ಇಗೋ, ಆತನು ನನಗೆ ವಿರೋಧವಾಗಿ ಅವಕಾಶಗಳನ್ನು ಕಂಡುಕೊಳ್ಳುತ್ತಾನೆ; ಆತನು ತನಗೆ ಶತ್ರುವೆಂದು ನನ್ನನ್ನು ಎಣಿಸುತ್ತಾನೆ.
Cross references
ಆತನು ಬಿರುಗಾಳಿಯಿಂದ ನನ್ನನ್ನು ಚೂರು ಮಾಡು ತ್ತಾನೆ. ನನ್ನ ಗಾಯಗಳನ್ನು ಕಾರಣವಿಲ್ಲದೆ ಹೆಚ್ಚಿಸು ತ್ತಾನೆ.
ನನ್ನ ವ್ಯಥೆಗಳಿಗೆಲ್ಲಾ ದಿಗಿಲು ಪಡು ತ್ತೇನೆ; ನೀನು ನನ್ನನ್ನು ನಿರಪರಾಧಿ ಎಂದು ಎಣಿಸು ವದಿಲ್ಲವೆಂದು ತಿಳಿದಿದ್ದೇನೆ.
ನಾನು ಕೆಟ್ಟವನಾಗಿದ್ದರೆ ಯಾಕೆ ಈ ವ್ಯರ್ಥವಾದ ಪ್ರಯಾಸ?
ನಾನು ಹಿಮದ ನೀರಿನಲ್ಲಿ ತೊಳಕೊಂಡು ನನ್ನ ಕೈಗಳನ್ನು ಶುಚಿ ಮಾಡೇ ಮಾಡಿದಾಗ್ಯೂ
ನಾನು ದುಷ್ಟನಾಗಿದ್ದರೆ ನನಗೆ ಅಯ್ಯೋ! ನಾನು ನೀತಿವಂತನಾಗಿದ್ದರೂ ನನ್ನ ತಲೆ ಎತ್ತುವದಿಲ್ಲ; ಗಲಿಬಿಲಿಯಿಂದ ನಾನು ತುಂಬಿದ್ದೇನೆ, ಆದದರಿಂದ ನನ್ನ ಬಾಧೆಯನ್ನು ನೋಡು.
ಯಾಕೆ ನಿನ್ನ ಮುಖವನ್ನು ಮರೆಮಾಡುತ್ತೀ; ನನ್ನನ್ನು ನಿನ್ನ ಶತ್ರು ಎಂದು ಯಾಕೆ ಎಣಿಸುತ್ತೀ?
ಈಗ ನನ್ನ ಹೆಜ್ಜೆಗಳನ್ನು ಎಣಿಕೆ ಮಾಡುತ್ತೀ; ನೀನು ನನ್ನ ಪಾಪವನ್ನು ನೋಡಿ ಕೊಳ್ಳುತ್ತೀಯಲ್ಲವೋ?
ಆತನು ತನ್ನ ಕೋಪದಲ್ಲಿ ನನ್ನನ್ನು ಹರಿದುಬಿಡುತ್ತಾನೆ; ನನ್ನನ್ನು ಹಗೆಮಾಡುತ್ತಾನೆ. ತನ್ನ ಹಲ್ಲುಗಳನ್ನು ನನ್ನ ಮೇಲೆ ಕಡಿಯುತ್ತಾನೆ; ನನ್ನ ವೈರಿಯು ತನ್ನ ಕಣ್ಣುಗಳನ್ನು ನನ್ನ ಮೇಲೆ ಮಸೆಯುತ್ತಾನೆ.
ಆತನ ಕೋಪವು ನನ್ನ ಮೇಲೆ ಹೊತ್ತಿ ಅದೆ; ತನ್ನ ವೈರಿಗಳ ಹಾಗೆ ನನ್ನನ್ನು ಎಣಿಸುತ್ತಾನೆ.
ನೀನು ನನಗೆ ಕ್ರೂರವಾದಿ; ನಿನ್ನ ಕೈಯ ಶಕ್ತಿಯಿಂದ, ನನ್ನನ್ನು ಎದುರಿಸುತ್ತೀ.
ಕೇಳುವವನು ನನಗೆ ಸಿಕ್ಕಿದರೆ ವಾಸಿ; ಇಗೋ, ಸರ್ವಶಕ್ತನು ನನಗೆ ಉತ್ತರಕೊಡಲಿ; ನನ್ನ ವಿರೋ ಧಿಯು ಪುಸ್ತಕವನ್ನು ಬರೆಯಲಿ, ಇದೇ ನನ್ನ ಆಶೆ.
ಯೋಬನು--ನಾನು ನೀತಿವಂತನಾಗಿದ್ದೇನೆ, ದೇವರು ನನ್ನ ನ್ಯಾಯತೀ ರ್ಪನ್ನು ತೆಗೆದುಬಿಟ್ಟನು.