ನನ್ನ ಐಶ್ವರ್ಯವು ಬಹಳವಾಗಿದೆ ಎಂದು ನನ್ನ ಕೈ ಬಹಳವಾಗಿ ಸಂಪಾದಿಸಿ ಕೊಂಡಿತೆಂದು ನಾನು ಸಂತೋಷಿಸಿದ್ದರೆ,
Cross references
ನನ್ನ ಬಲವೇ ಮತ್ತು ನನ್ನ ಕೈಯ ಸಾಮರ್ಥ್ಯವೇ ನನಗೆ ಈ ಆಸ್ತಿಯನ್ನು ಸಂಪಾದಿಸಿತೆಂದು ನಿನ್ನ ಹೃದಯದಲ್ಲಿ ಹೇಳಿಕೊಳ್ಳದ ಹಾಗೆ ನೋಡಿಕೋ.
ಈ ಗುರುತು ಗಳೆಲ್ಲಾ ನಿನಗೆ ಸಂಭವಿಸಿದಾಗ ದೇವರು ನಿನ್ನ ಸಂಗಡ ಇರುವದರಿಂದ ನೀನು ಆ ವೇಳೆಯಲ್ಲಿ ನಿನಗೆ ಅನು ಕೂಲವಾದದ್ದನ್ನು ಮಾಡು.
ಹಾಮಾನನು ತನ್ನ ಐಶ್ವರ್ಯದ ಘನವನ್ನೂ ತನ್ನ ಮಕ್ಕಳ ಹೆಚ್ಚಳವನ್ನೂ ಅರಸನು ತನ್ನನ್ನು ಯಾವದರಲ್ಲಿ ಹೆಚ್ಚಿಸಿದ್ದಾನೋ ಅರಸನ ಪ್ರಭು ಗಳ ಮೇಲೆಯೂ ಸೇವಕರ ಮೇಲೆಯೂ ತನ್ನನ್ನು ಹೇಗೆ ಎತ್ತಿದ್ದಾನೆಂದೂ ಎಲ್ಲವನ್ನೂ ಅವರಿಗೆ ವಿವರ ವಾಗಿ ಹೇಳಿದನು.
ಅನ್ಯಾಯದಲ್ಲಿ ಭರ ವಸವಿಡಬೇಡಿರಿ; ಸುಲಿಗೆಯಲ್ಲಿ ವ್ಯರ್ಥರಾಗಬೇಡಿರಿ; ಆಸ್ತಿಯು ಹೆಚ್ಚಿದರೆ ಅದರ ಮೇಲೆ ಮನಸ್ಸಿಡಬೇಡಿರಿ.
ಇಲ್ಲದಿರುವದರ ಮೇಲೆ ನಿನ್ನ ದೃಷ್ಟಿಯನ್ನು ಇಡುವಿಯಾ? ಐಶ್ವರ್ಯವು ನಿಸ್ಸಂದೇಹವಾಗಿ ರೆಕ್ಕೆಗಳನ್ನು ಕಟ್ಟಿಕೊಂಡು ಹದ್ದಿನಂತೆ ಆಕಾಶದ ಕಡೆಗೆ ಹಾರಿಹೋಗುತ್ತದೆ.
ಅವನು ತನ್ನೊಳಗೆ--ನನ್ನ ಕೈಯ ಬಲ ದಿಂದಲೂ ಜ್ಞಾನದಿಂದಲೂ ಅದನ್ನು ಮಾಡಿದೆ; ನಾನು ವಿವೇಕಿ ಮತ್ತು ಜನಾಂಗಗಳ ಮೇರೆಗಳನ್ನು ಕಿತ್ತು ಅವರ ನಿಧಿಗಳನ್ನು ಕೊಳ್ಳೆಹೊಡೆದು ಅದರ ನಿವಾಸಿಗಳನ್ನು ಮಹಾವೀರನಂತೆ ಕೆಡವಿಬಿಟ್ಟಿದ್ದೇನೆ.
ಹಿಜ್ಕೀ ಯನು ಅದಕ್ಕೆ ಸಂತೋಷಪಟ್ಟು ಅವರಿಗೆ ಬೆಳ್ಳಿ, ಬಂಗಾರ, ಸುಗಂಧದ್ರವ್ಯ, ಪರಿಮಳತೈಲ ಮೊದ ಲಾದ ಅಮೂಲ್ಯ ಪದಾರ್ಥಗಳಿರುವ ಮನೆಯನ್ನೂ ಆಯುಧಶಾಲೆಯನ್ನೂ ತನ್ನ ಭಂಡಾರದಲ್ಲಿದ್ದದ್ದೆಲ್ಲ ವನ್ನೂ ತೋರಿಸಿದನು; ಹೀಗೆ ಹಿಜ್ಕೀಯನು ತನ್ನ ಅರಮನೆಯಲ್ಲಿಯೂ ರಾಜ್ಯದಲ್ಲಿಯೂ ಅವರಿಗೆ ತೋರಿಸದಿದ್ದ ವಸ್ತುವು ಒಂದೂ ಇರಲಿಲ್ಲ.
ಕರ್ತನೇ, ಮನುಷ್ಯನ ಮಾರ್ಗವು ತನ್ನಲ್ಲಿಲ್ಲವೆಂದೂ ತನ್ನ ಹೆಜ್ಜೆ ನೆಟ್ಟಗೆ ಮಾಡುವದು ನಡೆಯುವ ಮನುಷ್ಯನದಲ್ಲವೆಂದೂ ಬಲ್ಲೆನು.
ನಿನ್ನ ಅಧಿಕ ಜ್ಞಾನದಿಂದಲೂ ವ್ಯಾಪಾರದಿಂದಲೂ ಸಂಪತ್ತನ್ನು ವೃದ್ಧಿಮಾಡಿಕೊಂಡಿರುವಿ. ನಿನ್ನ ಆಸ್ತಿಯ ನಿಮಿತ್ತ ನಿನ್ನ ಹೃದಯವು ಹೆಚ್ಚಿಸಿಕೊಂಡಿದೆ;
ಆಗ ಅರಸನು ಮಾತನಾಡಿ ಹೇಳಿದ್ದೇನಂದರೆ--ನಾನು ನನ್ನ ಪರಾಕ್ರಮದ ಬಲದಿಂದ ನನ್ನ ಮಹಿ ಮೆಯ ಕೀರ್ತಿಗಾಗಿ ಕಟ್ಟಿಸಿದ ಮಹಾಬಾಬೆಲು ಇದ ಲ್ಲವೇ ಅಂದನು.
ಎಫ್ರಾಯಾಮು--ಆದಾಗ್ಯೂ ನಾನು ಐಶ್ವರ್ಯವಂತನಾದೆನು, ನಾನು ಆಸ್ತಿಯನ್ನು ಕಂಡುಕೊಂಡೆನು; ನನ್ನ ಕೆಲಸಗಳಲ್ಲೆಲ್ಲಾ ಪಾಪವಾದ ದುಷ್ಟತ್ವವನ್ನು ಅವರು ನನ್ನಲ್ಲಿ ಕಂಡುಕೊಳ್ಳುವದಿಲ್ಲ.
ತಮ್ಮ ಬಲೆಗೆ ಬಲಿ ಅರ್ಪಿಸಿ ತಮ್ಮ ಜಾಲಕ್ಕೆ ಧೂಪವನ್ನು ಸುಡುತ್ತಾರೆ; ಇವುಗಳಿಂದ ಅವರ ಪಾಲು ಕೊಬ್ಬಾಗಿಯೂ ಅವರ ಆಹಾರ ಪುಷ್ಟಿ ಯುಳ್ಳದ್ದಾಗಿಯೂ ಇದೆ.ಹೀಗಿರುವದರಿಂದ ಅವರು ತಮ್ಮ ಬಲೆಯನ್ನು ಬರಿದುಮಾಡಿ ನಿತ್ಯವಾಗಿ ಜನಾಂಗ ಗಳನ್ನು ಕರುಣಿಸದೆ ಸದಾ ಸಂಹರಿಸುತ್ತಿರಬೇಕೋ?
ನಾನು ನನ್ನ ಆತ್ಮಕ್ಕೆ--ಆತ್ಮವೇ, ಅನೇಕ ವರುಷ ಗಳಿಗಾಗಿ ನಿನಗೆ ಬಹಳ ಸರಕು ಇಡಲ್ಪಟ್ಟಿದೆ; ನೀನು ವಿಶ್ರಮಿಸಿಕೋ, ತಿನ್ನು, ಕುಡಿ ಆನಂದವಾಗಿರು ಎಂದು ಹೇಳುವೆನು ಎಂದು ಅಂದುಕೊಂಡನು.
ಊದಾಬಣ್ಣದ ವಸ್ತ್ರಗಳನ್ನೂ ನಯವಾದ ನಾರು ಮಡಿಯನ್ನೂ ಧರಿಸಿಕೊಂಡು ಪ್ರತಿದಿನವೂ ಸಮೃದ್ಧಿ ಯಾಗಿ ಭೋಜನಮಾಡುತ್ತಿದ್ದ ಒಬ್ಬಾನೊಬ್ಬ ಐಶ್ವರ್ಯ ವಂತನಿದ್ದನು.
ಆದರೆ ಅಬ್ರಹಾ ಮನು--ಮಗನೇ, ನೀನು ನಿನ್ನ ಜೀವಿತಕಾಲದಲ್ಲಿ ನಿನ್ನ ಒಳ್ಳೆಯವುಗಳನ್ನು ಹೊಂದಿದಿ; ಅದೇ ರೀತಿಯಲ್ಲಿ ಲಾಜರನು ಕೆಟ್ಟವುಗಳನ್ನು ಹೊಂದಿದ್ದನ್ನು ನೆನಪಿಗೆ ತಂದುಕೋ. ಆದರೆ ಈಗ ಅವನು ಆದರಣೆ ಹೊಂದುತ್ತಾ ಇದ್ದಾನೆ; ನೀನು ಯಾತನೆಪಡುತ್ತಾ ಇದ್ದೀ.