ನಾನು ತಿರುಗಿ ಕೊಡುವ ಹಾಗೆ ಮೊದಲು ನನಗೆ ಕೊಟ್ಟವನಾರು? ಆಕಾಶದ ಕೆಳಗೆ ಇರುವಂಥದೆಲ್ಲಾ ನನ್ನದೇ.
Cross references
ಆದದರಿಂದ ಈಗ ನೀವು ನನ್ನ ಮಾತನ್ನು ಕೇಳಿ ನನ್ನ ಒಡಂಬಡಿಕೆಯನ್ನು ಕಾಪಾಡಿ ದರೆ, ಸಮಸ್ತ ಜನರಲ್ಲಿ ನೀವು ನನ್ನ ಅಸಮಾನ್ಯವಾದ ಸಂಪತ್ತಾಗಿರುವಿರಿ; ಭೂಮಿಯೆಲ್ಲಾ ನನ್ನದೇ.
ಇಗೋ, ಆಕಾಶವೂ ಆಕಾಶದಾಕಾಶವೂ ಭೂಮಿಯೂ ಅದರಲ್ಲಿ ರುವಂಥದ್ದೆಲ್ಲವೂ ನಿನ್ನ ದೇವರಾಗಿರುವ ಕರ್ತನವು ಗಳೇ.
ಕರ್ತನೇ, ದೊಡ್ಡಸ್ತಿಕೆಯೂ ಪರಾಕ್ರಮವೂ ಸೌಂದರ್ಯವೂ ಜಯವೂ ಮಹಿಮೆಯೂ ನಿನ್ನದೇ; ಆಕಾಶಗಳಲ್ಲಿಯೂ ಭೂಮಿಯಲ್ಲಿಯೂ ಇರುವದೆಲ್ಲಾ ನಿನ್ನದೇ. ಕರ್ತನೇ, ರಾಜ್ಯವು ನಿನ್ನದು; ನೀನು ಸಮಸ್ತಕ್ಕೂ ತಲೆಯಾಗಿ ಉನ್ನತವಾಗಿದ್ದೀ. ಐಶ್ವರ್ಯವೂ ಘನವೂ ನಿನ್ನ ಬಳಿ ಯಿಂದ ಬರುತ್ತದೆ.
ಮನುಷ್ಯನು ದೇವರಿಗೆ ಪ್ರಯೋಜನಕರವಾಗಿರುವನೋ? ಬುದ್ಧಿ ವಂತನು ಪ್ರಯೋಜನಕರವಾಗಿರುವದು ತನಗೆ ಸರಿಯೋ?
ನೀನು ನೀತಿವಂತನಾಗಿ ದ್ದರೆ ಆತನಿಗೇನು ಕೊಡುವಿ? ಇಲ್ಲವೆ ಆತನು ನಿನ್ನ ಕೈಯಿಂದ ಏನು ತೆಗೆದುಕೊಳ್ಳುವನು?
ಒಳ್ಳೇತನದ ಆಶೀರ್ವಾದಗಳೊಂದಿಗೆ ಅವನನ್ನು ಎದುರುಗೊಂಡು ಅಪರಂಜಿಯ ಕಿರೀಟವನ್ನು ಅವನ ತಲೆಗೆ ಇಡುತ್ತೀ.
ಭೂಮಿಯೂ ಅದರ ಸಮಸ್ತವೂ ಭೂಲೋಕವೂ ಅದರಲ್ಲಿ ವಾಸಿಸುವವುಗಳೂ ಕರ್ತನವುಗಳು.
ನಾನು ಹಸಿದಿದ್ದರೆ ನಿನಗೆ ಹೇಳೆನು; ಭೂಲೋಕವೂ ಅದರ ಪರಿಪೂರ್ಣತೆಯೂ ನನ್ನವೇ.
ಆಕಾಶಗಳು ಕರ್ತನವುಗಳೇ. ಆತನು ಭೂಮಿ ಯನ್ನು ನರಪುತ್ರರಿಗೆ ಕೊಟ್ಟಿದ್ದಾನೆ.
ಇಲ್ಲವೆ ಮೊದಲು ಆತನಿಗೆ ಕೊಟ್ಟು ಪ್ರತಿಫಲವನ್ನು ತೆಗೆದುಕೊಳ್ಳುವವನು ಯಾರು?ಸಮಸ್ತವು ಆತನಿಂದಲೂ ಆತನ ಮುಖಾಂತರವೂ ಆತನಿಗಾಗಿಯೂ ಇರುತ್ತದೆ; ಆತನಿಗೆ ಸದಾಕಾಲವೂ ಮಹಿಮೆಯಾಗಲಿ. ಆಮೆನ್.
ಭೂಮಿಯೂ ಅದರಲ್ಲಿರುವ ಸಮಸ್ತವೂ ಕರ್ತನದಾಗಿದೆಯಲ್ಲವೇ?
ಆದರೆ ಒಬ್ಬನು ನಿಮಗೆ--ಇದು ವಿಗ್ರಹಕ್ಕೆ ಬಲಿಕೊಟ್ಟದ್ದು ಎಂದು ಹೇಳಿದರೆ ಈ ವಿಷಯವನ್ನು ತಿಳಿಸಿದವನ ನಿಮಿತ್ತ ವಾಗಿಯೂ ಮನಸ್ಸಾಕ್ಷಿಯ ನಿಮಿತ್ತವಾಗಿಯೂ ತಿನ್ನ ಬೇಡಿರಿ; ಭೂಮಿಯೂ ಅದರಲ್ಲಿರುವ ಸಮಸ್ತವೂ ಕರ್ತನದಾಗಿದೆಯಲ್ಲವೇ?