ಅದರ ತರುವಾಯ ಶಬ್ದವು ಗರ್ಜಿಸುತ್ತದೆ; ತನ್ನ ಮಹತ್ತಿನ ಶಬ್ದದಿಂದ ಗುಡುಗುತ್ತಾನೆ. ಆತನ ಶಬ್ದ ಕೇಳಲ್ಪಡುವಾಗ ಅವು ಗಳನ್ನು ಹಿಂದೆಗೆಯುವದಿಲ್ಲ.
Cross references
ನಿನ್ನ ಮಹತ್ತಾದ ಘನತೆಯಲ್ಲಿ ನಿನಗೆ ವಿರೋಧವಾಗಿ ಎದ್ದವರನ್ನು ಕೆಡವಿ ಬಿಟ್ಟಿರುವಿ. ನಿನ್ನ ರೌದ್ರವು ಹೊರಟು ಅವರನ್ನು ಹುಲ್ಲಿನಂತೆ ದಹಿಸಿಬಿಟ್ಟಿತು.
ಯೆಶುರೂನನ ದೇವರ ಹಾಗೆ ಯಾರೂ ಇಲ್ಲ. ಆತನು ನಿನ್ನ ಸಹಾಯಕ್ಕೆ ಪರಲೋಕದಲ್ಲಿಯೂ ತನ್ನ ಘನತೆಯಲ್ಲಿಯೂ ಆಕಾಶದ ಮೇಲೆಯೂ ಬರುತ್ತಾನೆ.
ಆತನು ಮಳೆಗೆ ಕಟ್ಟಳೆಯನ್ನೂ ಗುಡುಗಿನ ಮಿಂಚಿಗೆ ಮಾರ್ಗವನ್ನೂ ಮಾಡಿದಾಗ
ಆತನು ನೀರಿನ ಹನಿಗಳನ್ನು ಕೂಡಿಸಿದಾಗ, ಅದರ ಮಂಜಿನ ಪ್ರಕಾರ ಮಳೆಯನ್ನು ಸುರಿಸುತ್ತವೆ.
ಇಲ್ಲವೆ ದೇವರ ಹಾಗೆ ತೋಳುಳ್ಳವನಾಗಿದ್ದೀಯೋ? ಇಲ್ಲವೆ ಆತನ ಹಾಗೆ ಗುಡುಗಿನಿಂದ ಆರ್ಭಟ ಮಾಡು ವಿಯೋ?
ಹೌದು, ತನ್ನ ಬಾಣಗಳನ್ನು ಕಳುಹಿಸಿ ಅವರನ್ನು ಚದುರಿಸಿದನು; ಮಿಂಚುಗಳನ್ನೆಸೆದು ಅವರನ್ನು ಗಲಿಬಿಲಿ ಮಾಡಿದನು.
ಕರ್ತನ ಧ್ವನಿಯು ನೀರುಗಳ ಮೇಲೆ ಅದೆ. ಮಹಿ ಮೆಯ ದೇವರು ಗುಡುಗುತ್ತಾನೆ. ಕರ್ತನು ಬಹಳ ನೀರುಗಳ ಮೇಲೆ ಇದ್ದಾನೆ.
ಅನಾದಿಯಿಂದಿದ್ದ ಆಕಾಶಗಳಲ್ಲಿ ಸವಾರಿಮಾಡು ವಾತನಿಗೆ ಹಾಡಿರಿ; ಇಗೋ, ಆತನು ತನ್ನ ಮಹಾ ಧ್ವನಿಯಿಂದ ಧ್ವನಿಗೈಯುತ್ತಾನೆ.