Home Bibles ☰ Books ಯೋಬ 39:12 · ಕನ್ನಡ ಬೈಬಲ್
ಯೋಬ 39:12 · ಕನ್ನಡ ಬೈಬಲ್

ಅದು ನಿನ್ನ ಬೀಜವನ್ನು ಮನೆಗೆ ತರುವದೆಂದೂ ನಿನ್ನ ಕಣದಲ್ಲಿ ಕೂಡಿಸುವದೆಂದೂ ಅದನ್ನು ನಂಬುವಿಯೋ?

Cross references

ನೆಹೆಮ್ಯ 13:15

ಆ ದಿವಸಗಳಲ್ಲಿ ನಾನು ಯೆಹೂದದೊಳಗೆ ಸಬ್ಬತ್ತುಗಳಲ್ಲಿ ಕೆಲವರು ದ್ರಾಕ್ಷೆ ತುಳಿಯುವದನ್ನೂ ಸಿವುಡುಗಳನ್ನು ತರುವದನ್ನೂ ಕತ್ತೆಗಳ ಮೇಲೆ ಹೇರಿ ಕೊಂಡು ಬರುವದನ್ನೂ ಮತ್ತು ಸಬ್ಬತ್ತುಗಳಲ್ಲಿ ಯೆರೂಸಲೇಮಿಗೆ ದ್ರಾಕ್ಷಾರಸವನ್ನೂ ದ್ರಾಕ್ಷೆ ಹಣ್ಣು ಗಳನ್ನೂ ಅಂಜೂರದ ಹಣ್ಣುಗಳನ್ನೂ ಎಲ್ಲಾ ಹೊರೆ ಗಳನ್ನೂ ತರುವದನ್ನು ನಾನು ನೋಡಿದ್ದರಿಂದ ಮಾರುವ ದಿವಸದಲ್ಲಿ ನಾನು ಸಾಕ್ಷಿಯಾಗಿ ಹೇಳಿದೆನು.

ಸಾಮೇತಿಗಳು 3:16

ಆಕೆಯ ಬಲಗೈಯಲ್ಲಿ ದೀರ್ಘಾಯುಷ್ಯವೂ ಎಡಗೈಯಲ್ಲಿ ಐಶ್ವರ್ಯವೂ ಘನತೆಯೂ ಇವೆ.

ಆಮೋಸ 2:13

ಇಗೋ, ಸಿವುಡು ತುಂಬಿದ ಬಂಡಿ ಒತ್ತುವ ಪ್ರಕಾರ ನಾನು ನಿಮ್ಮನ್ನು ಕೆಳಗೆ ಹಾಕಿ ಒತ್ತುವೆನು.

ಹಗ್ಗಾಯ 2:19

ಬೀಜವು ಇನ್ನು ಕಣಜದಲ್ಲಿ ಉಂಟೋ? ಮತ್ತು ದ್ರಾಕ್ಷೆ, ಅಂಜೂರ, ದಾಳಿಂಬರ, ಎಣ್ಣೆ ಮರಗಳು ಇನ್ನು ಫಲಿಸಲಿಲ್ಲ ವಲ್ಲಾ. ಈ ದಿನವು ಮೊದಲುಗೊಂಡು ನಿಮ್ಮನ್ನು ಆಶೀರ್ವದಿಸುವೆನು.

ಮತ್ತಾಯ 3:2

ನೀವು ಮಾನಸಾಂತರ ಪಡಿರಿ; ಯಾಕಂದರೆ ಪರಲೋಕರಾಜ್ಯವು ಸಮಾಪ ವಾಗಿದೆ ಎಂದು ಹೇಳಿದನು.

ಮತ್ತಾಯ 13:30

ಸುಗ್ಗೀಕಾಲದ ವರೆಗೆ ಎರಡೂ ಜೊತೆಯಲ್ಲಿ ಬೆಳೆಯಲಿ; ಸುಗ್ಗೀಕಾಲದಲ್ಲಿ ನಾನು ಕೊಯ್ಯುವವರಿಗೆ--ಮೊದಲು ಹಣಜಿಯನ್ನು ಕೂಡಿಸಿ ಅದನ್ನು ಸುಡುವದಕ್ಕೆ ಹೊರೆ ಕಟ್ಟಿರಿ; ಆದರೆ ಗೋದಿಯನ್ನು ನನ್ನ ಕಣಜದಲ್ಲಿ ಕೂಡಿಸಿರಿ ಎಂದು ಹೇಳುವೆನು ಅಂದನು.

Interlinear

Choose Theme