Home Bibles ☰ Books ಯೋಬ 40:4 · ಕನ್ನಡ ಬೈಬಲ್
ಯೋಬ 40:4 · ಕನ್ನಡ ಬೈಬಲ್

ಇಗೋ, ನೀಚನಾಗಿದ್ದೇನೆ; ನಿನಗೆ ಏನು ಪ್ರತ್ಯುತ್ತರ ಕೊಡಲಿ? ನನ್ನ ಕೈಯಿಂದ ಬಾಯಿ ಮುಚ್ಚಿಕೊಳ್ಳುತ್ತೇನೆ.

Cross references

ಆದಿಕಾಂಡ 18:27

ಆಗ ಅಬ್ರಹಾಮನು--ಇಗೋ, ಮಣ್ಣೂ ಬೂದಿಯೂ ಆಗಿರುವ ನಾನು ಕರ್ತನ ಸಂಗಡ ಮಾತನಾಡುವದಕ್ಕೆ ಮುಂಗೊಂಡಿದ್ದೇನೆ.

ಆದಿಕಾಂಡ 32:10

ನೀನು ನಿನ್ನ ದಾಸನಿಗೆ ತೋರಿಸಿದ ಎಲ್ಲಾ ಕರುಣೆಗಳಿಗೂ ಎಲ್ಲಾ ಸತ್ಯಕ್ಕೂ ಅಯೋಗ್ಯನಾಗಿದ್ದೇನೆ. ಯಾಕಂದರೆ ನಾನು ಮೊದಲು ಈ ಯೊರ್ದನ್‌ ಹೊಳೆಯನ್ನು ದಾಟಿದಾಗ ನನಗೆ ಕೋಲು ಮಾತ್ರವೇ ಇತ್ತು; ಈಗ ಎರಡು ಗುಂಪುಗಳುಳ್ಳವನಾದೆನು.

ಲೇವ್ಯಕಾಂಡ 13:12

ಕುಷ್ಠವು ಒಡೆದು ಚರ್ಮದ ಹೊರಗೆ ಹರಡಿ ಕೊಂಡಿದ್ದರೆ ಮತ್ತು ಚರ್ಮವನ್ನೆಲ್ಲಾ ಹರಡಿಕೊಂಡು ತಲೆಯಿಂದ ಅವನ ಪಾದದ ವರೆಗೂ ಹರಡಿರುವದನ್ನು ಯಾಜಕನು ಎಲ್ಲಿಯಾದರೂ ನೋಡಿದರೆ

ನ್ಯಾಯಾಧಿಪತಿಗಳು 18:19

ಅವರು ಅವನಿಗೆನೀನು ಸುಮ್ಮನೆ ಇರು; ನಿನ್ನ ಬಾಯಿಯ ಮೇಲೆ ನಿನ್ನ ಕೈಹಾಕಿಕೊಂಡು ನಮ್ಮ ಸಂಗಡ ಬಂದು ನಮಗೆ ತಂದೆಯಾಗಿಯೂ ಯಾಜಕನಾಗಿಯೂ ಇರು. ನೀನು ಒಬ್ಬನ ಮನೆಗೆ ಯಾಜಕನಾಗಿರುವದು ಒಳ್ಳೇದೋ ಅಥವಾ ಇಸ್ರಾಯೇಲಿನಲ್ಲಿ ಒಂದು ಗೋತ್ರಕ್ಕೂ ಒಂದು ಕುಟುಂಬಕ್ಕೂ ಯಾಜಕನಾಗಿರುವದು ಒಳ್ಳೇದೋ ಅಂದರು.

2 ಸಮುವೇಲ 24:10

ಆದರೆ ದಾವೀದನು ಜನರನ್ನು ಲೆಕ್ಕಿಸಿದ ತರು ವಾಯ ಅವನು ತನ್ನ ಹೃದಯದಲ್ಲಿ ತಿವಿಯಲ್ಪಟ್ಟನು. ಆದದರಿಂದ ದಾವೀದನು ಕರ್ತನಿಗೆ--ನಾನು ಮಾಡಿ ದ್ದರಲ್ಲಿ ಮಹಾ ಪಾಪಮಾಡಿದೆನು. ಕರ್ತನೇ, ದಯ ಮಾಡಿ ನಿನ್ನ ಸೇವಕನ ಅಕ್ರಮವನ್ನು ಪರಿಹರಿಸು; ನಾನು ಬಹಳ ಹುಚ್ಚುತನ ಮಾಡಿದೆನು ಅಂದನು.

1 ಅರಸುಗಳು 19:4

ಆದರೆ ಅವನು ಅರಣ್ಯದಲ್ಲಿ ಒಂದು ದಿವಸದ ಪ್ರಯಾಣ ಮಾಡಿ ಷಿಟ್ಟೀಮ್‌ ಮರದ ಕೆಳಗೆ ಕುಳಿತು ತಾನು ಸಾಯಬೇಕೆಂದು ಬೇಡಿ ಕೊಂಡು--ಕರ್ತನೇ, ಈಗ ಸಾಕು; ನನ್ನ ಪ್ರಾಣವನ್ನು ತೆಗೆದುಕೋ. ಯಾಕಂದರೆ ನನ್ನ ಪಿತೃಗಳಿಗಿಂತ ನಾನು ಉತ್ತಮನಲ್ಲ ಅಂದನು.

ಎಜ್ರಾ 9:6

ನನ್ನ ದೇವರೇ, ನಾನು ನನ್ನ ಮುಖವನ್ನು ನಿನ್ನ ಮುಂದೆ ಎತ್ತುವಹಾಗೆ ಲಜ್ಜೆಯಿಂದ ನಾಚಿಕೆಪಡು ತ್ತೇನೆ. ನನ್ನ ದೇವರೇ, ನಮ್ಮ ಅಕ್ರಮಗಳು ನಮ್ಮ ತಲೆಯ ಮೇಲೆ ಹೆಚ್ಚಿದವು; ನಮ್ಮ ಅಪರಾಧವು ಆಕಾಶದ ಪರ್ಯಂತರ ಬೆಳೆಯಿತು.

ಎಜ್ರಾ 9:15

ಇಸ್ರಾಯೇಲ್‌ ದೇವ ರಾಗಿರುವ ಕರ್ತನೇ, ನೀನು ನೀತಿವಂತನಾಗಿದ್ದೀ; ಇಂದಿನ ಪ್ರಕಾರ ನಾವು ತಪ್ಪಿಸಿಕೊಂಡವರಾಗಿ ಉಳಿ ದಿದ್ದೇವೆ. ಇಗೋ, ನಾವು ನಿನ್ನ ಮುಂದೆ ನಮ್ಮ ಅಪರಾಧಗಳಲ್ಲಿದ್ದೇವೆ. ಇದರ ನಿಮಿತ್ತವಾಗಿ ನಿನ್ನ ಮುಂದೆ ನಿಲ್ಲಲಾರದವರಾಗಿದ್ದೇವೆ.

ನೆಹೆಮ್ಯ 9:33

ಆದರೆ ನೀನು ನಮ್ಮ ಮೇಲೆ ಬರಮಾಡಿದ ಎಲ್ಲಾದರಲ್ಲಿ ನೀತಿಪರನಾಗಿದ್ದಿ. ಯಾಕಂದರೆ ನೀನು ಮಾಡಿದ್ದು ಸತ್ಯವಾದದ್ದು; ಆದರೆ ನಾವು ದುಷ್ಟರಾಗಿ ನಡೆದೆವು.

ಯೋಬ 9:31

ನನ್ನನ್ನು ಕುಣಿಯಲ್ಲಿ ಮುಣುಗಿಸಿ ಬಿಡುವಿ; ನನ್ನ ಸ್ವಂತ ವಸ್ತ್ರಗಳು ನನ್ನನ್ನು ಹೇಸಿಕೊಳ್ಳು ವವು.

ಯೋಬ 16:21

ಒಬ್ಬನು ತನ್ನ ನೆರೆಯವನಿಗೋಸ್ಕರ ವ್ಯಾಜ್ಯವಾಡುವಂತೆ ಮನುಷ್ಯನಿಗೋಸ್ಕರ ದೇವರ ಮುಂದೆ ವ್ಯಾಜ್ಯವಾಡುತ್ತಿದ್ದರೆ ಎಷ್ಟೋ ಒಳ್ಳೇದು.ಕೆಲವು ವರುಷಗಳು ಮುಗಿದಾಗ ನಾನು ತಿರುಗಿ ಬಾರದ ದಾರಿಹಿಡಿದು ಹೋಗುತ್ತೇನೆ.

ಯೋಬ 21:5

ನನ್ನನ್ನು ಗಮನಿಸಿ ಆಶ್ಚರ್ಯಪಡಿರಿ; ಬಾಯಿಯ ಮೇಲೆ ಕೈ ಇಟ್ಟುಕೊಳ್ಳಿರಿ.

ಯೋಬ 23:4

ನ್ಯಾಯವನ್ನು ಆತನ ಮುಂದೆ ಸಿದ್ಧಮಾಡುವೆನು; ನನ್ನ ಬಾಯನ್ನು ಪ್ರತಿವಾದಗಳಿಂದ ತುಂಬಿಸುವೆನು.

Interlinear

Choose Theme