Home Bibles ಯೋಬ 33:25 · ಕನ್ನಡ ಬೈಬಲ್
ಯೋಬ 33:25 · ಕನ್ನಡ ಬೈಬಲ್

ಆಗ ಅವನ ಶರೀರವು ಮಗುವಿನ ಶರೀರಕ್ಕಿಂತ ಮೃದುವಾಗಿರು ವದು; ಅವನು ತನ್ನ ಯೌವನ ದಿವಸಗಳಿಗೆ ತಿರುಗಿ ಕೊಳ್ಳುವನು.

Cross references

ದ್ವಿತೀಯೋಪದೇಶಕಾಂಡ 34:7

ಮೋಶೆಯು ಸಾಯುವಾಗ ನೂರಿಪ್ಪತ್ತು ವರುಷದವ ನಾಗಿದ್ದನು. ಅವನ ಕಣ್ಣು ಮೊಬ್ಬಾಗಲಿಲ್ಲ; ಅವನ ತ್ರಾಣ ಕುಂದಲಿಲ್ಲ.

ಯೆಹೋಶುವ 14:10

ಈಗ ಇಗೋ, ಕರ್ತನು ಮೋಶೆಗೆ ಈ ವಾಕ್ಯವನ್ನು ಹೇಳಿದಂದಿನಿಂದ ಇಸ್ರಾಯೇಲ್‌ ಮಕ್ಕಳು ಅರಣ್ಯದಲ್ಲಿ ಸಂಚರಿಸಿದ ನಾಲ್ವತ್ತೈದು ವರುಷ ಕರ್ತನು ಹೇಳಿದ ಹಾಗೆಯೇ ನನ್ನನ್ನು ಜೀವದಿಂದ ಇಟ್ಟಿದ್ದಾನೆ. ಈಗ ಇಗೋ, ನಾನು ಇಂದು ಎಂಭತ್ತೈದು ವರುಷ ಪ್ರಾಯದವನಾಗಿದ್ದೇನೆ.

2 ಅರಸುಗಳು 5:14

ಆಗ ಅವನು ಇಳಿದುಹೋಗಿ ದೇವರ ಮನುಷ್ಯನ ವಾಕ್ಯದ ಪ್ರಕಾರ ಯೊರ್ದನಿನಲ್ಲಿ ಏಳುಸಾರಿ ಮುಣುಗಿದನು; ಆಗ ಅವನ ಶರೀರವು ಚಿಕ್ಕ ಮಗುವಿನ ಶರೀರದ ಹಾಗೆ ಮಾರ್ಪಟ್ಟಿತು; ಅವನು ಶುದ್ಧನಾದನು.

ಯೋಬ 42:16

ತರುವಾಯ ಯೋಬನು ನೂರ ನಾಲ್ವತ್ತು ವರುಷ ಬದುಕಿ ಮಕ್ಕಳನ್ನೂ ಮಕ್ಕಳ ಮಕ್ಕಳನ್ನೂ ನಾಲ್ಕನೇ ತಲಾಂತರದ ವರೆಗೆ ನೋಡಿದನು.ಯೋಬನು ಮುದುಕನಾಗಿಯೂ ದಿನ ತುಂಬಿದವನಾಗಿಯೂ ಸತ್ತನು.

ಕೀರ್ತನೆಗಳು 103:5

ನಿನ್ನ ಯೌವನವು ಹದ್ದಿನಂತೆ ಹೊಸದಾಗುವ ಹಾಗೆ ನಿನ್ನ ಬಾಯಿಯನ್ನು ಒಳ್ಳೇದ ರಿಂದ ತೃಪ್ತಿಪಡಿಸುತ್ತಾನೆ.

ಹೊಶೇಯ 2:15

ಅವಳ ದ್ರಾಕ್ಷೇ ತೋಟಗಳನ್ನು ಅಲ್ಲಿರುವಾ ಗಲೇ ಅವಳಿಗೆ ಹಿಂದಕ್ಕೆ ಕೊಡುವೆನು. ಆಕೋರಿನ ತಗ್ಗನ್ನೇ ಅವಳ ನಿರೀಕ್ಷೆಗೆ ದ್ವಾರವನ್ನಾಗಿ ಮಾಡುವೆನು; ಅಲ್ಲಿ ಅವಳು ಯೌವನದ ದಿನಗಳಲ್ಲಿಯೂ ಐಗುಪ್ತ ದೇಶದೊಳಗಿಂದ ಹೊರಟುಬಂದ ದಿನದಲ್ಲಿಯೂ ಆದ ಹಾಗೆ ಹಾಡುವಳು.

Interlinear

Choose Theme