ಧೂಳಿನಲ್ಲಿ ಅಸ್ತಿವಾರ ಇರುವ ಮಣ್ಣಿನ ಮನೆಗಳ ನಿವಾಸಿಗಳು ಎಷ್ಟು ಕಡಿಮೆ? ನುಸಿಯ ಮುಂದೆ ಅವರು ಜಜ್ಜಲ್ಪಡುತ್ತಾರೆ.
Cross references
ಕರ್ತನಾದ ದೇವರು ಭೂಮಿಯ ಮಣ್ಣಿನಿಂದ ಮನುಷ್ಯನನ್ನು ರೂಪಿಸಿ ಅವನ ಮೂಗಿನಲ್ಲಿ ಜೀವಶ್ವಾಸ ವನ್ನು ಊದಿದನು; ಆಗ ಮನುಷ್ಯನು ಜೀವಾತ್ಮ ನಾದನು.
ನೀನು ಮಣ್ಣಿಗೆ ತಿರುಗುವ ವರೆಗೆ ನಿನ್ನ ಹಣೆಯ ಬೆವರನ್ನು ಸುರಿಸಿ ರೊಟ್ಟಿಯನ್ನು ತಿನ್ನುವಿ. ಯಾಕಂದರೆ ನೀನು ಅದ ರೊಳಗಿಂದ ಅಂದರೆ (ಮಣ್ಣಿನೊಳಗಿಂದ) ತೆಗೆಯ ಲ್ಪಟ್ಟೆ; ನೀನು ಮಣ್ಣಾಗಿದ್ದಿ, ಮಣ್ಣಿಗೆ ತಿರುಗಿಕೊಳ್ಳುವಿ ಅಂದನು.
ಆಗ ಅಬ್ರಹಾಮನು--ಇಗೋ, ಮಣ್ಣೂ ಬೂದಿಯೂ ಆಗಿರುವ ನಾನು ಕರ್ತನ ಸಂಗಡ ಮಾತನಾಡುವದಕ್ಕೆ ಮುಂಗೊಂಡಿದ್ದೇನೆ.
ಕುಂಬಾ ರನ ಮಣ್ಣಿನಂತೆ ನನ್ನನ್ನು ರೂಪಿಸಿದ್ದೀ ಎಂದು ಜ್ಞಾಪಕ ಮಾಡಿಕೋ ಎಂದು ಬೇಡಿಕೊಳ್ಳುತ್ತೇನೆ; ಆದಾಗ್ಯೂ ನನ್ನನ್ನು ಧೂಳಿಗೆ ತಿರುಗಿಸುತ್ತಿಯೋ?
ನಿಮ್ಮ ಜ್ಞಾಪಕಗಳು ಬೂದಿಯಂತಿವೆ; ನಿಮ್ಮ ಶರೀರಗಳು ಮಣ್ಣಿನ ಶರೀರಗಳಾಗಿವೆ.
ಅವನು ಕೊಳೆತ ವಸ್ತುವಿನ ಹಾಗೆ, ಹುಳು ತಿಂದ ಬಟ್ಟೆಯ ಹಾಗೆ ಇಲ್ಲದಾಗುವನು.
ಅವನು ಹೂವಿನ ಹಾಗೆ ಅರಳು ತ್ತಾನೆ ಮತ್ತು ಕೊಯ್ಯಲ್ಪಡುತ್ತಾನೆ; ಅವನು ನೆರಳಿನಂತೆ ಓಡಿಹೋಗುತ್ತಾನೆ, ಹಾಗೂ ಮುಂದುವರೆಯುವ ದಿಲ್ಲ.
ಅವರು ಆ ಕಾಲ ದಲ್ಲಿ ಕಡಿಯಲ್ಪಟ್ಟರು; ಅವರ ಅಸ್ತಿವಾರವು ಪ್ರವಾಹ ದಲ್ಲಿ ಕೊರೆದು ಹೋಯಿತು.
ಮನುಷ್ಯನೆಂಬ ಹುಳವೂ ಮನುಷ್ಯನ ಮಗನೆಂಬ ಕ್ರಿಮಿಯೂ ಎಷ್ಟು ಮಾತ್ರದವನು?
ಇಗೋ, ನಾನು ದೇವರ ಮುಂದೆ ನಿನ್ನ ಹಾಗೆಯೇ ಇದ್ದೇನೆ; ಮಣ್ಣಿನಿಂದ ನಾನು ಸಹ ರೂಪಿಸಲ್ಪಟ್ಟಿದ್ದೇನೆ.
ಅಕ್ರಮ ಕ್ಕೋಸ್ಕರ ಗದರಿಕೆಗಳಿಂದ ನೀನು ಮನುಷ್ಯನನ್ನು ಶಿಕ್ಷಿಸಿದರೆ ಅವನ ಸೌಂದರ್ಯವನ್ನು ನುಸಿಯ ಹಾಗೆ ಹಾಳುಮಾಡುತ್ತೀ; ನಿಶ್ಚಯವಾಗಿ ಪ್ರತಿ ಮನುಷ್ಯನು ವ್ಯರ್ಥವಾದವನೇ--ಸೆಲಾ.
ಅವರನ್ನು ಪ್ರವಾಹದಂತೆ ಬಡು ಕೊಂಡು ಹೋಗುತ್ತೀ; ಅವರು ನಿದ್ರೆಯಲ್ಲಿದ್ದಂತೆಯೂ ಬೆಳಿಗ್ಗೆ ಚಿಗುರುವ ಹುಲ್ಲಿನ ಹಾಗೆಯೂ ಇದ್ದಾರೆ.
ಮನುಷ್ಯನ ದಿವಸಗಳೋ ಹುಲ್ಲಿನ ಹಾಗೆ ಅವೆ; ಅವನು ಹೊಲದ ಹೂವಿನ ಹಾಗೆಯೇ ಶೋಭಿಸುತ್ತಾನೆ.
ಅವನ ಉಸಿರು ಹೋಗಲು ಅವನು ಮಣ್ಣಿಗೆ ಹಿಂತಿರುಗುವನು; ಅದೇ ದಿನದಲ್ಲಿ ಅವನ ಸಂಕಲ್ಪ ಗಳೆಲ್ಲಾ ನಾಶವಾಗುತ್ತವೆ.
ಆಮೇಲೆ ಧೂಳು ಅದು ಇದ್ದ ಹಾಗೆಯೇ ಭೂಮಿಗೆ ಹಿಂತಿರುಗುವದು; ಆತ್ಮವು ಅದನ್ನು ಕೊಟ್ಟ ದೇವರ ಬಳಿಗೆ ಹಿಂತಿರುಗು ವದು.
ಬಲಾಧಿಕ್ಯವು ನಮ್ಮದಲ್ಲ, ಅದು ದೇವರದಾಗಿ ರುವ ಹಾಗೆ ಈ ನಿಕ್ಷೇಪವು ಮಣ್ಣಿನ ಘಟಗಳಲ್ಲಿ ನಮಗುಂಟು.
ಈ ಗುಡಾರವಾಗಿರುವ ಮಣ್ಣಿನ ನಮ್ಮ ಮನೆಯು (ಶರೀರವು) ತೆಗೆದುಹಾಕಲ್ಪ ಟ್ಟರೆ ಕೈಗಳಿಂದ ಮಾಡದಿರುವಂಥಾದ್ದೂ ಪರಲೋಕ ಗಳಲ್ಲಿ ನಿತ್ಯವಾಗಿರುವಂಥಾದ್ದೂ ಆಗಿರುವ ದೇವರ ಕಟ್ಟಡವು ನಮಗಿದೆಯೆಂದು ನಾವು ಬಲ್ಲೆವು.
ನರಜಾತಿಯೆಲ್ಲಾ ಹುಲ್ಲಿನ ಹಾಗಿದೆ. ಮನುಷ್ಯನ ಪ್ರಭಾವವೆಲ್ಲಾ ಹುಲ್ಲಿನ ಹೂವಿನಂತಿದೆ. ಹುಲ್ಲು ಒಣಗಿ ಹೋಗುವದು, ಅದರ ಹೂವು ಉದುರಿ ಹೋಗು ವದು;ಕರ್ತನ ಮಾತೋ ಸದಾಕಾಲವೂ ಇರು ವದು. ಅದು ಯಾವದಂದರೆ ನಿಮಗೆ ಸಾರಲ್ಪಟ್ಟ ಸುವಾರ್ತಾವಾಕ್ಯವೇ.