Home Bibles ಯೋಬ 31:14 · ಕನ್ನಡ ಬೈಬಲ್
ಯೋಬ 31:14 · ಕನ್ನಡ ಬೈಬಲ್

ದೇವರು ಏಳುವಾಗ ನಾನು ಏನು ಮಾಡುವೆನು? ಆತನು ವಿಚಾರಿಸುವಾಗ, ಆತನಿಗೆ ಏನು ಉತ್ತರ ಕೊಡುವೆನು?

Cross references

ಲೇವ್ಯಕಾಂಡ 25:43

ನೀನು ಕಠಿಣವಾಗಿ ಅವನ ಮೇಲೆ ದೊರೆತನ ಮಾಡಬಾರದು; ಆದರೆ ನಿನ್ನ ದೇವರಿಗೆ ಭಯಪಡಬೇಕು.

ಯೋಬ 9:32

ನಾನು ಆತನಿಗೆ ಉತ್ತರ ಕೊಡುವ ಹಾಗೆಯೂ ನಾವು ಕೂಡ ನ್ಯಾಯದಲ್ಲಿ ಸೇರುವ ಹಾಗೆಯೂ ಆತನು ನನ್ನಂಥ ಮನುಷ್ಯನಲ್ಲ.

ಯೋಬ 10:2

ನಾನು ದೇವರಿಗೆ ಹೀಗೆ ಹೇಳುತ್ತೇನೆ--ನನ್ನನ್ನು ಖಂಡಿಸಬೇಡ; ಯಾವದಕ್ಕೋ ಸ್ಕರ ನನ್ನ ಸಂಗಡ ವ್ಯಾಜ್ಯಮಾಡುತ್ತೀ ಎಂದು ನನಗೆ ತಿಳಿಸು.

ಕೀರ್ತನೆಗಳು 7:6

ಓ ಕರ್ತನೇ, ನಿನ್ನ ಕೋಪದಿಂದ ಏಳು; ನನ್ನ ವೈರಿಗಳ ಉಗ್ರತೆಗಾಗಿ ಎದ್ದೇಳು; ನನ್ನ ನಿಮಿತ್ತ ಎಚ್ಚರಗೊಳ್ಳು; ನೀನು ನ್ಯಾಯತೀರ್ವಿಕೆಯನ್ನು ಆಜ್ಞಾ ಪಿಸಿದ್ದೀಯಲ್ಲಾ.

ಕೀರ್ತನೆಗಳು 9:12

ಆತನು ರಕ್ತಾಪರಾಧವನ್ನು ವಿಚಾರಿಸುವಾಗ ಅವರನ್ನು ಜ್ಞಾಪಕಮಾಡಿಕೊಳ್ಳುವನು; ಆತನು ದೀನರ ಕೂಗನ್ನು ಮರೆತುಬಿಡನು.

ಕೀರ್ತನೆಗಳು 9:19

ಓ ಕರ್ತನೇ, ಏಳು; ಮನುಷ್ಯನು ಬಲಗೊಳ್ಳದೆ ಇರಲಿ; ನಿನ್ನ ಸಮ್ಮುಖದಲ್ಲಿ ಜನಾಂಗಗಳಿಗೆ ನ್ಯಾಯ ತೀರ್ವಿಕೆ ಆಗಲಿ.ಓ ಕರ್ತನೇ, ಅವರಿಗೆ ಭಯವನ್ನು ಹುಟ್ಟಿಸು; ಆಗ ಜನಾಂಗಗಳು ತಾವು ಮನುಷ್ಯರೇ ಎಂದು ತಿಳುಕೊಳ್ಳುವರು. ಸೆಲಾ.

ಕೀರ್ತನೆಗಳು 10:12

ಓ ಕರ್ತನೇ, ಏಳು; ಓ ದೇವ ರೇ, ನಿನ್ನ ಕೈ ಎತ್ತು, ದೀನರನ್ನು ಮರೆತು ಬಿಡಬೇಡ.

ಕೀರ್ತನೆಗಳು 44:21

ದೇವರು ಅದನ್ನು ವಿಚಾರಿಸನೋ? ಆತನು ಹೃದಯದ ಮರ್ಮ ಗಳನ್ನು ತಿಳಿದಿದ್ದಾನೆ.

ಕೀರ್ತನೆಗಳು 76:9

ದೇವರು ನ್ಯಾಯತೀರಿಸುವದಕ್ಕೂ ಭೂಮಿಯ ದೀನರೆಲ್ಲರನ್ನು ರಕ್ಷಿಸುವದಕ್ಕೂ ಏಳುವಾಗ ಭೂಮಿಯ ನಿವಾಸಿಗಳು ಭಯಪಟ್ಟು ಸ್ತಬ್ಧ ರಾದರು. ಸೆಲಾ.

ಕೀರ್ತನೆಗಳು 143:2

ನಿನ್ನ ಸೇವಕನನ್ನು ನ್ಯಾಯವಿಚಾರಣೆಗೆ ಗುರಿಮಾಡಬೇಡ; ಜೀವಿತರಲ್ಲಿ ಒಬ್ಬನಾದರೂ ನಿನ್ನ ಮುಂದೆ ನೀತಿವಂತನಾಗುವದಿಲ್ಲ.

ಯೆಶಾಯ 10:3

ವಿಚಾರಣೆಯ ದಿನದಲ್ಲಿಯೂ ದೂರ ದಿಂದ ಬರುವ ನಾಶನದಲ್ಲಿಯೂ ನೀವು ಏನು ಮಾಡು ವಿರಿ? ಸಹಾಯಕ್ಕಾಗಿ ನೀವು ಯಾರ ಬಳಿಗೆ ಓಡುವಿರಿ? ನಿಮ್ಮ ವೈಭವವನ್ನು ಎಲ್ಲಿ ಬಿಡುವಿರಿ?

ಹೊಶೇಯ 9:7

ವಿಚಾರಣೆಯ ದಿನಗಳು ಬಂದಿವೆ, ಮುಯ್ಯಿ ತೀರಿಸುವ ದಿನಗಳೂ ಬಂದಿವೆ. ಇಸ್ರಾ ಯೇಲು ಅದನ್ನು ತಿಳಿದುಕೊಳ್ಳುವದು, ನಿನ್ನ ಅಕ್ರಮ ಗಳು ಬಹಳವಾಗಿರುವದರಿಂದಲೂ ಹಗೆತನವು ಹೆಚ್ಚಾ ಗಿರುವದರಿಂದಲೂ ಪ್ರವಾದಿ ಮೂರ್ಖನೂ ಆತ್ಮೀಯ ಮನುಷ್ಯನೂ ಹುಚ್ಚನೂ ಎಂದು ಇಸ್ರಾಯೇಲು ತಿಳಿದುಕೊಳ್ಳುತ್ತದೆ.

ಮೀಕ 7:4

ಅವರಲ್ಲಿ ಉತ್ತಮನು ದತ್ತೂರಿಯ ಹಾಗೆಯೂ ಬಹು ಯಥಾರ್ಥನು ಮುಳ್ಳಿನ ಬೇಲಿಯ ಹಾಗೆಯೂ ಇದ್ದಾನೆ; ನಿನ್ನ ಕಾವಲುಗಾರರ ದಿವಸವೂ ನಿನ್ನ ವಿಚಾರಣೆಯೂ ಬರುತ್ತದೆ, ಈಗಲೇ ಅವರಿಗೆ ಗಾಬರಿಯಾಗುವದು.

ಜೆಕರ್ಯ 2:13

ಓ ಮನುಷ್ಯರೇ, ನೀವೆಲ್ಲಾ ಕರ್ತನ ಮುಂದೆ ಮೌನ ವಾಗಿರ್ರಿ; ಆತನು ತನ್ನ ಪರಿಶುದ್ಧ ನಿವಾಸದೊಳಗಿಂದ ಎದ್ದಿದ್ದಾನೆ.

ಮಾರ್ಕ 7:2

ಆಗ ಆತನ ಶಿಷ್ಯರಲ್ಲಿ ಕೆಲವರು ಅಶುದ್ಧವಾದ ಅಂದರೆ ತೊಳೆಯದಿರುವ ಕೈಗಳಿಂದ ರೊಟ್ಟಿ ತಿನ್ನುವದನ್ನು ಅವರು ನೋಡಿ ತಪ್ಪು ಕಂಡು ಹಿಡಿದರು.

ರೋಮಾಪುರದವರಿಗೆ 3:19

ಪ್ರತಿಯೊಂದು ಬಾಯಿ ಮುಚ್ಚಿ ಹೋಗುವಂತೆಯೂ ಲೋಕವೆಲ್ಲಾ ದೇವರ ಮುಂದೆ ದೋಷಿಯಾಗಿರುವಂತೆಯೂ ನ್ಯಾಯ ಪ್ರಮಾಣವು ಹೇಳುವವುಗಳನ್ನು ನ್ಯಾಯಪ್ರಮಾಣಕ್ಕೆ ಒಳಗಾದವರಿಗೆ ಹೇಳುತ್ತದೆಯೆಂದು ನಾವು ಬಲ್ಲೆವು.

ಯಾಕೋಬ 2:13

ಕರುಣೆ ತೋರಿಸದೆ ಇರುವವನಿಗೆ ನ್ಯಾಯತೀರ್ಪಿನಲ್ಲಿ ಕರುಣೆಯು ತೋರಿಸಲ್ಪಡುವದಿಲ್ಲ. ಕರುಣೆಯು ನ್ಯಾಯತೀರ್ಪಿಗಿಂತ ಮೇಲಾಗಿ ಹಿಗ್ಗುತ್ತದೆ.

Interlinear

Choose Theme