ಅವರು ವಿಧೇಯರಾಗಿ ಸೇವಿಸಿದರೆ ತಮ್ಮ ದಿವಸಗಳನ್ನು ಅಭಿವೃದ್ಧಿಯಲ್ಲಿಯೂ ವರುಷ ಗಳನ್ನು ಸುಖದಲ್ಲಿಯೂ ಪೂರೈಸುವರು.
Cross references
ನೀನು ಇಕ್ಕಟ್ಟಿಗೆ ಗುರಿಯಾಗಿ ಇವೆಲ್ಲವುಗಳು ನಿನಗೆ ಸಂಭವಿಸಿದಾಗ ಕಡೇ ದಿವಸ ಗಳಲ್ಲಿ ನಿನ್ನ ದೇವರಾದ ಕರ್ತನ ಕಡೆಗೆ ತಿರುಗಿಕೊಂಡು
ಆಗ ಆತನು ಕನಿಕರಪಟ್ಟು ಅವನ ಬಿನ್ನಹವನ್ನು ಕೇಳಿ ಯೆರೂಸ ಲೇಮಿಗೆ ತನ್ನ ರಾಜ್ಯಕ್ಕೆ ಅವನನ್ನು ತಿರಿಗಿ ಬರಮಾಡಿ ದನು. ಆಗ ಕರ್ತನೇ ದೇವರೆಂದು ಮನಸ್ಸೆಯು ತಿಳಿದುಕೊಂಡನು.
ನೀನು ನಿನ್ನ ಹೃದಯವನ್ನು ಸಿದ್ಧಮಾಡಿ ನಿನ್ನ ಕೈಗಳನ್ನು ಆತನ ಕಡೆಗೆ ಚಾಚಿದರೆ,
ತಮ್ಮ ಚಿಕ್ಕವರನ್ನು ಮಂದೆಯ ಹಾಗೆ ಕಳುಹಿಸು ತ್ತಾರೆ; ಅವರ ಮಕ್ಕಳು ಕುಣಿದಾಡುತ್ತಾರೆ.
ಆತನಿಗೆ ಪರಿಚಿತನಾಗಿ ಸಮಾಧಾನದಿಂದಿರು; ಇದರಿಂದ ನಿನಗೆ ಮೇಲು ಬರುವದು.
ಸರ್ವಶಕ್ತನ ಕಡೆಗೆ ನೀನು ತಿರುಗಿ ಕೊಂಡರೆ ಕಟ್ಟಲ್ಪಡುವಿ; ನಿನ್ನ ಗುಡಾರಗಳಿಂದ ದುಷ್ಟತ್ವವನ್ನು ದೂರ ಮಾಡುವಿ.
ಇದಲ್ಲದೆ ಕರ್ತನು ಯೋಬನ ಆರಂಭಕ್ಕಿಂತ ಅವನ ಅಂತ್ಯವನ್ನು ಆಶೀರ್ವದಿಸಿದನು. ಅವನಿಗೆ ಹದಿನಾಲ್ಕು ಸಾವಿರ ಕುರಿಗಳೂ ಆರು ಸಾವಿರ ಒಂಟೆಗಳೂ ಸಾವಿರ ಜೋಡಿ ಎತ್ತುಗಳೂ ಸಾವಿರ ಹೆಣ್ಣು ಕತ್ತೆಗಳೂ ಇದ್ದವು.
ನಿಶ್ಚಯವಾಗಿ ಅವರು ಅಪರಾಧ ವನ್ನು ಮಾಡದೆ ಆತನ ಮಾರ್ಗಗಳಲ್ಲಿ ನಡೆದುಕೊಳ್ಳು ತ್ತಾರೆ.
ನನಗೆ ಕಿವಿಗೊಡುವವನಾದರೋ ಜೀವಿಸಿ ಯಾವ ಕೇಡಿನ ಭಯವಿಲ್ಲದೆ ನೆಮ್ಮದಿಯಲ್ಲಿರುವನು.
ಎಲ್ಲವು ಗಳು ಎಲ್ಲರಿಗೂ ಒಂದೇ ಬಗೆಯಾಗಿ ಸಂಭವಿಸುವವು. ನೀತಿವಂತನಿಗೂ ದುಷ್ಟನಿಗೂ ಸಂಗತಿ ಒಳ್ಳೆಯವನಿಗೂ ಶುದ್ಧನಿಗೂ ಅಶುದ್ಧನಿಗೂ ಮತ್ತು ಅರ್ಪಿಸುವವನಿಗೂ ಅರ್ಪಿಸದವನಿಗೂ ಒಂದೇ ಗತಿಯಾಗುವದು. ಒಳ್ಳೆಯ ವನ ಹಾಗೆಯೇ ಪಾಪಿಯೂ ಇರುವನು; ಆಣೆಯಿಡು ವವನಿಗೆ ಹೇಗೋ ಹಾಗೆಯೇ ಆಣೆಗೆ ಭಯಪಡುವ ವನೂ ಇರುವನು.
ನೀವು ಒಪ್ಪಿ ವಿಧೇಯರಾದರೆ ದೇಶದ ಮೇಲನ್ನು ಅನುಭವಿಸುವಿರಿ;
ಬಾಬೆಲಿನ ಅರಸನಿಗೆ ಸೇವೆ ಮಾಡದ ಜನಾಂಗಕ್ಕೆ ವಿರೋಧವಾಗಿ ಕರ್ತನು ಮಾತ ನಾಡಿದ ಪ್ರಕಾರ--ನೀನೂ ನಿನ್ನ ಜನರೂ ಯಾಕೆ ಕತ್ತಿಯಿಂದಲೂ ಕ್ಷಾಮದಿಂದಲೂ ಜಾಡ್ಯದಿಂದಲೂ ಸಾಯುವಿರಿ?