Home Bibles ☰ Books ಯೋಬ 5:24 · ಕನ್ನಡ ಬೈಬಲ್
ಯೋಬ 5:24 · ಕನ್ನಡ ಬೈಬಲ್

ನಿನ್ನ ಗುಡಾರವು ಕ್ಷೇಮವಾಗಿದೆ ಎಂದು ತಿಳಿದುಕೊಳ್ಳುವಿ, ನೀನು ನಿನ್ನ ನಿವಾಸ ಸ್ಥಾನ ವನ್ನು ತಿಳಿದುಕೊಳ್ಳುವಿ ಪಾಪಮಾಡುವದಿಲ್ಲ.

Cross references

ದ್ವಿತೀಯೋಪದೇಶಕಾಂಡ 28:6

ಬರುವಾಗ ನಿನಗೆ ಆಶೀರ್ವಾದ; ಹೊರಡುವಾಗ ನಿನಗೆ ಆಶೀರ್ವಾದ.

1 ಸಮುವೇಲ 30:3

ದಾವೀದನೂ ಅವನ ಜನರೂ ಆ ಪಟ್ಟಣಕ್ಕೆ ಬಂದಾಗ ಇಗೋ, ಅದು ಬೆಂಕಿಯಿಂದ ಸುಟ್ಟು ಹಾಕಲ್ಪಟ್ಟಿತ್ತು. ಇದಲ್ಲದೆ ಅವರ ಹೆಂಡತಿಯರೂ ಕುಮಾರರೂ ಕುಮಾರ್ತೆಯರೂ ಸೆರೆಯಾಗಿ ಒಯ್ಯಲ್ಪಟ್ಟಿದ್ದರು.

ಯೋಬ 8:6

ನೀನು ಶುದ್ಧನೂ ಯಥಾರ್ಥನೂ ಆಗಿದ್ದರೆ ನಿಶ್ಚಯ ವಾಗಿ ಈಗಲೇ ಆತನು ನಿನಗೋಸ್ಕರ ಎಚ್ಚತ್ತು ನಿನ್ನ ನೀತಿಯ ನಿವಾಸವನ್ನು ಅಭಿವೃದ್ಧಿಗೊಳಿಸುವನು.

ಯೋಬ 18:6

ಬೆಳಕು ಅವನ ಗುಡಾರದಲ್ಲಿ ಕತ್ತಲಾಗುವದು; ಅವನ ದೀಪವು ಅವನ ಕೂಡ ಆರಿ ಹೋಗುವದು

ಯೋಬ 18:15

ಅವನಿಗಿಲ್ಲದ ಅವನ ಗುಡಾರದಲ್ಲಿ ಅದು ವಾಸಿ ಸುವುದು; ಅವನ ನಿವಾಸದ ಮೇಲೆ ಗಂಧಕ ಚದುರಿ ಬರುವದು.

ಯೋಬ 18:21

ನಿಶ್ಚಯವಾಗಿ ದುಷ್ಟರ ಮನೆಗಳು ಇಂಥವುಗಳೇ; ದೇವರನ್ನು ತಿಳಿಯದವನ ಸ್ಥಳವು ಇದೇ.

ಯೋಬ 21:7

ದುಷ್ಟರು ಯಾಕೆ ಬದುಕಿ ಮುದುಕರಾಗಿ ಹೌದು, ತ್ರಾಣದಿಂದ ಬಲಗೊಳ್ಳುತ್ತಾರೆ?

ಕೀರ್ತನೆಗಳು 25:13

ಅವನ ಪ್ರಾಣವು ಸುಖದಲ್ಲಿ ಉಳುಕೊಳ್ಳುವದು; ಅವನ ಸಂತಾನವು ದೇಶವನ್ನು ಸ್ವಾಧೀನಮಾಡಿಕೊಳ್ಳುವದು.

ಕೀರ್ತನೆಗಳು 91:10

ಕೇಡು ನಿನ್ನನ್ನು ಮುಟ್ಟದು; ಯಾವ ವ್ಯಾಧಿಯೂ ನಿನ್ನ ನಿವಾಸಕ್ಕೆ ಸವಿಾಪಿಸದು.

ಕೀರ್ತನೆಗಳು 107:4

ಅರಣ್ಯದಲ್ಲಿಯೂ ಹಾದಿ ಇಲ್ಲದ ಕಾಡಿನಲ್ಲಿಯೂ ಅಲೆದು ವಾಸಿಸುವದಕ್ಕೆ ಪಟ್ಟಣವನ್ನು ಕಂಡುಕೊಳ್ಳದೆ,

ಕೀರ್ತನೆಗಳು 107:40

ಆತನು ಅಧಿಪತಿಗಳ ಮೇಲೆ ತಿರಸ್ಕಾರವನ್ನು ಹೊಯಿದು ಅವ ರನ್ನು ದಾರಿ ಇಲ್ಲದ ಕಾಡಿನಲ್ಲಿ ಅಲೆಯ ಮಾಡುತ್ತಾನೆ.

ಕೀರ್ತನೆಗಳು 112:3

ದ್ರವ್ಯವೂ ಐಶ್ವರ್ಯವೂ ಅವನ ಮನೆಯಲ್ಲಿ ಅವೆ; ಆತನ ನೀತಿಯು ಎಂದೆಂ ದಿಗೂ ನಿಲ್ಲುತ್ತದೆ.

ಕೀರ್ತನೆಗಳು 121:7

ಕರ್ತನು ಎಲ್ಲಾ ಕೇಡಿನಿಂದ ನಿನ್ನನೂ ನಿನ್ನ ಪ್ರಾಣವನ್ನೂ ಕಾಪಾಡುವನು.ಕರ್ತನು ನಿನ್ನ ಹೋಗೋಣವನ್ನೂ ಬರೋಣವನ್ನೂ ಇಂದಿನಿಂದ ಸದಾಕಾಲವೂ ಕಾಪಾಡುವನು.

ಯೆಶಾಯ 4:5

ಕರ್ತನು ಚೀಯೋನ್‌ ಪರ್ವತದ ಪ್ರತಿಯೊಂದು ವಾಸಿಸುವ ಸ್ಥಳದ ಮೇಲೂ ಅವಳ ಸಭೆಗಳ ಮೇಲೂ ಹಗಲಿನಲ್ಲಿ ಹೊಗೆಯನ್ನೂ ಮೇಘವನ್ನೂ ಇರುಳಿನಲ್ಲಿ ಪ್ರಜ್ವಲಿ ಸುವ ಅಗ್ನಿಪ್ರಕಾಶವನ್ನೂ ಉಂಟುಮಾಡುವನು; ಎಲ್ಲಾ ಮಹಿಮೆಯ ಮೇಲೆ ಕಾವಲಿರುವದು.ಹಗಲಲ್ಲಿ ಬಿಸಿಲಿಗೆ ನೆರಳಾಗುವ ಹಾಗೂ ಬಿರುಗಾಳಿಗೂ ಮಳೆಗೂ ಮರೆಯಾಗಲು ಆಶ್ರಯ ಸ್ಥಾನವಾಗಿ ಒಂದು ಗುಡಾರವಿರುವದು.

Interlinear

Choose Theme