ಶಿಕ್ಷೆಗಾಗಲಿ ಅವನ ಭೂಮಿಗಾಗಲಿ ಕರು ಣೆಗಾಗಲಿ ಆತನು ಅದನ್ನು ಬರಮಾಡುತ್ತಾನೆ.
Cross references
ಇಗೋ, ನಾಳೆ ಇಷ್ಟು ಹೊತ್ತಿಗೆ ಮಹಾಕಠಿಣವಾದ ಆನೆಕಲ್ಲಿನ ಮಳೆಯನ್ನು ಬೀಳಮಾಡುತ್ತೇನೆ. ಇಂಥದ್ದು ಐಗುಪ್ತದಲ್ಲಿ ಅದಕ್ಕೆ ಅಸ್ತಿವಾರ ಹಾಕಿದಂದಿನಿಂದ ಇಲ್ಲಿಯವರೆಗೂ ಆಗಿರಲಿಲ್ಲ.
ಸಮುವೇಲನು ಕರ್ತನಿಗೆ ಮೊರೆ ಇಟ್ಟದ್ದರಿಂದ ಆ ದಿವಸದಲ್ಲೇ ಕರ್ತನು ಗುಡುಗನ್ನೂ ಮಳೆಯನ್ನೂ ಕಳುಹಿಸಿದನು. ಆಗ ಜನರೆಲ್ಲರು ಕರ್ತನಿಗೂ ಸಮು ವೇಲನಿಗೂ ಬಹಳವಾಗಿ ಭಯಪಟ್ಟರು.
ಆಗ ಅಯ್ಯಾಹನ ಮಗಳಾದ ರಿಚ್ಪಳು ಗೋಣಿತಟ್ಟನ್ನು ತಕ್ಕೊಂಡುಹೋಗಿ ಗುಡ್ಡದ ಮೇಲೆ ಅದನ್ನು ತನಗೋಸ್ಕರ ಹಾಸಿ ಸುಗ್ಗಿಯ ದಿವಸ ಮೊದಲುಗೊಂಡು ಆಕಾಶದಿಂದ ಅವರ ಮೇಲೆ ಮಳೆ ಸುರಿಯುವ ವರೆಗೂ ಹಗಲಲ್ಲಿ ಆಕಾಶದ ಪಕ್ಷಿಗಳೂ ರಾತ್ರಿಯಲ್ಲಿ ಅಡವಿಯ ಮೃಗಗಳೂ ಅದರ ಮೇಲೆ ಕೂತುಕೊಳ್ಳದಂತೆ ಕಾಯುತ್ತಿದ್ದಳು.
ಸೌಲನ ಮತ್ತು ಅವನ ಮಗನಾದ ಯೋನಾತಾನನ ಎಲುಬುಗಳನ್ನು ಬೆನ್ಯಾವಿಾನನ ದೇಶದ ಚೇಲಾದಲ್ಲಿರುವ ಅವನ ತಂದೆಯಾದ ಕೀಷನ ಸಮಾಧಿಯಲ್ಲಿ ಹೂಣಿಟ್ಟರು. ಅವರು ಅರಸನು ಆಜ್ಞಾ ಪಿಸಿದ್ದನ್ನೆಲ್ಲಾ ತೀರಿಸಿದ ತರುವಾಯ ದೇಶಕ್ಕೋಸ್ಕರ ದೇವರಿಗೆ ವಿಜ್ಞಾಪನೆ ಮಾಡಿದರು.
ಆಗ ಇದ್ದ ಕ್ಕಿದ್ದ ಹಾಗೆ ಆಕಾಶವು ಮೇಘಗಳಿಂದಲೂ ಗಾಳಿ ಯಿಂದಲೂ ಕಪ್ಪಾಗಿ ದೊಡ್ಡ ಮಳೆಯು ಉಂಟಾಯಿತು. ಆದರೆ ಅಹಾಬನು ರಥದಲ್ಲಿ ಏರಿ ಇಜ್ರೇಲಿಗೆ ಹೋದನು.ಆದರೆ ಕರ್ತನ ಕೈ ಎಲೀಯನ ಮೇಲೆ ಇದ್ದದರಿಂದ ಅವನು ತನ್ನ ನಡುವನ್ನು ಕಟ್ಟಿಕೊಂಡು ಇಜ್ರೇಲಿನ ವರೆಗೂ ಅಹಾಬನಿಗೆ ಮುಂದಾಗಿ ಓಡಿದನು.
ಆಗ ಯೆಹೂದ ಮತ್ತು ಬೆನ್ಯಾವಿಾನಿನ ಮನುಷ್ಯರೆಲ್ಲರೂ ಮೂರು ದಿವಸಗಳೊಳಗೆ ಯೆರೂಸಲೇಮಿನಲ್ಲಿ ಕೂಡಿ ದರು. ಅದು ಒಂಭತ್ತನೇ ತಿಂಗಳ ಇಪ್ಪತ್ತನೇ ದಿವಸ ವಾಗಿತ್ತು. ಜನರೆಲ್ಲರು ದೇವರ ಆಲಯದ ಬೀದಿಯಲ್ಲಿ ಆ ಕಾರ್ಯಕ್ಕೊಸ್ಕರವೂ ಮಳೆಗೋಸ್ಕರವೂ ನಡುಗಿ ಕೂತುಕೊಂಡಿದ್ದರು.
ಅವುಗಳಿಂದ ಜನಗಳಿಗೆ ಆತನು ನ್ಯಾಯ ತೀರಿಸುತ್ತಾನೆ; ಸಮೃದ್ಧಿಯಾಗಿ ಆತನು ಆಹಾರ ಕೊಡುತ್ತಾನೆ.
ಆತನು ಹಿಮಕ್ಕೂ ಮಳೆಗರಿಯುವಿಕೆಗೂ ಮಳೆಯ ಬಲವಾದ ಹೊಯ್ಯುವಿಕೆಗೂ ಭೂಮಿಯ ಮೇಲೆ ಬೀಳು ಅನ್ನಲಾಗಿ
ಅದು ಮನುಷ್ಯನಿಲ್ಲದ ಭೂಮಿಯ ಮೇಲೆಯೂ ಜನರಿಲ್ಲದ ಅರಣ್ಯದಲ್ಲಿಯೂ ಸುರಿಯುವದು;
ಹಾಳು ಬೈಲು ಗಳಿಗೆ ತೃಪ್ತಿಯನ್ನು ಉಂಟು ಮಾಡುವದು; ಪಲ್ಯಗಳ ಮೊಳಿಕೆಯನ್ನು ಮೊಳಿಸುವದು.
ಯಾವನು ಮೋಡಗಳನ್ನು ಜ್ಞಾನ ದಿಂದ ಎಣಿಸುತ್ತಾನೆ;
ಉಳುವೆಯ ಸಾಲುಗಳನ್ನು ಸಮೃದ್ಧಿ ಯಾಗಿ ತ್ಯಾವಿಸುತ್ತೀ; ನೇಗಿಲ ಸಾಲುಗಳನ್ನು ಸಮಮಾಡುತ್ತೀ; ಸುರಿಯುವ ಮಳೆಯಿಂದ ಅದನ್ನು ಮೃದು ಮಾಡುತ್ತೀ; ಅದರ ಮೊಳಿಕೆಯನ್ನು ಆಶೀರ್ವದಿಸುತ್ತೀ.
ಹಾಗಾದರೆ ಚೀಯೋನಿನ ಮಕ್ಕಳೇ, ನಿಮ್ಮ ದೇವ ರಾದ ಕರ್ತನಲ್ಲಿ ಉಲ್ಲಾಸಿಸಿ, ಸಂತೋಷವಾಗಿರ್ರಿ; ನಿಮಗೆ ಮುಂಗಾರು ಮಳೆಯನ್ನು ಸರಿಯಾಗಿ ಕೊಡು ತ್ತಾನೆ; ಮುಂಗಾರು ಹಿಂಗಾರು ಮಳೆಗಳನ್ನು ಮುಂಚಿನ ಹಾಗೆ ನಿಮಗೆ ಸುರಿಸುತ್ತಾನೆ.