Home Bibles ಯೋಬ 31:37 · ಕನ್ನಡ ಬೈಬಲ್
ಯೋಬ 31:37 · ಕನ್ನಡ ಬೈಬಲ್

ನನ್ನ ಹೆಜ್ಜೆ ಗಳ ಎಣಿಕೆಯನ್ನು ಆತನಿಗೆ ತೋರಿಸುವೆನು; ಅಧಿಪತಿ ಯಾಗಿ ಆತನ ಸವಿಾಪಕ್ಕೆ ಬರುವೆನು.

Cross references

ಆದಿಕಾಂಡ 32:28

ಅದಕ್ಕೆ ಆತನುನಿನ್ನ ಹೆಸರು ಇನ್ನು ಮೇಲೆ ಯಾಕೋಬನೆಂದು ಕರೆಯಲ್ಪಡದೆ ಇಸ್ರಾಯೇಲ ಎಂದು ಕರೆಯಲ್ಪಡು ವದು. ಯಾಕಂದರೆ ನೀನು ದೇವರ ಸಂಗಡಲೂ ಮನುಷ್ಯರ ಸಂಗಡಲೂ ಹೋರಾಡಿ ಜಯಿಸಿದ್ದೀ ಅಂದನು.

ಯೋಬ 1:3

ಅವನ ಸಂಪತ್ತು--ಏಳು ಸಾವಿರ ಕುರಿಗಳು, ಮೂರು ಸಾವಿರ ಒಂಟೆಗಳು, ಐನೂರು ಜೋಡು ಎತ್ತುಗಳು, ಐನೂರು ಹೆಣ್ಣು ಕತ್ತೆಗಳೂ ಮತ್ತು ಬಹು ಸೇವಕರ ಸಮೂಹವಿತ್ತು. ಹೀಗೆ ಆ ಮನುಷ್ಯನು ಎಲ್ಲಾ ಮೂಡಣದವರಿಗಿಂತಲೂ ಬಹು ಸ್ವಾಸ್ತ್ಯವುಳ್ಳವ ನಾಗಿದ್ದನು.

ಯೋಬ 9:3

ಆತನ ಸಂಗಡ ವ್ಯಾಜ್ಯವಾಡಲು ಅವನು ಇಚ್ಛಿಸುವದಾದರೆ, ಆತನಿಗೆ ಸಾವಿರದಲ್ಲಿ ಒಂದಕ್ಕೂ ಅವನು ಉತ್ತರಕೊಡಲಾರನು.

ಯೋಬ 13:15

ಆತನು ನನ್ನನ್ನು ಕೊಂದರೂ ನಾನು ಆತನಲ್ಲಿ ಭರವಸೆ ಇಡುವೆನು, ಆದರೆ ನನ್ನ ಮಾರ್ಗ ಗಳನ್ನು ಉಳಿಸಿಕೊಳ್ಳುವೆನು.

ಯೋಬ 14:16

ಈಗ ನನ್ನ ಹೆಜ್ಜೆಗಳನ್ನು ಎಣಿಕೆ ಮಾಡುತ್ತೀ; ನೀನು ನನ್ನ ಪಾಪವನ್ನು ನೋಡಿ ಕೊಳ್ಳುತ್ತೀಯಲ್ಲವೋ?

ಯೋಬ 29:25

ಅವರ ಮಾರ್ಗವನ್ನು ಆದುಕೊಂಡು ಪ್ರಧಾನನಾಗಿ ಕೂತು ಗೋಳಾಡುವವರನ್ನು ಸಂತೈಸುವವನಾಗಿಯೇ ಅರಸನಂತೆ ಸೈನ್ಯದಲ್ಲಿ ಆಸೀನನಾಗಿದ್ದೆನು.

ಯೋಬ 42:3

ಆಲೋಚನೆಯನ್ನು ತಿಳುವಳಿಕೆ ಇಲ್ಲದೆ ಮರೆಮಾಡುವವನಾರು? ಆದದರಿಂದ ನಾನು ಗ್ರಹಿ ಸದೆ ಇದ್ದವುಗಳನ್ನು ನಾನು ತಿಳಿಯದಂಥ, ನನಗೆ ಆಶ್ಚರ್ಯವಾದವುಗಳನ್ನು ಉಚ್ಚರಿಸಿದೆನು.

ಕೀರ್ತನೆಗಳು 19:12

ತನ್ನ ತಪ್ಪುಗಳನ್ನು ತಿಳಿದುಕೊಳ್ಳುವವನಾರು? ಗುಪ್ತವಾದ ಪಾಪಗಳಿಂದ ನನ್ನನ್ನು ನಿರ್ಮಲಮಾಡು.

ಎಫೆಸದವರಿಗೆ 3:12

ಆತನಿಂದಾದ ನಂಬಿಕೆಯ ಮೂಲಕ ನಮಗೆ ಧೈರ್ಯವೂ ಭರವಸವುಳ್ಳ ಪ್ರವೇಶವೂ ಉಂಟಾಯಿತು.

ಹೆಬ್ರಿಯರಿಗೆ 4:15

ಯಾಕಂದರೆ ನಮಗಿ ರುವ ಮಹಾಯಾಜಕನು ನಮ್ಮ ನಿರ್ಬಲಾವಸ್ಥೆಯನ್ನು ಕುರಿತು ಅನುತಾಪವಿಲ್ಲದವನಲ್ಲ; ಆತನು ಸರ್ವ ವಿಷಯಗಳಲ್ಲಿ ನಮ್ಮ ಹಾಗೆ ಶೋಧನೆಗೆ ಗುರಿ ಯಾದರೂ ಪಾಪರಹಿತನಾಗಿದ್ದನು.ಆದದರಿಂದ ನಾವು ಕರುಣೆಯನ್ನು ಹೊಂದುವಂತೆಯೂ ಆತನ ಕೃಪೆಯಿಂದ ಸಮಯೋಚಿತವಾದ ಸಹಾಯವು ನಮಗೆ ದೊರೆಯುವಂತೆಯೂ ಧೈರ್ಯದಿಂದ ಕೃಪಾ ಸಿಂಹಾಸನದ ಬಳಿಗೆ ಬರೋಣ.

1 ಯೋಹಾನ 3:19

ಸತ್ಯಕ್ಕೆ ಸಂಬಂಧಪಟ್ಟವರೆಂಬದು ಇದರಿಂದಲೇ ನಮಗೆ ತಿಳಿಯುತ್ತದೆ; ಆತನ ಸಮಕ್ಷಮದಲ್ಲಿ ನಮ್ಮ ಹೃದಯಗಳನ್ನು ನಿಶ್ಚಯಪಡಿಸಿಕೊಳ್ಳುತ್ತೇವೆ.

Interlinear

Choose Theme