ಕಿವಿಯಿಂದ ನಿನ್ನನ್ನು ಕುರಿತು ಕೇಳಿದ್ದೆನು; ಈಗ ನನ್ನ ಕಣ್ಣು ನಿನ್ನನ್ನು ನೋಡಿತು.
Cross references
ಆತನು--ನನ್ನ ಮಾತುಗಳನ್ನು ಈಗ ಕೇಳಿರಿ--ನಿಮ್ಮಲ್ಲಿ ಒಬ್ಬ ಪ್ರವಾದಿ ಇದ್ದರೆ ಕರ್ತನಾದ ನಾನು ದರ್ಶನದಲ್ಲಿ ಅವನಿಗೆ ತಿಳಿಯಪಡಿಸುವೆನು, ಸ್ವಪ್ನದಲ್ಲಿ ಅವನ ಸಂಗಡ ಮಾತನಾಡುವೆನು.
ಒಂದು ಮಾತು ನನಗೆ ಗುಪ್ತವಾಗಿ ಬಂದಿತು. ಅದರಿಂದ ಸ್ವಲ್ಪ ಮಾತ್ರ ನನ್ನ ಕಿವಿಗೆ ಬಿದ್ದಿತು.
ಇಗೋ, ನಾನು ಮುಂದೆ ನಡೆದರೆ ಆತನು ಅಲ್ಲಿ ಇರುವದಿಲ್ಲ; ಹಿಂತಿರುಗಿದರೆ ಆತನನ್ನು ಗ್ರಹಿಸುವದಿಲ್ಲ.
ಇಗೋ, ಇವು ಆತನ ಮಾರ್ಗಗಳ ಭಾಗಗಳು; ಆತನನ್ನು ಕುರಿತು ಸ್ವಲ್ಪ ಭಾಗ ಮಾತ್ರ ಕೇಳಿದ್ದೇವೆ; ಆದರೆ ಆತನ ಪರಾಕ್ರಮದ ಗುಡುಗನ್ನು ಯಾವನು ಗ್ರಹಿಸಿಕೊಳ್ಳು ವನು ಎಂಬದು.
ನಾಶಸ್ಥಾನವೂ ಮರಣವೂ --ಅದರ ಸುದ್ದಿಯನ್ನು ನಮ್ಮ ಕಿವಿಗಳಿಂದ ಕೇಳಿದ್ದೇವೆ ಅನ್ನುತ್ತವೆ.
ಆತನು ಮನುಷ್ಯರ ಕಿವಿಗಳನ್ನು ತೆರೆದು ಶಿಕ್ಷಣದ ಮಾತು ಗಳನ್ನು ಅವರಿಗೆ ಮುದ್ರೆಹಾಕುತ್ತಾನೆ.
ಅರಸನಾದ ಉಜ್ಜೀಯನು ಮರಣ ಹೊಂದಿದ ವರುಷದಲ್ಲಿ ಕರ್ತನು ಉನ್ನ ತೋನ್ನತವಾಗಿ ಸಿಂಹಾಸನಾರೂಢನಾಗಿರುವದನ್ನು ಕಂಡೆನು. ಆತನ ವಸ್ತ್ರದ ನೆರಿಗೆಯು ಮಂದಿರದಲ್ಲೆಲ್ಲಾ ಹರಡಿತ್ತು.
ಆಗ ನಾನು--ಅಯ್ಯೋ, ನಾನು ನಾಶವಾದೆನಲ್ಲಾ! ನಾನು ಹೊಲಸು ತುಟಿಯವನು, ನಾನು ಹೊಲಸು ತುಟಿಯುಳ್ಳವರ ಮಧ್ಯದಲ್ಲಿ ವಾಸಿಸುವವನು; ಆದರೂ ಸೈನ್ಯಗಳ ಕರ್ತನಾದ ಅರಸನನ್ನು ನನ್ನ ಕಣ್ಣುಗಳು ಕಂಡವಲ್ಲಾ ಅಂದೆನು.
ಯಾವನೂ ಯಾವ ಕಾಲದಲ್ಲೂ ದೇವರನ್ನು ಕಂಡಿಲ್ಲ. ತಂದೆಯ ಎದೆಯಲ್ಲಿರುವ ಆ ಒಬ್ಬನೇ ಮಗ ನಾಗಿರುವಾತನು ಆತನನ್ನು ತಿಳಿಯಪಡಿಸಿದ್ದಾನೆ.
ಯೆಶಾಯನು ಆತನ ಮಹಿಮೆಯನ್ನು ನೋಡಿದ್ದರಿಂದ ಆತನ ವಿಷಯವಾಗಿ ಇವುಗಳನ್ನು ಹೇಳಿದನು.
ನನ್ನನ್ನು ನೋಡುವವನು ನನ್ನನ್ನು ಕಳುಹಿಸಿಕೊಟ್ಟಾತನನ್ನೇ ನೋಡುತ್ತಾನೆ.
ಆದರೆ ಅವನು ಪವಿತ್ರಾತ್ಮಭರಿತನಾಗಿ ಪರಲೋಕ ದೊಳಗೆ ದೃಷ್ಟಿಸಿ ನೋಡಿ ದೇವರ ಪ್ರಭಾವವನ್ನೂ ದೇವರ ಬಲಗಡೆಯಲ್ಲಿ ನಿಂತಿದ್ದ ಯೇಸುವನ್ನೂ ಕಂಡು--
ಕೇಳುವದರಿಂದ ನಂಬಿಕೆಯುಂಟಾಗುತ್ತದೆ. ದೇವರ ವಾಕ್ಯವನ್ನು ಕೇಳುವದ ರಿಂದಲೇ.
ನಮ್ಮ ಕರ್ತನಾದ ಯೇಸು ಕ್ರಿಸ್ತನ ದೇವರೂ ಪ್ರಭಾವಪೂರ್ಣನಾದ ತಂದೆಯೂ ಆಗಿರುವಾತನು ತನ್ನ ವಿಷಯವಾದ ತಿಳುವಳಿಕೆಗನುಸಾರವಾಗಿ ಜ್ಞಾನ ಪ್ರಕಟನೆಗಳ ಆತ್ಮ ವನ್ನು ನಿಮಗೆ ಅನುಗ್ರಹಿಸುವಂತೆಯೂ