Home Bibles ☰ Books ಯೋಬ 36:21 · ಕನ್ನಡ ಬೈಬಲ್
ಯೋಬ 36:21 · ಕನ್ನಡ ಬೈಬಲ್

ದುಷ್ಟತನಕ್ಕೆ ತಿರುಗದ ಹಾಗೆ ಎಚ್ಚರವಾಗಿರು. ಕಷ್ಟಕ್ಕಿಂತ ಇದನ್ನೇ ನೀನು ಆದುಕೊಂಡಿ.

Cross references

ಯೋಬ 7:11

ಆದದರಿಂದ ನಾನು ನನ್ನ ಬಾಯಿಯನ್ನು ಮುಚ್ಚು ವದಿಲ್ಲ; ನಾನು ಆತ್ಮ ವೇದನೆಯಿಂದ ಮಾತನಾಡು ವೆನು; ನನ್ನ ಮನೋವ್ಯಥೆಯಲ್ಲಿ ನಾನು ಗುಣುಗುಟ್ಟು ವೆನು.

ಯೋಬ 34:7

ಯೋಬನಂತೆ ಹಾಸ್ಯವನ್ನು ನೀರಿನಂತೆ ಕುಡಿಯುವ ಪುರುಷನು ಯಾರು?

ಯೋಬ 35:3

ನೀನು--ನನಗೆ ಏನು ಪ್ರಯೋಜನವಾಗುವದು? ನನ್ನ ಪಾಪವು ತೊಳೆ ಯಲ್ಪಟ್ಟರೆ ನನಗೆ ಲಾಭವೇನು ಎನ್ನುವಿ.

ಕೀರ್ತನೆಗಳು 66:18

ನನ್ನ ಹೃದಯದಲ್ಲಿ ಅಪರಾಧವನ್ನು ನಾನು ಆಶಿಸಿದ್ದರೆ ಕರ್ತನು ನನ್ನ ಪ್ರಾರ್ಥನೆಯನ್ನು ಕೇಳುವದಿಲ್ಲ.

ಯೆಹೆಜ್ಕೇಲ 14:4

ಆದದರಿಂದ ನೀನು ಅವರ ಸಂಗಡ ಮಾತನಾಡಿ ಹೇಳಬೇಕಾದದ್ದೇನಂದರೆ --ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಇಸ್ರಾ ಯೇಲಿನ ಮನೆತನದವರ ಪ್ರತಿಯೊಬ್ಬನೂ ತಮ್ಮ ವಿಗ್ರಹಗಳನ್ನು ಹೃದಯಗಳಲ್ಲಿ ನೆಲೆಗೊಳಿಸಿ ಅಕ್ರಮದ ಎಡೆತಡೆಗಳನ್ನು ತಮ್ಮ ಮುಂದೆ ಇಟ್ಟುಕೊಂಡು ಪ್ರವಾ ದಿಯ ಬಳಿಗೆ ಬರುವ ಮನುಷ್ಯನು ಯಾವನೋ ಅವನಿಗೆ ಕರ್ತನಾದ ನಾನು ಅವರ ವಿಗ್ರಹಗಳ ಸಮೂ ಹಕ್ಕೆ ತಕ್ಕ ಹಾಗೆ ಉತ್ತರ ಕೊಡುತ್ತೇನೆ.

ದಾನಿಯೇಲ 3:16

ಆಗ ಶದ್ರಕ್‌ ಮೇಷಕ್‌ ಅಬೇದ್‌ ನೆಗೋ ಎಂಬವರು ಅರಸನಿಗೆ ಪ್ರತ್ಯುತ್ತರವಾಗಿ--ಓ ನೆಬೂಕದ್ನೆಚ್ಚರನೇ, ಈ ವಿಷಯದಲ್ಲಿ ನಾವು ನಿನಗೆ ಉತ್ತರಕೊಡುವ ಅವಶ್ಯಕತೆ ಇಲ್ಲ.

ದಾನಿಯೇಲ 6:10

ಯಾವಾಗ ಬರಹಕ್ಕೆ ರುಜುಹಾಕಿದ್ದಾ ಯಿತ್ತೆಂದು ದಾನಿಯೇಲನಿಗೆ ತಿಳಿಯಿತೋ ಆಗ ಅವನು ತನ್ನ ಮನೆಗೆ ಹೋದನು; ಅವನ ಕೋಣೆಯಲ್ಲಿ ಕಿಟಕಿಗಳು ಯೆರೂಸಲೇಮಿಗೆ ಎದುರಾಗಿ ತೆರೆಯಲ್ಪಟ್ಟಿದ್ದ ರಿಂದ ಅವನು ಮೊದಲು ಮಾಡುತ್ತಿದ್ದ ಪ್ರಕಾರವೇ ದಿನಕ್ಕೆ ಮೂರು ಸಾರಿ ಮೊಣಕಾಲೂರಿ ತನ್ನ ದೇವರ ಸನ್ನಿಧಿಯಲ್ಲಿ ಪ್ರಾರ್ಥನೆಯನ್ನೂ ಸ್ತೋತ್ರವನ್ನೂ ಸಲ್ಲಿಸಿ ದನು.

ಮತ್ತಾಯ 5:29

ಆದದರಿಂದ ನಿನ್ನ ಬಲಗಣ್ಣು ನಿನಗೆ ಅಭ್ಯಂತರವಾಗಿದ್ದರೆ ಅದನ್ನು ಕಿತ್ತು ನಿನ್ನಿಂದ ಬಿಸಾಡಿಬಿಡು; ಯಾಕಂದರೆ ನಿನ್ನ ಇಡೀ ಶರೀರವು ನರಕದಲ್ಲಿ ಹಾಕಲ್ಪಡುವದಕ್ಕಿಂತ ನಿನ್ನ ಅಂಗಗಳಲ್ಲಿ ಒಂದು ನಾಶವಾಗುವದು ನಿನಗೆ ಲಾಭಕರವಾಗಿದೆ.

ಮತ್ತಾಯ 13:21

ಆದರೂ ಅವನಲ್ಲಿ ಬೇರಿಲ್ಲದ ಕಾರಣ ಸ್ವಲ್ಪಕಾಲ ಮಾತ್ರ ಇರುವನು; ಯಾಕಂದರೆ ವಾಕ್ಯಕ್ಕಾಗಿ ಸಂಕಟ ಇಲ್ಲವೆ ಹಿಂಸೆ ಬಂದಾಗ ತಕ್ಷಣವೇ ಅವನು ಅಭ್ಯಂತರ ಪಡುವನು.

ಮತ್ತಾಯ 16:24

ತರುವಾಯ ಯೇಸು ತನ್ನ ಶಿಷ್ಯರಿಗೆ--ಯಾವ ನಾದರೂ ನನ್ನ ಹಿಂದೆ ಬರುವದಕ್ಕೆ ಅಪೇಕ್ಷಿಸಿದರೆ ಅವನು ತನ್ನನ್ನು ತಾನೇ ನಿರಾಕರಿಸಿ ತನ್ನ ಶಿಲುಬೆಯನ್ನು ಹೊತ್ತುಕೊಂಡು ನನ್ನನ್ನು ಹಿಂಬಾಲಿಸಲಿ.

ಅಪೋಸ್ತಲರ ಕೃತ್ಯಗಳು 5:40

ಇದಕ್ಕೆ ಅವರು ಅವನೊಂದಿಗೆ ಒಪ್ಪಿಕೊಂಡು ಅಪೊಸ್ತಲರನ್ನು ಕರೆಯಿಸಿ ಅವರನ್ನು ಹೊಡೆದು ಯೇಸುವಿನ ಹೆಸರಿನಲ್ಲಿ ಮಾತನಾಡಬಾರದೆಂದು ಅಪ್ಪಣೆ ಕೊಟ್ಟು ಬಿಟ್ಟುಬಿಟ್ಟರು.

ಹೆಬ್ರಿಯರಿಗೆ 11:25

ಸ್ವಲ್ಪ ಕಾಲ ಪಾಪಭೋಗಗಳನ್ನನುಭವಿಸುವದಕ್ಕಿಂತ ದೇವಜನರೊಂದಿಗೆ ಕಷ್ಟವನ್ನನುಭವಿಸುವದನ್ನೇ ಆರಿಸಿ ಕೊಂಡನು.

Interlinear

Choose Theme