ತಿಳು ವಳಿಕೆ ಇಲ್ಲದ ಮಾತುಗಳಿಂದ ಆಲೋಚನೆಯನ್ನು ಕತ್ತಲಾಗಿ ಮಾಡುವ ಇವನಾರು?
Cross references
ನಿಮ್ಮ ಹಾಗೆಯೇ ನನಗೂ ಸಹ ತಿಳುವಳಿಕೆ ಉಂಟು; ನಾನು ನಿಮಗಿಂತ ಕಡಿಮೆ ಇಲ್ಲ. ಹೌದು, ಇಂಥಾ ಮಾತುಗಳನ್ನು ತಿಳಿಯದಿರುವವನು ಯಾರು?
ನ್ಯಾಯವನ್ನು ಆತನ ಮುಂದೆ ಸಿದ್ಧಮಾಡುವೆನು; ನನ್ನ ಬಾಯನ್ನು ಪ್ರತಿವಾದಗಳಿಂದ ತುಂಬಿಸುವೆನು.
ಈಗ ಹೀಗೆ ಇಲ್ಲದಿದ್ದರೆ ಯಾವನು ನನ್ನನ್ನು ಸುಳ್ಳುಗಾರನನ್ನಾಗಿ ಮಾಡಿ ನನ್ನ ನುಡಿಯನ್ನು ವ್ಯರ್ಥ ಮಾಡುವನು?
ಜ್ಞಾನವಿಲ್ಲದವನಿಗೆ ಏನು ಆಲೋಚನೆ ಹೇಳಿದಿ? ಇದ್ದಂತೆ ಇರುವದನ್ನು ನೀನು ಬಹಳ ವಾಗಿ ಬೋಧಿಸಿದಿಯಲ್ಲಾ;
ದೇವರ ಸಹಾಯದಿಂದ ನಿಮಗೆ ಬೋಧಿಸು ವೆನು; ಸರ್ವಶಕ್ತನಲ್ಲಿ ಇರುವವುಗಳನ್ನು ಮರೆ ಮಾಡೆನು.
ಯೋಬನು ತಿಳುವಳಿಕೆಯಿಲ್ಲದೆ ಮಾತ ನಾಡಿದ್ದಾನೆ. ಅವನ ಮಾತುಗಳು ಬುದ್ಧಿಯುಳ್ಳವು ಗಳಲ್ಲ.
ಆದದರಿಂದ ಯೋಬನು ವ್ಯರ್ಥವಾಗಿ ಬಾಯಿ ತೆರೆದು ತಿಳುವಳಿಕೆ ಇಲ್ಲದೆ ನುಡಿಗಳನ್ನು ಹೆಚ್ಚಿಸುತ್ತಾನೆ.
ಆಲೋಚನೆಯನ್ನು ತಿಳುವಳಿಕೆ ಇಲ್ಲದೆ ಮರೆಮಾಡುವವನಾರು? ಆದದರಿಂದ ನಾನು ಗ್ರಹಿ ಸದೆ ಇದ್ದವುಗಳನ್ನು ನಾನು ತಿಳಿಯದಂಥ, ನನಗೆ ಆಶ್ಚರ್ಯವಾದವುಗಳನ್ನು ಉಚ್ಚರಿಸಿದೆನು.
ಅವರು ನ್ಯಾಯ ಪ್ರಮಾಣದ ಉಪದೇಶಕರಾಗಿರಬೇಕೆಂದಿದ್ದರೂ ತಾವು ಹೇಳುವದಾಗಲೀ ತಾವು ದೃಢವಾಗಿ ಮಾತನಾಡುವ ವಿಷಯವಾಗಲೀ ಇಂಥದ್ದೆಂದು ತಿಳಿಯದವರಾಗಿ ದ್ದಾರೆ.