ನಾನು ನೋಡಿದ್ದನ್ನು ನೀನು ನನಗೆ ಬೋಧಿಸು; ನಾನು ಅನ್ಯಾಯವನ್ನು ಮಾಡಿದ್ದರೆ, ಇನ್ನು ಮೇಲೆ ತಿರುಗಿ ಮಾಡೆನು.
Cross references
ಆಗ ಯೆಹೂದನು ಅವುಗಳನ್ನು ಗುರುತಿಸಿ--ಆಕೆಯು ನನಗಿಂತ ನೀತಿವಂತಳು, ಯಾಕಂದರೆ ನಾನು ನನ್ನ ಮಗನಾದ ಶೇಲಹನಿಗೆ ಅವಳನ್ನು ಕೊಡಲಿಲ್ಲ ಅಂದನು. ಅವನು ಮತ್ತೆ ಆಕೆಯನ್ನು ಅರಿಯಲಿಲ್ಲ.
ಆಗ ಬಿಳಾಮನು ಕರ್ತನ ದೂತನಿಗೆ ಹೇಳಿದ್ದುನಾನು ಪಾಪಮಾಡಿದ್ದೇನೆ; ನೀನು ನನಗೆದುರಾಗಿ ಮಾರ್ಗದಲ್ಲಿ ನಿಂತಿದ್ದಿ ಎಂದು ನನಗೆ ತಿಳಿಯಲಿಲ್ಲ; ಹೀಗಿರಲಾಗಿ ಅದು ನಿನ್ನ ದೃಷ್ಟಿಯಲ್ಲಿ ಕೆಟ್ಟದ್ದಾದರೆ ನಾನು ತಿರುಗಿ ಹಿಂದಕ್ಕೆ ಹೋಗುತ್ತೇನೆ ಅಂದನು.
ನಾನು ದೇವರಿಗೆ ಹೀಗೆ ಹೇಳುತ್ತೇನೆ--ನನ್ನನ್ನು ಖಂಡಿಸಬೇಡ; ಯಾವದಕ್ಕೋ ಸ್ಕರ ನನ್ನ ಸಂಗಡ ವ್ಯಾಜ್ಯಮಾಡುತ್ತೀ ಎಂದು ನನಗೆ ತಿಳಿಸು.
ಆತನು ಮನುಷ್ಯರನ್ನು ನೋಡಿ--ಯಾವನಾದರೂ--ನಾನು ಪಾಪಮಾಡಿ; ನ್ಯಾಯವನ್ನು ವಕ್ರಮಾಡಿದ್ದೇನೆ, ಆದರೆ ನನಗೆ ಅದರಿಂದ ಲಾಭವಾಗಲಿಲ್ಲ ಎಂದು ಹೇಳಿದರೆ;
ಆತನು ಭೂಮಿಯ ಮೃಗಗಳಿಗಿಂತ ನಮಗೆ ಹೆಚ್ಚು ಕಲಿಸಿ, ಆಕಾಶದ ಪಕ್ಷಿಗಳಿಗಿಂತ ನಮಗೆ ಅಧಿಕ ಜ್ಞಾನವನ್ನು ಕೊಡುತ್ತಾನೆ.
ತನ್ನ ತಪ್ಪುಗಳನ್ನು ತಿಳಿದುಕೊಳ್ಳುವವನಾರು? ಗುಪ್ತವಾದ ಪಾಪಗಳಿಂದ ನನ್ನನ್ನು ನಿರ್ಮಲಮಾಡು.
ಗರ್ವದ ಪಾಪಗಳಿಂದ ನಿನ್ನ ಸೇವಕನನ್ನು ದೂರ ಮಾಡು. ಅವು ನನ್ನನ್ನು ಆಳದೆ ಇರಲಿ; ಆಗ ನಾನು ಸಂಪೂರ್ಣನಾಗಿದ್ದು ಮಹಾದ್ರೋಹದಿಂದ ನಿರಪರಾ ಧಿಯಾಗುವೆನು.ನನ್ನ ಬಲವೂ ನನ್ನ ವಿಮೋಚ ಕನೂ ಆಗಿರುವ ಕರ್ತನೇ, ನನ್ನ ಬಾಯಿಯ ಮಾತು ಗಳೂ ನನ್ನ ಹೃದಯದ ಧ್ಯಾನವೂ ನಿನ್ನ ಮುಂದೆ ಮೆಚ್ಚಿಕೆಯಾಗಿರಲಿ.
ಓ ಕರ್ತನೇ, ನಿನ್ನ ಮಾರ್ಗಗಳನ್ನು ನನಗೆ ತೋರಿ ಸು; ನಿನ್ನ ದಾರಿಗಳನ್ನು ನನಗೆ ಕಲಿಸು.
ನಾನು -- ನಿನಗೆ ಬುದ್ದಿ ಹೇಳುವೆನು; ನೀನು ಹೋಗತಕ್ಕ ಮಾರ್ಗವನ್ನು ನಿನಗೆ ಬೋಧಿಸುವೆನು; ನನ್ನ ಕಣ್ಣಿನಿಂದ ನಿನ್ನನ್ನು ನಡಿಸುವೆನು.
ದೇವರೇ, ನನ್ನನ್ನು ಶೋಧಿಸಿ ನನ್ನ ಹೃದಯವನ್ನು ತಿಳಿದುಕೋ; ನನ್ನನ್ನು ಪರೀಕ್ಷಿಸಿ ನನ್ನ ಆಲೋಚನೆಗಳನ್ನು ತಿಳಿದುಕೋ.ನನ್ನಲ್ಲಿ ದುಷ್ಟತ ನದ ಮಾರ್ಗ ಉಂಟೇನೋ ನೋಡಿ ನಿತ್ಯವಾದ ಮಾರ್ಗದಲ್ಲಿ ನನ್ನನ್ನು ನಡಿಸು.
ಹೊತ್ತಾರೆಯಲ್ಲಿ ನಿನ್ನ ಪ್ರೀತಿಕರುಣೆಯನ್ನು ನಾನು ಕೇಳುವಂತೆ ಮಾಡು; ನಿನ್ನಲ್ಲಿ ಭರವಸವಿಟ್ಟಿದ್ದೇನೆ; ನಾನು ಹೋಗಬೇಕಾದ ಮಾರ್ಗವನ್ನು ನನಗೆ ತಿಳಿಯಪಡಿಸು; ನಿನ್ನ ಕಡೆಗೆ ನನ್ನ ಪ್ರಾಣವನ್ನು ಎತ್ತುತ್ತೇನೆ.
ತನ್ನ ಪಾಪಗಳನ್ನು ಮುಚ್ಚಿಕೊಳ್ಳುವವನು ವೃದ್ಧಿಯಾಗನು; ಅವುಗಳನ್ನು ಒಪ್ಪಿಕೊಂಡು ಬಿಟ್ಟುಬಿಡುವವನು ಕರುಣೆ ಹೊಂದುವನು.
ನಿನ್ನ ನಿವಾಸವು ಮೋಸದ ಮಧ್ಯದಲ್ಲಿ ಅದೆ; ಮೋಸದಿಂದಲೇ ನನ್ನನ್ನು ನಿರಾಕರಿಸು ತ್ತಾರೆಂದು ಕರ್ತನು ಅನ್ನುತ್ತಾನೆ.
ಹಾಗಾದರೆ ಮಾನಸಾ ಂತರಕ್ಕೆ ಯೋಗ್ಯವಾದ ಫಲಗಳನ್ನು ಫಲಿಸಿರಿ,--ಅಬ್ರಹಾಮನು ನಮಗೆ ತಂದೆಯಾಗಿದ್ದಾನೆಂದು ನಿಮ್ಮೊಳಗೆ ಅಂದುಕೊಳ್ಳುವದಕ್ಕೆ ಆರಂಭಿಸಬೇ ಡಿರಿ; ಯಾಕಂದರೆ--ದೇವರು ಅಬ್ರಹಾಮನಿಗೆ ಈ ಕಲ್ಲುಗಳಿಂದ ಮಕ್ಕಳನ್ನು ಎಬ್ಬಿಸಶಕ್ತನೆಂದು ನಾನು ನಿಮಗೆ ಹೇಳುತ್ತೇನೆ.
ಯೇಸುವಿನಲ್ಲಿರುವ ಸತ್ಯೋಪದೇಶವು ಯಾವದೆಂದರೆ--ನೀವು ನಿಮ ಹಿಂದಿನ ನಡತೆಯನ್ನು ಅನುಸರಿಸದೆ ಪೂರ್ವಸ್ವಭಾವ ವನ್ನು ತೆಗೆದು ಹಾಕಿಬಿಡಬೇಕು; ಅದು ಮೋಸಕರವಾದ ದುರಾಶೆಗಳಿಂದ ಕೆಟ್ಟು ಹೋಗುವಂಥದು.
ಆದ ಕಾರಣ ಸುಳ್ಳಾಡುವದನ್ನು ಬಿಟ್ಟು ಪ್ರತಿಯೊಬ್ಬನು ತನ್ನ ನೆರೆಯವನ ಸಂಗಡ ಸತ್ಯವನ್ನೇ ಆಡಲಿ; ಯಾಕಂದರೆ ನಾವು ಒಬ್ಬರಿಗೊಬ್ಬರು ಅಂಗಗಳಾಗಿದ್ದೇವಲ್ಲಾ.