Home Bibles ಯೋಬ 38:19 · ಕನ್ನಡ ಬೈಬಲ್
ಯೋಬ 38:19 · ಕನ್ನಡ ಬೈಬಲ್

ಬೆಳಕಿನ ನಿವಾಸಕ್ಕೆ ದಾರಿ ಯಾವದು? ಕತ್ತಲೆ ಯಾದರೋ ಅದರ ಸ್ಥಳವೆಲ್ಲಿದೆ?

Cross references

ಆದಿಕಾಂಡ 1:3

ಆಗ ದೇವರು--ಬೆಳಕಾಗಲಿ ಅನ್ನಲು ಬೆಳಕಾ ಯಿತು.

ಆದಿಕಾಂಡ 1:14

ದೇವರು--ಹಗಲನ್ನು ರಾತ್ರಿಯಿಂದ ಬೇರೆ ಮಾಡುವದಕ್ಕೆ ಆಕಾಶದ ವಿಶಾಲದಲ್ಲಿ ಬೆಳಕುಗಳಿರಲಿ; ಅವು ಹಗಲಿರುಳುಗಳನ್ನೂ ಸಮಯ ದಿನ ಸಂವತ್ಸರ ಗಳನ್ನೂ ತೋರಿಸುವದಕ್ಕೆ ಗುರುತುಗಳಾಗಿರಲಿ;

ದ್ವಿತೀಯೋಪದೇಶಕಾಂಡ 4:19

ನೀನು ನಿನ್ನ ಕಣ್ಣು ಗಳನ್ನು ಆಕಾಶದ ಕಡೆಗೆ ಎತ್ತಿ ಸೂರ್ಯ, ಚಂದ್ರ, ನಕ್ಷತ್ರಗಳ ಆಕಾಶ ಸೈನ್ಯವನ್ನೆಲ್ಲಾ ನೋಡಲಾಗಿ ನಿನ್ನ ದೇವರಾದ ಕರ್ತನು ಆಕಾಶದ ಕೆಳಗಿರುವ ಎಲ್ಲಾ ಜನಾಂಗಗಳಿಗೆ ಹಂಚಿಕೊಟ್ಟ ಇವುಗಳಿಗೆ ಅಡ್ಡಬಿದ್ದು ಇವುಗಳನ್ನು ಸೇವಿಸುವದಕ್ಕೆ ನಡಿಸಲ್ಪಡದಂತೆಯೂ ನೋಡಿಕೊಳ್ಳಿರಿ.

ಯೋಬ 38:12

ನಿನ್ನ ದಿವಸಗಳಾರಭ್ಯ ಬೆಳಿಗ್ಗೆಗೆ ಅಪ್ಪಣೆ ಕೊಟ್ಟಿಯೋ?

ಕೀರ್ತನೆಗಳು 18:11

ಕತ್ತಲನ್ನು ತನಗೆ ಮರೆಯ ಸ್ಥಳವಾಗಿ ಯೂ ಕತ್ತಲಿನ ನೀರುಗಳನ್ನು ಆಕಾಶದ ಮಂದವಾದ ಮೋಡಗಳನ್ನು ತನ್ನ ಸುತ್ತಲು ಡೇರೆಯಾಗಿಯೂ ಮಾಡಿ ದನು.

ಕೀರ್ತನೆಗಳು 104:20

ನೀನು ಕತ್ತಲನ್ನು ಬರಮಾಡುತ್ತೀ; ಆಗ ರಾತ್ರಿಯಾಗುತ್ತದೆ; ಅದರಲ್ಲಿ ಅಡವಿಯ ಮೃಗ ಗಳೆಲ್ಲಾ ಸಂಚರಿಸುತ್ತವೆ.

ಕೀರ್ತನೆಗಳು 105:28

ಆತನು ಕತ್ತಲನ್ನು ಕಳುಹಿಸಿ ಅದನ್ನು ಕತ್ತಲಾಗ ಮಾಡಿದನು; ಆಗ ಆತನ ಮಾತಿಗೆ ಅವರು ಎದು ರಾಡಲಿಲ್ಲ.

ಯೆಶಾಯ 45:7

ನಾನು ಬೆಳಕನ್ನು ರೂಪಿಸುವವನೂ ಕತ್ತಲನ್ನು ನಿರ್ಮಿಸುವವನೂ ಸಮಾಧಾನವನ್ನು ಮಾಡು ವವನೂ ಕೆಟ್ಟದ್ದನ್ನು ನಿರ್ಮಿಸುವವನೂ ನಾನೇ; ಕರ್ತ ನಾದ ನಾನೇ ಇವುಗಳನ್ನೆಲ್ಲಾ ಮಾಡುತ್ತೇನೆ.

ಯೆರೆಮಿಯ 13:16

ಅವರ ಪ್ರವಾದನೆಯನು ಕೇಳುವ ಜನರು ಕ್ಷಾಮದ ಮತ್ತು ಕತ್ತಿಯ ನಿಮಿತ್ತ ಯೆರೂಸಲೇಮಿನ ಬೀದಿಗಳಲ್ಲಿ ಬಿಸಾಡಲ್ಪಡುವರು; ಅವರನ್ನೂ ಹೆಂಡತಿಯರನ್ನೂ ಕುಮಾರರನ್ನೂ ಕುಮಾರ್ತೆಯರನ್ನೂ ಹೂಣಿಡುವದಕ್ಕೆ ಯಾರೂ ಇರು ವದಿಲ್ಲ; ನಾನು ಅವರ ಕೆಟ್ಟತನವನ್ನು ಅವರ ಮೇಲೆ ಹೊಯಿದು ಬಿಡುವೆನು.

ಯೆಹೆಜ್ಕೇಲ 32:8

ಆಕಾಶದಲ್ಲಿ ಪ್ರಕಾಶಿ ಸುವ ಬೆಳಕುಗಳನ್ನು ನಿನ್ನ ನಿಮಿತ್ತವಾಗಿ ನಾನು ಕತ್ತಲು ಮಾಡುವೆನು; ಆ ಕತ್ತಲೆಯನ್ನು ನಿನ್ನ ದೇಶದ ಮೇಲೆ ಇಡುತ್ತೇನೆಂದು ದೇವರಾದ ಕರ್ತನು ಹೇಳುತ್ತಾನೆ.

ಆಮೋಸ 4:13

ಇಗೋ, ಬೆಟ್ಟಗಳನ್ನು ರೂಪಿಸಿ ಗಾಳಿ ಯನ್ನು ನಿರ್ಮಿಸಿ ಮನುಷ್ಯನಿಗೆ ಅವನ ಯೋಚನೆ ಏನೆಂದು ತಿಳಿಸಿ ಉದಯವನ್ನು ಅಂಧಕಾರವನ್ನಾಗಿ ಮಾಡಿ ಭೂಮಿಯ ಉನ್ನತ ಸ್ಥಳಗಳನ್ನು ತುಳಿದು ಬಿಡುವಾತನು ಆತನೇ. ಕರ್ತನೂ ಸೈನ್ಯಗಳ ದೇವರೂ ಎಂಬದು ಆತನ ಹೆಸರು.

ಮತ್ತಾಯ 27:45

ಆಗ ಆರನೇ ತಾಸಿನಿಂದ ಒಂಭತ್ತನೇ ತಾಸಿನವರೆಗೆ ದೇಶದ ಮೇಲೆಲ್ಲಾ ಕತ್ತಲೆ ಇತ್ತು.

ಯೋಹಾನ 1:9

ಲೋಕದಲ್ಲಿ ಬರುವ ಪ್ರತಿಯೊಬ್ಬ ಮನುಷ್ಯನಿಗೆ ಆತನು ಬೆಳಕನ್ನು ಕೊಡುವ ನಿಜವಾದ ಬೆಳಕಾಗಿದ್ದನು.

ಯೋಹಾನ 8:12

ತರುವಾಯ ಯೇಸು ತಿರಿಗಿ ಮಾತನಾಡಿ ಅವರಿಗೆ--ನಾನೇ ಲೋಕಕ್ಕೆ ಬೆಳಕಾಗಿದ್ದೇನೆ; ನನ್ನನ್ನು ಹಿಂಬಾಲಿಸುವವನು ಕತ್ತಲೆಯಲ್ಲಿ ನಡೆಯುವದಿಲ್ಲ; ಆದರೆ ಜೀವದ ಬೆಳಕನ್ನು ಹೊಂದುವನು ಎಂದು ಹೇಳಿದನು.

Interlinear

Choose Theme