ನನ್ನ ಕಣ್ಣುಗಳೊಡನೆ ಒಡಂಬಡಿಕೆ ಮಾಡಿದೆನು; ಕನ್ನಿಕೆಯ ಮೇಲೆ ಲಕ್ಷ್ಯವಿಡುವದು ಹೇಗೆ?
Cross references
ಆಗ ದೇವಕುಮಾರರು ಮನುಷ್ಯ ಕುಮಾರ್ತೆಯರ ಸೌಂದರ್ಯವನ್ನು ನೋಡಿ ತಾವು ಆರಿಸಿಕೊಂಡವರನ್ನೆಲ್ಲಾ ತಮಗೆ ಹೆಂಡತಿಯ ರನ್ನಾಗಿ ಮಾಡಿಕೊಂಡರು.
ಆಗ ಆದದ್ದೇನಂದರೆ, ದಾವೀದನು ಒಂದು ದಿನ ಸಾಯಂಕಾಲದಲ್ಲಿ ತನ್ನ ಹಾಸಿಗೆಯಿಂದ ಎದ್ದು ಅರಮನೆಯ ಉಪ್ಪರಿಗೆಯ ಮೇಲೆ ತಿರುಗಾಡುತ್ತಾ ಇರುವಾಗ ಸ್ನಾನಮಾಡುತ್ತಿರುವ ಒಬ್ಬ ಸ್ತ್ರೀಯನ್ನು ಉಪ್ಪರಿಗೆಯ ಮೇಲಿನಿಂದ ನೋಡಿದನು.
ವ್ಯರ್ಥತೆಯನ್ನು ನೋಡದ ಹಾಗೆ ನನ್ನ ಕಣ್ಣುಗಳನ್ನು ತೊಲಗಿಸು; ನಿನ್ನ ಮಾರ್ಗಗಳಲ್ಲಿ ನನ್ನನ್ನು ಚೈತನ್ಯ ಪಡಿಸು.
ನಿನ್ನ ಕಣ್ಣುಗಳು ಮುಂದೆಯೇ ನೋಡಲಿ. ನಿನ್ನ ಕಣ್ಣು ರೆಪ್ಪೆಗಳು ನೆಟ್ಟಗೆ ನಿನ್ನ ಮುಂದೆಯೇ ನೋಡಲಿ.
ನಿನ್ನ ಹೃದಯದಲ್ಲಿ ಅವಳ ಸೌಂದರ್ಯವನ್ನು ಮೋಹಿಸಬೇಡ; ಇದಲ್ಲದೆ ಅವಳ ಕಣ್ಣುರೆಪ್ಪೆಗಳಿಂದ ನಿನ್ನನ್ನು ಅವಳು ವಶಮಾಡಿಕೊಳ್ಳದೆ ಇರಲಿ.
ದ್ರಾಕ್ಷಾರಸವು ಕೆಂಪಾಗಿದ್ದು ಪಾತ್ರೆಯಲ್ಲಿ ಥಳಥಳಿಸುತ್ತಾ ಚಲಿಸಿದರೆ ಅದನ್ನು ನೋಡಬೇಡ.
ಆದರೆ ನಾನು ನಿಮಗೆ ಹೇಳುವದೇನಂದರೆ--ಒಬ್ಬ ಸ್ತ್ರೀಯನ್ನು ಮೋಹಿಸುವದಕ್ಕೆ ನೋಡುವ ಪ್ರತಿಯೊಬ್ಬನು ಆಗಲೇ ತನ್ನ ಹೃದಯದಲ್ಲಿ ಆಕೆಯ ಕೂಡ ವ್ಯಭಿಚಾರ ಮಾಡಿದ್ದಾನೆ.
ಆದರೆ ಪ್ರತಿಯೊಬ್ಬನು ತನ್ನ ಸ್ವಂತ ದುರಾಶೆಯಿಂದ ಎಳೆಯಲ್ಪಟ್ಟು ಮರುಳುಗೊಂಡವನಾಗಿ ಶೋಧಿಸಲ್ಪಡುತ್ತಾನೆ.
ಲೋಕದಲ್ಲಿರುವವುಗಳೆಲ್ಲವು ಅಂದರೆ ಶರೀರದಾಶೆ, ಕಣ್ಣಿನಾಶೆ, ಜೀವನದ ಗರ್ವ ಇವು ತಂದೆಗೆ ಸಂಬಂಧ ಪಟ್ಟವುಗಳಲ್ಲ, ಲೋಕಕ್ಕೆ ಸಂಬಂಧಪಟ್ಟವುಗಳಾಗಿವೆ.