Home Bibles ಯೋಬ 4:3 · ಕನ್ನಡ ಬೈಬಲ್
ಯೋಬ 4:3 · ಕನ್ನಡ ಬೈಬಲ್

ಇಗೋ, ಅನೇಕರನ್ನು ಶಿಕ್ಷಿಸಿದಿ; ಬಲಹೀನವಾದ ಕೈಗಳನ್ನು ಬಲ ಪಡಿಸಿದಿ.

Cross references

ಆದಿಕಾಂಡ 18:19

ಕರ್ತನು ಅಬ್ರಹಾಮ ನಿಗೆ ಹೇಳಿದ್ದು ನೆರವೇರುವಂತೆ ಅವನು ತನ್ನ ಮಕ್ಕಳಿಗೂ ತರುವಾಯ ಅವನ ಮನೆಯವರಿಗೂ ಆತನ ಮಾರ್ಗವನ್ನು ಕೈಕೊಂಡು ನೀತಿನ್ಯಾಯಗಳನ್ನು ಅನುಸರಿಸಬೇಕೆಂದು ಅಪ್ಪಣೆಕೊಡುವನು ಎಂದು ನನಗೆ ತಿಳಿದದೆ ಎಂದು ಅಂದುಕೊಂಡನು.

ದ್ವಿತೀಯೋಪದೇಶಕಾಂಡ 3:28

ಆದರೆ ಯೆಹೋಶು ವನಿಗೆ ಆಜ್ಞಾಪಿಸಿ ಅವನಿಗೆ ದೃಢಮಾಡಿ ಬಲಪಡಿಸು; ಅವನು ಈ ಜನರ ಮುಂದೆ ದಾಟಿಹೋಗಿ ನೀನು ನೋಡುವ ದೇಶವನ್ನು ಅವರಿಗೆ ಸ್ವಾಸ್ತ್ಯ ವಾಗಿ ಹೊಂದುವಂತೆ ಮಾಡುವನು ಎಂದು ಹೇಳಿದನು.ಆಗ ನಾವು ಬೇತ್‌ಪೆಗೋರಿಗೆ ಎದುರಾಗಿರುವ ತಗ್ಗಿನಲ್ಲಿ ವಾಸವಾಗಿದ್ದೆವು.

ಎಜ್ರಾ 6:22

ಇಸ್ರಾಯೇಲ್‌ ದೇವ ರಾಗಿರುವ ದೇವರ ಆಲಯದ ಕಾರ್ಯದಲ್ಲಿ ಅವರ ಕೈಗಳನ್ನು ಬಲಪಡಿಸುವದಕ್ಕೆ ಅಶ್ಶೂರ್‌ ದೇಶದ ಅರ ಸನ ಹೃದಯವನ್ನು ಅವರ ಕಡೆಗೆ ತಿರುಗಿಸಿದ್ದರಿಂದ ಕರ್ತನು ಅವರನ್ನು ಸಂತೋಷಪಡಿಸಿದನು.

ಯೋಬ 16:5

ನನ್ನ ಬಾಯಿಂದ ನಿಮ್ಮನ್ನು ಬಲ ಪಡಿಸುವೆನು. ನನ್ನ ತುಟಿಗಳ ಆದರಣೆ ನಿಮಗೆ ಉಪ ಶಮನ ಮಾಡುವದು.

ಸಾಮೇತಿಗಳು 10:21

ನೀತಿವಂತರ ತುಟಿಗಳು ಅನೇಕರನ್ನು ಪೋಷಿಸುತ್ತವೆ. ಜ್ಞಾನದ ಕೊರತೆಯಿಂದ ಅವಿವೇಕಿಗಳು ಸಾಯುತ್ತಾರೆ.

ಸಾಮೇತಿಗಳು 15:7

ಜ್ಞಾನಿಗಳ ತುಟಿಗಳು ತಿಳುವ ಳಿಕೆಯನ್ನು ಚೆಲ್ಲುತ್ತವೆ; ಬುದ್ಧಿಹೀನರ ಹೃದಯವು ಹಾಗೆ ಮಾಡುವದೇ ಇಲ್ಲ.

ಸಾಮೇತಿಗಳು 16:21

ಹೃದಯದಲ್ಲಿ ಜ್ಞಾನ ವಂತರು ಜಾಣರೆಂದು ಕರೆಯಲ್ಪಡುವರು; ತುಟಿಗಳ ಮಧುರವು ಜ್ಞಾನವನ್ನು ಹೆಚ್ಚಿಸುತ್ತದೆ.

ಯೆಶಾಯ 35:3

ನೀವು ಬಲಹೀನವಾದ ಕೈಗಳನ್ನು ಬಲಪಡಿಸಿರಿ ನಿತ್ರಾಣವಾದ ಮೊಣಕಾಲುಗಳನ್ನು ದೃಢಪಡಿಸಿರಿ.

ಯೆಶಾಯ 50:4

ಬಳಲಿ ಹೋದವನನ್ನು ಹೇಗೆ ಮಾತಿನಿಂದ ಆದರಿಸುವಿ ಎಂಬದನ್ನು ನಾನು ತಿಳಿಯುವ ಹಾಗೆ ಕರ್ತನಾದ ದೇವರು ಶಿಕ್ಷಿತ ನಾಲಿಗೆಯನ್ನು ನನಗೆ ಕೊಟ್ಟಿದ್ದಾನೆ. ಆತನು ಹೊತ್ತಾರೆಯಿಂದ ಹೊತ್ತಾರೆಗೆ ನನ್ನನ್ನು ಎಚ್ಚರಿಸಿ ಸುಶಿಕ್ಷಿತರಂತೆ ನಾನು ಕೇಳುವ ಹಾಗೆ ನನ್ನ ಕಿವಿಯನ್ನು ಆತನು ಜಾಗರೂಕಗೊಳಿಸುತ್ತಾನೆ.

ಯೆಹೆಜ್ಕೇಲ 13:22

ನಾನು ಯಾವನನ್ನು ದುಃಖಪಡಿಸಲಿಲ್ಲವೋ ಆ ನೀತಿವಂತನ ಹೃದಯಕ್ಕೆ ನೀವು ಸುಳ್ಳಾಡಿ ದುಃಖಪಡಿಸಿ ದ್ದೀರಿ; ದುಷ್ಟನು ತನ್ನ ದುರ್ಮಾರ್ಗವನ್ನು ಬಿಟ್ಟು ಪ್ರಾಣವನ್ನು ಉಳಿಸಿಕೊಳ್ಳದಂತೆ ನೀವು ಅವನ ಕೈಗಳನ್ನು ಬಲಪಡಿಸಿದ್ದೀರಿ.ಆದದರಿಂದ ನೀವು ಇನ್ನು ಮೇಲೆ ವ್ಯರ್ಥವಾದದ್ದನ್ನು ಕಾಣುವದಿಲ್ಲ; ಭವಿಷ್ಯವನ್ನೂ ಕಾಣು ವದಿಲ್ಲ; ಯಾಕಂದರೆ ನಾನು ನನ್ನ ಜನರನ್ನು ನಿಮ್ಮ ಕೈಯೊಳಗಿಂದ ತಪ್ಪಿಸುವೆನು; ನಾನೇ ಕರ್ತನೆಂದು ನೀವು ತಿಳಿದುಕೊಳ್ಳುವಿರಿ.

ಲೂಕ 22:32

ಆದರೆ ನಿನ್ನ ನಂಬಿಕೆಯು ಬಿದ್ದುಹೋಗದಂತೆ ನಾನು ನಿನಗೋಸ್ಕರ ಬೇಡಿಕೊಂಡಿದ್ದೇನೆ; ನೀನು ತಿರುಗಿಕೊಂಡ ಮೇಲೆ ನಿನ್ನ ಸಹೋದರರನ್ನು ಬಲಪಡಿಸು ಎಂದು ಹೇಳಿದನು.

ಲೂಕ 22:43

ಆಗ ಪರಲೋಕದಿಂದ ಒಬ್ಬ ದೂತನು ಆತನಿಗೆ ಪ್ರತ್ಯಕ್ಷನಾಗಿ ಆತನನ್ನು ಬಲಪಡಿಸುತ್ತಾ ಇದ್ದನು.

ಎಫೆಸದವರಿಗೆ 4:29

ನಿಮ್ಮ ಬಾಯೊಳಗಿಂದ ಯಾವ ಕೆಟ್ಟ ಮಾತೂ ಹೊರಡಬಾರದು; ಆದರೆ ಭಕ್ತಿಯನ್ನು ವೃದ್ಧಿ ಮಾಡುವಂಥ ಒಳ್ಳೆಮಾತು ಇದ್ದರೆ ಕೇಳುವವರ ಹಿತ ಕ್ಕಾಗಿ ಅದನ್ನು ಆಡಿರಿ.

ಕೊಲೊಸ್ಸೆಯವರಿಗೆ 4:6

ನಿಮ್ಮ ಸಂಭಾಷಣೆ ಯಾವಾ ಗಲೂ ಕೃಪೆಯುಳ್ಳದ್ದಾಗಿಯೂ ಉಪ್ಪಿನಿಂದ ರುಚಿಯಾದ ದ್ದಾಗಿಯೂ ಇರಲಿ; ಹೀಗೆ ನೀವು ಯಾರಾರಿಗೆ ಯಾವಾವ ರೀತಿಯಲ್ಲಿ ಉತ್ತರ ಹೇಳಬೇಕೋ ಅದನ್ನು ತಿಳುಕೊಳ್ಳುವಿರಿ.

ಹೆಬ್ರಿಯರಿಗೆ 12:12

ಹೀಗಿರುವದ ರಿಂದ ಜೋಲು ಬಿದ್ದ ಕೈಗಳನ್ನೂ ಬಲಹೀನವಾದ ಮೊಣಕಾಲುಗಳನ್ನೂ ನೆಟ್ಟಗೆ ಮಾಡಿರಿ.

Interlinear

Choose Theme