Home Bibles ಯೋಬ 37:6 · ಕನ್ನಡ ಬೈಬಲ್
ಯೋಬ 37:6 · ಕನ್ನಡ ಬೈಬಲ್

ಆತನು ಹಿಮಕ್ಕೂ ಮಳೆಗರಿಯುವಿಕೆಗೂ ಮಳೆಯ ಬಲವಾದ ಹೊಯ್ಯುವಿಕೆಗೂ ಭೂಮಿಯ ಮೇಲೆ ಬೀಳು ಅನ್ನಲಾಗಿ

Cross references

ಆದಿಕಾಂಡ 7:10

ಏಳು ದಿವಸಗಳಾದ ಮೇಲೆ ಪ್ರಳಯದ ನೀರು ಭೂಮಿಯ ಮೇಲೆ ಇತ್ತು.

ಎಜ್ರಾ 10:9

ಆಗ ಯೆಹೂದ ಮತ್ತು ಬೆನ್ಯಾವಿಾನಿನ ಮನುಷ್ಯರೆಲ್ಲರೂ ಮೂರು ದಿವಸಗಳೊಳಗೆ ಯೆರೂಸಲೇಮಿನಲ್ಲಿ ಕೂಡಿ ದರು. ಅದು ಒಂಭತ್ತನೇ ತಿಂಗಳ ಇಪ್ಪತ್ತನೇ ದಿವಸ ವಾಗಿತ್ತು. ಜನರೆಲ್ಲರು ದೇವರ ಆಲಯದ ಬೀದಿಯಲ್ಲಿ ಆ ಕಾರ್ಯಕ್ಕೊಸ್ಕರವೂ ಮಳೆಗೋಸ್ಕರವೂ ನಡುಗಿ ಕೂತುಕೊಂಡಿದ್ದರು.

ಎಜ್ರಾ 10:13

ಆದರೆ ಜನರು ಅನೇಕರು; ಇದು ಮಳೆಕಾಲ ವಾಗಿರುವದರಿಂದ ಹೊರಗೆ ಇರಲಾರೆವು; ಇದಲ್ಲದೆ ಇದು ಒಂದೆರಡು ದಿವಸದ ಕೆಲಸವಲ್ಲ. ಈ ಕಾರ್ಯ ದಲ್ಲಿ ದ್ರೋಹ ಮಾಡಿದ ನಾವು ಅನೇಕರಾಗಿದ್ದೇವೆ.

ಯೋಬ 5:10

ಭೂಮಿಯ ಮೇಲೆ ಮಳೆಯನ್ನು ಸುರಿಸುತ್ತಾನೆ; ಹೊಲಗಳ ಮೇಲೆ ನೀರನ್ನು ಕಳುಹಿಸುತ್ತಾನೆ;

ಯೋಬ 36:27

ಆತನು ನೀರಿನ ಹನಿಗಳನ್ನು ಕೂಡಿಸಿದಾಗ, ಅದರ ಮಂಜಿನ ಪ್ರಕಾರ ಮಳೆಯನ್ನು ಸುರಿಸುತ್ತವೆ.

ಯೋಬ 38:22

ನೀನು ಹಿಮದ ಉಗ್ರಾಣಗಳಲ್ಲಿ ಪ್ರವೇಶಿಸಿ ದಿಯೋ? ಇಲ್ಲವೆ ಆನೇಕಲ್ಲಿನ ಉಗ್ರಾಣಗಳನ್ನು ನೋಡಿದಿಯೋ?

ಕೀರ್ತನೆಗಳು 147:16

ಆತನು ಹಿಮವನ್ನು ಉಣ್ಣೆಯ ಹಾಗೆ ಕೊಡುತ್ತಾನೆ; ಮಂಜನ್ನು ಬೂದಿಯ ಹಾಗೆ ಚದರಿಸುತ್ತಾನೆ.

ಕೀರ್ತನೆಗಳು 148:8

ಬೆಂಕಿಯೇ, ಕಲ್ಮಳೆಯೇ, ಹಿಮವೇ, ಹಬೆಯೇ, ಆತನ ವಾಕ್ಯವನ್ನು ಕೈಕೊಳ್ಳುವ ಬಿರು ಗಾಳಿಯೇ,

ಸಾಮೇತಿಗಳು 28:3

ಬಡವರನ್ನು ಹಿಂಸಿಸುವ ದರಿದ್ರನು ಆಹಾರವನ್ನು ಉಳಿಸದಂತೆ ಸುರಿಯುವ ಮಳೆಯಂತಿದ್ದಾನೆ.

ಯೆಹೆಜ್ಕೇಲ 13:11

ಸುಣ್ಣ ಹಚ್ಚುತ್ತಿರುವವನಿಗೆ--ಅದು ಬೀಳುವದೆಂದು ಹೇಳು; ಅಲ್ಲಿ ವಿಪರೀತ ಮಳೆ ಬರುವದು ಮತ್ತು ದೊಡ್ಡ ಕಲ್ಮಳೆಯು ಬೀಳುವದು; ಬಿರುಗಾಳಿಯು ಅದನ್ನು ಸೀಳಿಬಿಡುವದು.

ಯೆಹೆಜ್ಕೇಲ 13:13

ಆದದರಿಂದ ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಅದನ್ನು ನನ್ನ ಉರಿಯಲ್ಲಿ ಬಿರುಗಾಳಿಯಿಂದ ಸೀಳಿಬಿಡುವೆನು. ಅದನ್ನು ನಾಶ ಪಡಿಸುವ ಹಾಗೆ ನನ್ನ ಕೋಪದಿಂದ ವಿಪರೀತ ಮಳೆಯೂ ನನ್ನ ಉರಿಯಿಂದ ಕಲ್ಮಳೆಯ ಕಲ್ಲುಗಳೂ ಸುರಿಯುವವು;

ಆಮೋಸ 9:6

ಆಕಾಶದಲ್ಲಿ ಉಪ್ಪರಿಗೆ ಗಳನ್ನು ಕಟ್ಟಿಕೊಂಡು ಭೂಮಿಯ ಮೇಲೆ ತಮ ತಂಡಗಳನ್ನು ಸ್ಥಾಪಿಸಿ ಸಮುದ್ರದ ನೀರನ್ನು ಕರೆದು ಅದನ್ನು ಭೂಮಿಯ ಮೇಲೆ ಒಯ್ಯುವಂತೆ ಮಾಡು ವವನು ಆತನೇ. ಆತನ ಹೆಸರು ಕರ್ತನು.

ಮತ್ತಾಯ 7:25

ಮಳೆಯು ಸುರಿದು ಪ್ರವಾಹಗಳು ಬಂದು ಗಾಳಿಯು ಬೀಸಿ ಆ ಮನೆಗೆ ಬಡಿದವು; ಆದರೂ ಅದು ಬೀಳಲಿಲ್ಲ; ಯಾಕಂದರೆ ಅದರ ಅಸ್ತಿವಾರವು ಬಂಡೆಯ ಮೇಲೆ ಹಾಕಲ್ಪಟ್ಟಿತು.

Interlinear

Choose Theme