Home Bibles ಯೋಬ 4:14 · ಕನ್ನಡ ಬೈಬಲ್
ಯೋಬ 4:14 · ಕನ್ನಡ ಬೈಬಲ್

ಭಯವೂ ನಡುಗೂ ನನ್ನನ್ನು ಹಿಡಿದವು; ನನ್ನ ಎಲ್ಲಾ ಎಲುಬು ಗಳನ್ನು ನಡುಗಿಸಿತು.

Cross references

ಯೋಬ 7:14

ಸ್ವಪ್ನ ಗಳಿಂದ ನನ್ನನ್ನು ಹೆದರಿಸುತ್ತೀ; ದರ್ಶನಗಳಿಂದ ನನ್ನನ್ನು ನಡುಗಿಸುತ್ತೀ.

ಯೋಬ 33:19

ಅವನು ತನ್ನ ಹಾಸಿಗೆಯಲ್ಲಿ ನೋವಿನಿಂದ ಶಿಕ್ಷಿಸ ಲ್ಪಡುತ್ತಾನೆ; ಅವನ ಎಲುಬುಗಳಿಗೆಲ್ಲಾ ಕಠಿಣವಾದ ನೋವು ಉಂಟು.

ಕೀರ್ತನೆಗಳು 119:120

ನಿನ್ನ ಹೆದರಿಕೆಯಿಂದ ನನ್ನ ಶರೀರವು ನಡುಗುತ್ತದೆ. ನಾನು ನಿನ್ನ ತೀರ್ಪುಗಳಿಗೆ ಭಯಪಡುತ್ತೇನೆ.

ಯೆಶಾಯ 6:5

ಆಗ ನಾನು--ಅಯ್ಯೋ, ನಾನು ನಾಶವಾದೆನಲ್ಲಾ! ನಾನು ಹೊಲಸು ತುಟಿಯವನು, ನಾನು ಹೊಲಸು ತುಟಿಯುಳ್ಳವರ ಮಧ್ಯದಲ್ಲಿ ವಾಸಿಸುವವನು; ಆದರೂ ಸೈನ್ಯಗಳ ಕರ್ತನಾದ ಅರಸನನ್ನು ನನ್ನ ಕಣ್ಣುಗಳು ಕಂಡವಲ್ಲಾ ಅಂದೆನು.

ದಾನಿಯೇಲ 10:11

ಆಗ ಆತನು ನನಗೆ ಹೇಳಿದ್ದೇನಂದರೆ--ಓ ದಾನಿ ಯೇಲನೇ, ಅತಿಪ್ರಿಯನಾದ ಮನುಷ್ಯನೇ, ನಾನು ನಿನಗೆ ಹೇಳುವ ಮಾತುಗಳನ್ನು ತಿಳಿದುಕೊಂಡು ಸ್ಥಿರವಾಗಿ ನಿಲ್ಲು. ನಾನು ಈಗ ನಿನ್ನ ಬಳಿಗೆ ಕಳುಹಿಸ ಲ್ಪಟ್ಟಿದ್ದೇನೆ. ಅವನು ಈ ಮಾತುಗಳನ್ನು ಹೇಳಿದ ಮೇಲೆ ನಾನು ನಡುಗುತ್ತಲೇ ನಿಂತೆನು.

ಹಬಕ್ಕೂಕ 3:16

ನಾನು ಕೇಳಿದಾಗ ನನ್ನ ಹೊಟ್ಟೆಯು ತಳಮಳಗೊಂಡಿತು, ಆ ಶಬ್ದಕ್ಕೆ ನನ್ನ ತುಟಿಗಳು ಅದರಿದವು; ಇಕ್ಕಟ್ಟಿನ ದಿನದಲ್ಲಿ ನಾನು ವಿಶ್ರಾಂತಿಯನ್ನು ಹೊಂದುವ ಹಾಗೆ ಕೊಳೆಯುವಿಕೆಯು ನನ್ನ ಎಲುಬುಗಳಲ್ಲಿ ಸೇರಿತು, ನಾನು ನಿಂತ ಹಾಗೆಯೇ ನಡುಗಿದೆನು; ಆತನು ಜನರ ಬಳಿಗೆ ಬರುವಾಗ ತನ್ನ ಸೈನ್ಯಗಳ ಕೂಡ ಅವರ ಮೇಲೆ ದಾಳಿ ಮಾಡುವನು.

ಲೂಕ 1:12

ಜಕರೀ ಯನು ಅವನನ್ನು ನೋಡಿ ಕಳವಳದಿಂದ ಭಯಹಿಡಿ ದವನಾದನು.

ಲೂಕ 1:29

ಆಕೆಯು ಅವನನ್ನು ನೋಡಿ ಅವನ ಮಾತಿಗೆ ಕಳವಳಗೊಂಡು ಇದು ಎಂಥಾತರವಾದ ವಂದನೆ ಎಂದು ತನ್ನ ಮನದಲ್ಲಿ ಯೋಚಿಸುತ್ತಿರುವಾಗ

ಪ್ರಕಟನೆ 1:17

ನಾನು ಆತನನ್ನು ಕಂಡಾಗ ಸತ್ತವನ ಹಾಗೆ ಆತನ ಪಾದಗಳ ಮುಂದೆ ಬಿದ್ದೆನು. ಆತನು ತನ್ನ ಬಲಗೈಯನ್ನು ನನ್ನ ಮೇಲಿಟ್ಟು--ಹೆದರಬೇಡ, ನಾನು ಮೊದಲನೆಯ ವನೂ ಕಡೆಯವನೂ ಆಗಿದ್ದೇನೆ.

Interlinear

Choose Theme