಾಗೆ ಕಾರಣನಾಗುವನು.

ಯೆರೆಮಿಯ 7:18

ದುಃಖದ ನಿಮಿತ್ತ ನನ್ನನ್ನು ಆದರಿಸಿಕೊಳ್ಳಲು ನಾನು ಮನಸ್ಸು ಮಾಡಿದಾಗ ನನ್ನ ಹೃದಯವು ನನ್ನಲ್ಲಿ ಕುಂದಿಹೋಗಿದೆ. ದೂರ ದೇಶದಿಂದ ನನ್ನ ಜನರ ಮಗಳು ಕೂಗುವ ಶಬ್ದವನ್ನು ನೋಡಿರಿ.

ಮಾರ್ಕ 6:24

ಆಗ ಅವಳು ಹೊರಟುಹೋಗಿ ತನ್ನ ತಾಯಿಗೆ--ನಾನು ಏನು ಕೇಳಿಕೊಳ್ಳಲಿ ಎಂದು ಕೇಳಲು ಅವಳು --ಬಾಪ್ತಿಸ್ಮ ಮಾಡಿಸುವ ಯೋಹಾನನ ತಲೆಯನ್ನು ಕೇಳಿಕೋ ಅಂದಳು.

Interlinear

Choose Theme