ದುಷ್ಟತನ ಮಾಡುವವರು ಅಡಗಿ ಕೊಳ್ಳುವ ಹಾಗೆ ಕತ್ತಲೂ ಇಲ್ಲ, ಮರಣದ ನೆರಳೂ ಇಲ್ಲ.
Cross references
ನೀನು ಅದನ್ನು ಮರೆಯಲ್ಲಿ ಮಾಡಿದಿ; ಆದರೆ ನಾನು ಈ ಕಾರ್ಯವನ್ನು ಇಸ್ರಾಯೇಲ್ಯರೆಲ್ಲರ ಮುಂದೆಯೂ ಸೂರ್ಯನ ಮುಂದೆಯೂ ಮಾಡುವೆನು ಅಂದನು.
ಕತ್ತಲೂ ಮರಣದ ನೆರಳೂ ಅದನ್ನು ಅಶುದ್ಧಮಾಡಲಿ; ಮೋಡವು ಅದರ ಮೇಲೆ ವಾಸಮಾಡಲಿ; ಹಗಲಿನ ಮೊಬ್ಬುಗಳು ಅದನ್ನು ಹೆದ ರಿಸಲಿ.
ನಾನು ಪಾಪಮಾಡಿದರೆ ನನ್ನನ್ನು ಗುರುತಿಸಿ ನನ್ನ ಅಕ್ರಮವನ್ನು ಪರಿಹರಿಸುವದಿಲ್ಲ.
ಕತ್ತಲೆಯೊಳಗಿನಿಂದ ಅಗಾಧವಾದ ವಿಷಯಗಳನ್ನು ಪ್ರಕಟಪಡಿಸುತ್ತಾನೆ; ಮರಣದ ನೆರ ಳನ್ನು ಬೆಳಕಿಗೆ ತರುತ್ತಾನೆ.
ಆದರೆ ನೀನು ಹೇಳುತ್ತೀ--ದೇವರು ಏನು ಬಲ್ಲನು? ಆತನು ಕಾರ್ಗತ್ತಲಿಂದ ನ್ಯಾಯತೀರಿಸುವನೋ?
ಉದಯ ಕಾಲವು ಅವರಿಗೆ ಮರಣದ ನೆರಳಿನ ಹಾಗೆಯೇ ಇರುವದು; ಮರಣದ ನೆರಳಿನ ದಿಗಿಲುಗಳನ್ನು ತಿಳು ಕೊಳ್ಳುತ್ತಾರೆ.
ದುಷ್ಟನಿಗೆ ನಾಶವಿಲ್ಲವೋ? ಅಪಕಾರ ಮಾಡುವವರಿಗೆ ಕಠಿಣ ಶಿಕ್ಷೆಯಿಲ್ಲವೋ?
ನಿನ್ನ ದೃಷ್ಟಿಯಲ್ಲಿ ಮೂರ್ಖರು ನಿಂತುಕೊಳ್ಳುವದಿಲ್ಲ. ದುಷ್ಟ ಕೆಲಸ ಮಾಡುವವರೆಲ್ಲರನ್ನು ನೀನು ಹಗೆ ಮಾಡುತ್ತೀ.
ನಿಶ್ಚಯವಾಗಿ ಕತ್ತಲೆಯು ನನ್ನನ್ನು ಕವಿದು ಕೊಳ್ಳುವದೆಂದು ನಾನು ಹೇಳಿದರೆ ರಾತ್ರಿಯು ನನ್ನ ಸುತ್ತಲೂ ಬೆಳಕಾಗಿರುವದು.
ಕರ್ತನೇ, ಕತ್ತಲೆಯು ನಿನಗೆ ಕಾಣದಂತೆ ಮುಚ್ಚುವದಿಲ್ಲ; ರಾತ್ರಿಯು ಹಗಲಿನ ಹಾಗೆ ಬೆಳಗುವದು; ಕತ್ತಲೂ ಬೆಳಕೂ ನಿನಗೆ ಒಂದೇ ಆಗಿವೆ.
ಯಥಾರ್ಥವಂತರಿಗೆ ಕರ್ತನ ಮಾರ್ಗವು ಬಲವಾಗಿದೆ; ಅಕ್ರಮ ಮಾಡುವ ವರಿಗೆ ಅದು ನಾಶನವಾಗಿರುವದು.
ಕತ್ತಲೆಯಲ್ಲಿ ನಡೆಯುವ ಜನರು ದೊಡ್ಡ ಬೆಳಕನ್ನು ಕಂಡರು; ಮರಣದ ನೆರಳಿನ ದೇಶದಲ್ಲಿ ವಾಸಿಸುವವರ ಮೇಲೆ ಬೆಳಕು ಪ್ರಕಾಶಿ ಸುತ್ತದೆ.
ತಮ್ಮ ಆಲೋಚನೆಯನ್ನು ಕರ್ತನಿಗೆ ಮರೆಮಾಜುವದಕ್ಕೆ ಅಗಾಧದಲ್ಲಿ ಮಾಡಿ--ನಮ್ಮನ್ನು ಯಾರು ನೋಡಿಯಾರು? ನಮ್ಮನ್ನು ಯಾರು ತಿಳಿದಾರು ಅಂದುಕೊಂಡು ಕತ್ತಲೆಯಲ್ಲೇ ತಮ್ಮ ಕೆಲಸವನ್ನು ನಡಿಸು ವವರಿಗೆ ಅಯ್ಯೋ!