Home Bibles ಯೋಬ 41:4 · ಕನ್ನಡ ಬೈಬಲ್
ಯೋಬ 41:4 · ಕನ್ನಡ ಬೈಬಲ್

ನಿನ್ನ ಸಂಗಡ ಒಡಂಬಡಿಕೆ ಮಾಡುವದೋ? ಅದನ್ನು ಎಂದೆಂದಿಗೂ ದಾಸನಾಗಿ ತಕ್ಕೊಳ್ಳುವಿಯೋ?

Cross references

ಆದಿಕಾಂಡ 1:28

ಇದಲ್ಲದೆ ದೇವರು ಅವರನ್ನು ಆಶೀರ್ವದಿಸಿದನು. ದೇವರು--ಅಭಿವೃದ್ಧಿಯಾಗಿ ಹೆಚ್ಚಿ ಭೂಮಿಯನ್ನು ತುಂಬಿಕೊಂಡು ಅದನ್ನು ವಶಮಾಡಿ ಕೊಳ್ಳಿರಿ; ಸಮುದ್ರದ ವಿಾನುಗಳ ಮೇಲೆಯೂ ಆಕಾಶದ ಪಕ್ಷಿಗಳ ಮೇಲೆಯೂ ಭೂಮಿಯ ಮೇಲೆ ಚಲಿಸುವ ಪ್ರತಿಯೊಂದು ಜೀವಿಯ ಮೇಲೆಯೂ ದೊರೆತನಮಾಡಿರಿ ಎಂದು ಅವರಿಗೆ ಹೇಳಿದನು.

ನಿರ್ಗಮಕಾಂಡ 21:6

ಅವನ ಯಜಮಾನನು ಅವನನ್ನು ನ್ಯಾಯಾಧೀಶರ ಬಳಿಗೆ ಕರಕೊಂಡು ಬಂದು ಬಾಗಲಿನ ಬಳಿಗಾದರೂ ಅದರ ಕಂಬದ ಬಳಿಗಾದರೂ ಬರಮಾಡಿ ಅವನ ಯಜಮಾ ನನು ಅವನ ಕಿವಿಯನ್ನು ಸಲಾಕಿಯಿಂದ ಚುಚ್ಚಬೇಕು. ಆಗ ಅವನು ಸದಾಕಾಲಕ್ಕೂ ಅವನ ಸೇವೆಮಾಡಬೇಕು.

ದ್ವಿತೀಯೋಪದೇಶಕಾಂಡ 15:17

ನೀನು ದಬ್ಬಳ ವನ್ನು ತೆಗೆದುಕೊಂಡು ಅವನ ಕಿವಿಯನ್ನು ಬಾಗಲಿಗೆ ತಗಲಿಸಿ ಚುಚ್ಚಬೇಕು. ಆಗ ಅವನು ನಿತ್ಯವಾಗಿ ನಿನ್ನ ದಾಸನಾಗಿರುವನು; ನಿನ್ನ ದಾಸಿಗೂ ಹಾಗೆಯೇ ಮಾಡಬೇಕು.

1 ಅರಸುಗಳು 20:31

ಆಗ ಅವನ ಸೇವಕರು ಅವನಿಗೆ -- ಇಗೋ, ಇಸ್ರಾಯೇಲಿನ ಮನೆಯ ಅರಸುಗಳು ಕರುಣೆಯುಳ್ಳವರೆಂದು ನಾವು ಕೇಳಿದ್ದೇವೆ; ನಾವು ಗೋಣಿಯನ್ನು ನಡುವಿನಲ್ಲಿ ಕಟ್ಟಿ ಕೊಂಡು ಹಗ್ಗಗಳನ್ನು ನಮ್ಮ ತಲೆಗಳಲ್ಲಿ ಸುತ್ತಿಕೊಂಡು ಇಸ್ರಾಯೇಲಿನ ಅರಸನ ಬಳಿಗೆ ಹೋಗೋಣ; ಒಂದು ವೇಳೆ ಅವನು ನಿನ್ನ ಪ್ರಾಣವನ್ನು ರಕ್ಷಿಸುವನು ಅಂದರು.

ಕೀರ್ತನೆಗಳು 8:5

ಅವನನ್ನು ದೂತರಿಗಿಂತ ಸ್ವಲ್ಪಕಡಿಮೆ ಮಾಡಿ ಪ್ರಭಾವವನ್ನೂ ಘನವನ್ನೂ ಅವನಿಗೆ ಕಿರೀಟವಾಗಿ ಇಟ್ಟಿದ್ದೀ.

Interlinear

Choose Theme